ಬೆಂಗಳೂರು,ಡಿ.7- ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ವೇಳೆ ಉಂಟಾಗಿದ್ದ ಕಾಲ್ತುಳಿತ ಪ್ರಕರಣದಿಂದಾಗಿ ಹೊರರಾಜ್ಯಗಳಿಗೆ ಎತ್ತಂಗಡಿಯಾಗಿದ್ದ 2026ನೇ ಸಾಲಿನ ಪ್ರೀಮಿಯರ್ ಲೀಗ್ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಬೆಂಗಳೂರಿನಲ್ಲೇ ನಡೆಯುವ ಸಾಧ್ಯತೆ ಇದೆ.
ಈ ಹಿಂದೆ ಕೆಲವು ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು 2026ನೇ ಸಾಲಿನ ಆರ್‌ಸಿಬಿ ಪಂದ್ಯಗಳನ್ನು ಮಹಾರಾಷ್ಟ್ರದ ಪುಣೆನಗರಕ್ಕೆ ವರ್ಗಾಯಿಸಲು ಬಿಸಿಸಿಐ ಮುಂದಾಗಿತ್ತು. ಈ ಬಗ್ಗೆ ಅಭಿಮಾನಿಗಳು ತೀವ್ರ ಬೇಸರ ವ್ಯಕ್ತಪಡಿಸಿ ಆರ್‌ಸಿಬಿಯ ಪ್ರೀಮಿಯರ್‌ಲೀಗ್ ಪಂದ್ಯಗಳನ್ನು ಬೆಂಗಳೂರಿನಲ್ಲೇ ನಡೆಸಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದ್ದರು.
ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಮುಂದಿನ ಮಾರ್ಚ್-ಏಪ್ರಿಲ್ ತಿಂಗಳಿನಲ್ಲಿ ನಡೆಯಲಿರುವ ಆರ್‌ಸಿಬಿಯ ಎಲ್ಲಾ ಪಂದ್ಯಗಳು ಬೆಂಗಳೂರಿನಲ್ಲೇ ನಡೆಯಲಿವೆ. ಈ ಬಗ್ಗೆ ಸಂಬಂಧಪಟ್ಟವರ ಜೊತೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ.
ನಗರದಲ್ಲಿ ಕೆಎಸ್ಸಿಎ ಚುನಾವಣೆಯ ಮತದಾನದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕ್ರಿಕೆಟ್ ಲವರ್, ಆರ್ಸಿಬಿ ನಮ ಹೆಮೆ. ಯಾವುದೇ ಕಾರಣಕ್ಕೂ ನಮಿಂದ ಐಪಿಎಲ್ ಕೈ ತಪ್ಪಿಹೋಗುವುದಿಲ್ಲ. ಬೆಂಗಳೂರಿನಲ್ಲೇ ನಡೆಯುತ್ತದೆ ಎಂದರು.
ಬೆಂಗಳೂರಿನಲ್ಲಿ ಏನು ಅನಾಹುತ ಆಗಿದೆ, ಅದೆಲ್ಲವನ್ನು ತಪ್ಪಿಸಿ ಬೆಂಗಳೂರು ಗೌರವ ಉಳಿಸುವ ಕೆಲಸ ಮಾಡುತ್ತೇವೆ. ಕಾನೂನು ಚೌಕಟ್ಟಿನಲ್ಲಿ ಜನ ದಟ್ಟಣೆ ಗಮನದಲ್ಲಿಟ್ಟುಕೊಂಡು ಸ್ಟೇಡಿಯಂ ಬಳಸುತ್ತೇವೆ. ಇದಕ್ಕೆ ಪರ್ಯಾಯವಾಗಿ ಬೇರೆ ದೊಡ್ಡ ಸ್ಟೇಡಿಯಂ ಮಾಡುತ್ತೇವೆ ಎಂದು ಹೇಳಿದರು.
ಅಲ್ಲದೇ ಇನುಂದಕ್ಕೆ ಯಾವುದೇ ಐಪಿಎಲ್ ಬೆಂಗಳೂರಿನಿಂದ ಶಿಫ್‌್ಟ ಆಗುವುದಕ್ಕೆ ಬಿಡುವುದಿಲ್ಲ.ಇಲ್ಲೇ ನಡೆಸುತ್ತೇವೆ. ಇದು ಬೆಂಗಳೂರಿನ ಗೌರವ, ಅದನ್ನು ಕಾಪಾಡಿಕೊಳ್ಳುತ್ತೇವೆ. ಮುಂದಕ್ಕೆ ಏನೇನಿದೆ ಎಲ್ಲದಕ್ಕೂ ಅವಕಾಶ ಕೊಡುತ್ತೇವೆ ಎಂದು ಅವರು ಭರವಸೆ ನೀಡಿದರು.
ಪುಣೆಗೆ ಎತ್ತಂಗಡಿ ಆತಂಕ:
ಸಾಮಾನ್ಯವಾಗಿ ಚಾಂಪಿಯನ್ ಆಗಿ ಹೊರಹೊಮಿದ ಫ್ರಾಂಚೈಸಿಗಳ ತವರು ಕ್ರೀಡಾಂಗಣದಲ್ಲಿ ಮರು ವರ್ಷದ ಐಪಿಎಲ್ ಟೂರ್ನಿ ಉದ್ಘಾಟನೆ ನಡೆಯುತ್ತದೆ. ಹಾಗೆಯೇ 19ನೇ ಆವೃತ್ತಿಯ ಐಪಿಎಲ್ ಟೂರ್ನಿ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಿಂದಲೇ ಟೂರ್ನಿ ಎತ್ತಂಗಡಿ ಮಾಡಲಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ದುರಂತವೇ ಇದಕ್ಕೆ ಕಾರಣ ಎಂದು ಹೇಳಲಾಗಿತ್ತು.
ಪ್ರಸಕ್ತ ವರ್ಷದ ಜೂನ್ 4ರಂದು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಕ ಸಂಭವಿಸಿದ ಕಾಲ್ತುಳಿತ ದುರಂತವೇ ಟೂರ್ನಿ ಸ್ಥಳಾಂತರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಜೂನ್ 3ರ ರಾತ್ರಿ ಐಪಿಎಲ್ ಟ್ರೋಫಿ ಗೆದ್ದು 17 ವರ್ಷಗಳ ವನವಾಸಕ್ಕೆ ಅಂತ್ಯ ಹಾಡಿತ್ತು.
ಮರುದಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದ ದುರಂತ ನಡೆದು 11 ಜನ ಅಭಿಮಾನಿಗಳು ಪ್ರಾಣ ಕಳೆದುಕೊಂಡರು. ಈ ಘಟನೆಯಿಂದ ಸುರಕ್ಷತೆ ಬಗ್ಗೆ ಕಳವಳ ಹೆಚ್ಚಾಗಿತ್ತು.
ಚಿನ್ನಸ್ವಾಮಿ ಕ್ರೀಡಾಂಗಣವನ್ನು ದೊಡ್ಡ ಪ್ರಮಾಣದ ಕಾರ್ಯಕ್ರಮಗಳಿಗೆ ಸೂಕ್ತವಲ್ಲ ಮತ್ತು ಅಸುರಕ್ಷಿತ ಎಂದು ಕರ್ನಾಟಕ ಸರ್ಕಾರ ನೇಮಿಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಸಮಿತಿ ಹೇಳಿತ್ತು.
ಹೀಗಾಗಿ ಮುಂಬರುವ ಆವೃತ್ತಿಯಲ್ಲಿ ಆರ್‌ಸಿಬಿ ತವರು ಮೈದಾನದ ಎಲ್ಲಾ ಪಂದ್ಯಗಳನ್ನು ಪುಣೆಗೆ ಶಿಫ್‌್ಟ ಮಾಡಲು ಬಿಸಿಸಿಐ ಹಾಗೂ ಐಪಿಎಲ್ ಆಡಳಿತ ಮಂಡಳಿ ಚರ್ಚಿಸುತ್ತಿದೆ ಎಂದು ವರದಿಗಳು ತಿಳಿಸಿವೆ. ಆದರೆ ಈ ಬಗ್ಗೆ ಐಪಿಎಲ್ ಮಂಡಳಿಯಾಗಲಿ, ಬಿಸಿಸಿಐ ಆಗಲಿ ಅಧಿಕೃತ ಹೇಳಿಕೆ ನೀಡಿಲ್ಲ.
