ಜ.31ಕ್ಕೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ

Social Share

ಬೆಂಗಳೂರು, ಜ.11- ಬಡವರಿಗೆ, ಸಾಮಾನ್ಯ ವರ್ಗದ ಜನರಿಗೆ ಎಲ್ಲ ರೀತಿಯ ವೈದ್ಯಕೀಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಹೈಟೆಕ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗಿದ್ದು, ಜ.31ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಲಿದ್ದು, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಕೂಡ ಭಾಗಿಯಾಗಲಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಕಳೆದ 1988ರಲ್ಲಿ ಇದೇ ಸ್ಥಳದಲ್ಲಿ ರೆಫರಲ್ ಆಸ್ಪತ್ರೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಆದಿಚುಂಚನಗಿರಿ ಶ್ರೀಗಳಾದ ಬಾಲಗಂಗಾಧರನಾಥ ಸ್ವಾಮೀಜಿ ಅವರು ದೊಡ್ಡ ಆಸ್ಪತ್ರೆಯನ್ನು ಇಲ್ಲಿ ನಿರ್ಮಿಸಬಹುದಿತ್ತಲ್ಲ ಎಂದು ಹೇಳಿದ್ದರು. ಅವರ ಚಿಂತನೆಗೆ ಅನುಗುಣವಾಗಿ ಮತ್ತು ಅವರ ಆಶೀರ್ವಾದದಿಂದ ಈಗ ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆಗೆ ಕಾಲ ಕೂಡಿ ಬಂದಿದೆ ಎಂದರು.

ಮೆಟ್ರೋ ಪಿಲ್ಲರ್ ದುರಂತ : NCC ಕಂಪೆನಿ, 7 ಮಂದಿ ವಿರುದ್ಧ FIR

ಇಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರೊಂದಿಗೆ ಆಸ್ಪತ್ರೆ ವೀಕ್ಷಿಸಿ ಇಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ವಿಸ್ತೃತವಾಗಿ ಮಾಹಿತಿ ಪಡೆದರು.

ಸುಮಾರು 300 ಹಾಸಿಗೆಗಳ ಈ ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಚಿಕಿತ್ಸೆ ಸಿಗಲಿದೆ. ಈ ಭಾಗದ ಜನತೆಗೆ ಇದೊಂದು ವರದಾನವಾಗಿದೆ. ಸ್ವಾಮೀಜಿ ಅವರ ಆಸೆ ಈಡೇರಿಸಿದ ತೃಪ್ತಿ ನನಗಿದೆ ಎಂದು ಸೋಮಣ್ಣ ತಿಳಿಸಿದರು.

ನಾಲ್ಕು ಅಂತಸ್ತಿನ ಕಟ್ಟಡದಲ್ಲಿ 7 ಆಪರೇಷನ್ ಥೀಯಟರ್, ಹೆರಿಗೆ ಮತ್ತು ಸ್ತ್ರೀರೋಗ ವಿಭಾಗ, ನವಜಾತ ಶಿಶುಗಳ ತೀವ್ರ ನಿಗಾ ಘಟಕ, ಕಿಶೋರ ಸ್ವಸ್ಥ್ಯ ಕೇಂದ್ರ, ಹೃದ್ರೋಗ ತಪಾಸಣೆ(ಕಾರ್ಡಿಯಾಲಜಿ), ಫಿಜಿಯೋಥೆರಪಿ, ದಂತ ಒಪಿಜಿ, ನೇತ್ರ, ಕಿವಿ, ಮೂಗು, ಗಂಟಲು ತಪಾಸಣೆ, ಮೂಳೆ ಶಸ್ತ್ರ ಚಿಕಿತ್ಸೆ ಸೇರಿದಂತೆ ಟೆಲಿ ರೋಬೋಟ್ ಮತ್ತು ಟೆಲಿ ಮೆಡಿಸಿನ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.

ಕಂದರಕ್ಕೆ ಜಾರಿ ಬಿದ್ದು ಮೂವರು ಸೈನಿಕರು ಹುತಾತ್ಮ

ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅನೇಕ ಸಚಿವರು ಪಾಲ್ಗೊಳ್ಳುತ್ತಿದ್ದಾರೆ ಎಂದು ಇದೇ ವೇಳೆ ತಿಳಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥಗೌಡ, ಮಾಜಿ ಮಹಾನಗರ ಪಾಲಿಕೆ ಸದಸ್ಯರು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Sri Balagangadharanatha Swamiji, Super Speciality, Hospital,

Articles You Might Like

Share This Article