ಎರಡು ಪ್ರತ್ಯೇಕ ಅಪಘಾತದಲ್ಲಿ ಮೂವರ ಸಾವು

Social Share

ಈರೋಡ್, ಜ.31- ಇಲ್ಲಿನ ಪೆರುಂದುರೈ ಎಂಬಲ್ಲಿ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚೆನ್ನಿಮಲೈನ ಮುಕಾಸಿ ಪಿದರಿಯೂರಿನ ಶಂಕರ್ (39) ಮತ್ತು ಅವರ ಪತ್ನಿ ಪುನಿತ (31) ಅವರು ತಮ್ಮ ಎರಡು ವರ್ಷದ ಮಗುವಿನೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಭಾನುವಾರ ದ್ವಿಚಕ್ರ ವಾಹನದಲ್ಲಿ ಸೇಲಂಗೆ ತೆರಳುತ್ತಿದ್ದರು.
ಜಿಲ್ಲೆಯ ಪೆರುಂದುರೈನ ವೆಲ್ಲಿಯಮಪಾಳ್ಯಂ ಗ್ರಾಮದ ಬಳಿ ಬರುತ್ತಿದ್ದಾಗ ಕೊಯಮತ್ತೂರು ಕಡೆಯಿಂದ ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಮೂವರೂ ರಸ್ತೆಗೆ ಬಿದ್ದಿದ್ದಾರೆ. ತಕ್ಷಣ ಗಾಯಾಳುಗಳನ್ನು ಸರ್ಕಾರಿ ಐಆರ್ಟಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ದಂಪತಿ ಮೃತಪಟ್ಟಿದ್ದಾರೆ. ಎರಡು ವರ್ಷದ ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಮತ್ತೊಂದು ಘಟನೆಯಲ್ಲಿ, ಭಾನುವಾರ ಮಧ್ಯಾಹ್ನ ಹೆದ್ದಾರಿಯಲ್ಲಿ 13 ವರ್ಷದ ಬಾಲಕ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಬಾಲಕ ತನ್ನ ತಾಯಿ ರಾಜಮ್ಮಲ್ (42) ಮತ್ತು 13 ವರ್ಷದ ಸೋದರಸಂಬಂಧಿಯೊಂದಿಗೆ ಕೊಯಮತ್ತೂರಿನಿಂದ ಸೇಲಂಗೆ ಮೊಪೆಡ್ ಹೋಗುತ್ತಿದ್ದ. ಪೇಠಂಪಾಳ್ಯಂ-ಕಂಜಿಕೋಯಿಲ್ ಬೈಪಾಸ್ ರಸ್ತೆ ಸಮೀಪಿಸುತ್ತಿದ್ದಾಗ ನಿಯಂತ್ರಣ ಕಳೆದುಕೊಂಡ ಮೊಪೆಡ್‍ ರಸ್ತೆ ಬದಿಯ ಕಬ್ಬಿಣದ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಮೂವರೂ ಕೆಳಗೆ ಬಿದ್ದಿದ್ದು, ನಂತರ ಚಿಕಿತ್ಸೆಗಾಗಿ ಸರ್ಕಾರಿ ಐಆರ್ಟಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ. ಇಬ್ಬರು ಬಾಲಕರು ಚಿಕಿತ್ಸೆ ಪಡೆಯುತ್ತಿದ್ದು, ರಾಜಮ್ಮಾಳ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಎರಡು ಪ್ರಕರಣಗಳನ್ನು ಪೆರುಂದೂರೈ ಪೊಲೀಸರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Articles You Might Like

Share This Article