ಮಂಡ್ಯ ಸೆ.12-ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಸೆಪ್ಟೆಂಬರ್ 25 ರಿಂದ 28ರವರೆಗೆ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ದಸರಾ ಲೋಗೋವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಬಿಡುಗಡೆ ಮಾಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೋಗೋ ಬಿಡುಗಡೆ ಮಾಡಿದ ನಂತರ ಮಾತನಾಡಿದ ಸಚಿವರು, ಈ ಬಾರಿಯ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮದ ಉದ್ಘಾಟನೆಯನ್ನು ಖ್ಯಾತ ಚಲನಚಿತ್ರ ನಿರ್ದೇಶಕ ಹಾಗೂ ನಟ ಟಿ.ಎಸ್.ನಾಗಾಭರಣ ಅವರು ನೆರವೇರಿಸಲಿದ್ದಾರೆ ಎಂದರು.
ಈ ಬಾರಿಯ ವಿವಿಧ ಕಾರ್ಯಕ್ರಮಗಳನ್ನು ಉತ್ತಮವಾಗಿ ಸಂಘಟಿಸಲಾಗುವುದು. ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸೆ. 25 ರಂದು ಉದ್ಘಾಟನೆ ಹಾಗೂ 28 ರಂದು ಸಮಾರೋಪ ಸಮಾರಂಭ ನಡೆಯಲಿದೆ ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.