ನವದೆಹಲಿ,ಡಿ.20- ಮುಂಬರುವ ಟಿ.20 ವಿಶ್ವಕಪ್‌ಗೆ ಭಾರತ ತಂಡವನ್ನು ಸೂರ್ಯ ಕುಮಾರ್ ಯಾದವ್ ಮುನ್ನಡೆಸುತ್ತಿದ್ದು, ಉಪನಾಯಕನಾಗಿ ಅಕ್ಷರ್ ಪಟೇಲ್ ಅವರನ್ನು ನೇಮಿಸಲಾಗಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಶುಭ್‌ಮನ್ ಗಿಲ್‌ಅವರನ್ನು ತಂಡದಲ್ಲಿ ಸೇರಿಸಲಾಗಿಲ್ಲ. ಇನ್ ಫಾರ್ಮ್ ಬ್ಯಾಟ್‌್ಸಮನ್ ಇಶಾನ್ ಕಿಶನ್ ಮತ್ತು ರಿಂಕು ಸಿಂಗ್ ಅವರು ತಂಡಕ್ಕೆ ಮರಳಿದ್ದಾರೆ.
ಶುಭ್‌ಮನ್ ಗಿಲ್ ಸದ್ಯ ಲಯ ಕಳೆದುಕೊಂಡಿದ್ದಾರೆ ಹಾಗಗಿ ಅವರನ್ನು ಪರಿಗಣಿಸಿಲ್ಲ ಎಂದು ಆಯ್ಕೆ ಸಮಿತಿ ಅಧ್ಯಕ್ಷ ಅಜೀತ್ ಅಗರ್‌ಕರ್ ತಿಳಿಸಿದ್ದಾರೆ.ತವರಿನಲ್ಲಿ ಪ್ರೇಕ್ಷಕರ ಮುಂದೆ ಆಡುವುದು ಒಳ್ಳೆಯ ಜವಾಬ್ದಾರಿ ಮತ್ತು ಸವಾಲು. ತಂಡ ಸಮತೋಲಿತವಾಗಿ ಕಾಣುತ್ತಿದೆ ಎಂದು ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ.
ಸಂಜು ಸ್ಯಾಮ್ಸನ್ ನಂತರ ಜಿತೇಶ್ ಶರ್ಮಾ ಅವರನ್ನು ಎರಡನೇ ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ.ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್ (ವಿಸಿ), ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಸಂಜು ಸ್ಯಾಮ್ಸನ್,ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ,ಇಶಾನ್ ಕಿಶಾನ್.
