ಎಚ್‍ಡಿಕೆ ಹುಟ್ಟುಹಬ್ಬದ ಅಂಗವಾಗಿ ನಾಳೆ ಶ್ರೀನಿವಾಸ ಕಲ್ಯಾಣ ಮಹೋತ್ಸವ

Social Share

ಬೆಂಗಳೂರು, ಡಿ.15- ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ನಾಳೆ ರಾಮನಗರದಲ್ಲಿ ಶ್ರೀನಿವಾಸ ಕಲ್ಯಾಣ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.

ಕುಮಾರಸ್ವಾಮಿ ಅವರಿಗೆ 62 ವರ್ಷಗಳು ತುಂಬಿದ್ದು, ನಾಳೆ 63ನೇ ವರ್ಷಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಹೀಗಾಗಿ ರಾಮನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ತಿರುಪತಿ ತಿಮ್ಮಪ್ಪನ ದೇವಾಲಯದ ಮಾದರಿ ಗೋಪುರ ನಿರ್ಮಿಸಿ ಬೃಹತ್ ವೇದಿಕೆ ಸಿದ್ಧಪಡಿಸಲಾಗಿದೆ. ನಾಳೆ ಸಂಜೆ ಶ್ರೀನಿವಾಸ ಕಲ್ಯಾಣ ಮಹೋತ್ಸವ ಜರುಗಲಿದ್ದು, ಅಪಾರ ಸಂಖ್ಯೆಯ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ.

ಶ್ರೀನಿವಾಸ ಕಲ್ಯಾಣ ಮಹೋತ್ಸವದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಅವರ ಕುಟುಂಬದ ಸದಸ್ಯರು, ಪಕ್ಷದ ನಾಯಕರು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

136 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ : ಭವಿಷ್ಯ ನುಡಿದ ಡಿಕೆಶಿ

ನಿರಂತರ ಮಳೆಯಿಂದಾಗಿ ನಾಲ್ಕು ದಿನಗಳ ಕಾಲ ಮುಂದೂಡಲಾಗಿದ್ದ ಜೆಡಿಎಸ್‍ನ ಪಂಚರತ್ನ ರಥಯಾತ್ರೆ ಇಂದು ಸಂಜೆ ಮತ್ತೆ ಪ್ರಾರಂಭವಾಗಲಿದೆ. ರಾಮನಗರ ಜಿಲ್ಲೆಯ ಮಾಗಡಿ ವಿಧಾನಸಭಾ ಕ್ಷೇತ್ರದಿಂದ ಈ ಯಾತ್ರೆ ಆರಂಭವಾಗಲಿದೆ.

ನನಗೆ ನನ್ನದೇ ಆದ ಶಕ್ತಿ ಇದೆ : ಎಚ್ಚರಿಕೆ ಸಂದೇಶ ರವಾನಿಸಿದ ಬಿಎಸ್‌ವೈ

ನಾಳೆ ರಾಮನಗರ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ. ಹೀಗಾಗಿ ರಾಮನಗರದಲ್ಲೇ ಶ್ರೀನಿವಾಸ ಕಲ್ಯಾಣ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

Srinivasa Kalyana Mahotsava, Ramanagara, hd kumaraswamy,

Articles You Might Like

Share This Article