ಕಾಂಗ್ರೆಸ್‌ ಸಭೆಯಲ್ಲೇ ಹೃದಯಾಘಾತದಿಂದ ಮಾಜಿ ಶಾಸಕ ಶ್ರೀಶೈಲಪ್ಪ ಬಿದನೂರು ನಿಧನ

Social Share

ಬೆಂಗಳೂರು, ನ.25- ವಿಧಾನಸಭೆ ಚುನಾವಣೆಯಲ್ಲಿ ಸ್ರ್ಪಸಲು ಕಾಂಗ್ರೆಸ್‍ಗೆ ಅರ್ಜಿ ಸಲ್ಲಿಸಿದ್ದ ಆಕಾಂಕ್ಷಿಗಳ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಗದಗದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ರೋಣ ಮತ್ತು ಗದಗ ಕ್ಷೇತ್ರಗಳಿಂದ ಎರಡು ಬಾರಿ ಶ್ರೀಶೈಲಪ್ಪ ಶಾಸಕರಾಗಿ ಆಯ್ಕೆಯಾಗಿ ಕೆಲಸ ಮಾಡಿದ್ದರು. ಮೊದಲು ಬಿಜೆಪಿಯಲ್ಲಿದ್ದ ಅವರು 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗದಗ ಕ್ಷೇತ್ರದಿಂದ ಸ್ರ್ಪಸಲು ಅರ್ಜಿ ಸಲ್ಲಿಸಿದ್ದರು.

ಇಂದು ನಡೆದ ಆಕಾಂಕ್ಷಿಗಳ ಸಭೆಯಲ್ಲಿ ಭಾಗವಹಿಸಲು ಅವರು ಆಗಮಿಸಿದ್ದರು. ಆರಂಭದಲ್ಲೇ ವಾಂತಿಯಾಗಿದ್ದು ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಹೃದಯಾಘಾತದಿಂದ ಶ್ರೀಶೈಲಪ್ಪ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಸಭೆ ಆರಂಭಿಸುವ ಮುನ್ನ ಕಾಂಗ್ರೆಸ್ ನಾಯಕರು ಬಿದರೂರು ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಬಿದರೂರು ಅವರ ನಿಧನಕ್ಕೆ ಸಂತಾಪ ಸೂಚಿಸಿದರು.

ಕಾಂಗ್ರೆಸ್ ಸಭೆ ಮುಂದೂಡಿಕೆ:

ಶ್ರೀಶೈಲಪ್ಪ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಇದೇ ತಿಂಗಳು 27 ರಂದು ಭಾನುವಾರಕ್ಕೆ ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.

ಇಂದಿನ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಬಿದರೂರು ಅವರಿಗೆ ತೀವ್ರ ಸ್ವರೂಪದ ಹೃದಯಾಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣೆವೇ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ದುರಾದೃಷ್ಟವಶಾತ್ ಅವರು ಬದುಕುಳಿಯಲಿಲ್ಲ ಎಂದು ಅವರು ಹೇಳಿದರು.

ನಾನು ಮತ್ತು ಅವರು ಶಾಸಕರಾಗಿ ಹಲವು ಸಮಿತಿಗಳಲ್ಲಿ ಕೆಲಸ ಮಾಡಿದ್ದೇವೆ. ಇಂದು ಸಭೆಯಲ್ಲಿ ಭಾಗವಹಿಸಲು ಆಗಮಿಸಿದಾಗ ಅವರಿಗೆ ಹೃದಯಾಘಾತವಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಕೊನೆಯುಸಿರೆಳೆದಿದ್ದಾರೆ. ನಾನು, ನಮ್ಮ ಕಾರ್ಯಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಚರ್ಚೆ ಮಾಡಿ ಎಲ್ಲರ ಒಮ್ಮತದ ತೀರ್ಮಾನದ ಮೇರೆಗೆ ಈ ಸಭೆಯನ್ನು 27ಕ್ಕೆ ಮುಂದೂಡಲಾಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಜೂಮ್ ಮೂಲಕ ಇದೇ 27 ರಂದು ಸಭೆ ನಡೆಸಲಾಗುವುದು. ಆ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ. ಅಭ್ಯರ್ಥಿಯಾಗಲು ಅರ್ಜಿ ಹಾಕಿರುವವರಿಗೆ ಜೂಮ್ ಸಭೆ ಲಿಂಕ್ ಕಳುಹಿಸಲಾಗುವುದು. ನಿಮಗೆ ಕೊಡಬೇಕಾದ ಮಾರ್ಗದರ್ಶನವನ್ನು ನೀವುಗಳು ಕೊಟ್ಟಿರುವ ದೂರವಾಣಿ ಸಂಖ್ಯೆಗೆ ಶೇರ್ ಮಾಡುತ್ತೇವೆ.
ಮತದಾರರ ಪಟ್ಟಿಯನ್ನು ಜಿಲ್ಲಾ ಕಾಂಗ್ರೆಸ್ ಗೆ ನೀಡಲಾಗುವುದು. ನೀವುಗಳು ನಿಮ್ಮ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ತೆಗೆದುಕೊಂಡು ಹೋಗಿ ಅವುಗಳನ್ನು ಪರಿಶೀಲಿಸಬೇಕು. ಕೈಬಿಡಲಾಗಿರುವ ಹೆಸರನ್ನು ಮತ್ತೆ ಸೇರಿಸಿಕೊಳ್ಳುವಂತೆ ಮಾಡಬೇಕು ಎಂದು ಹೇಳಿದರು.

ಕುಡಿದು ಕೋರ್ಟ್‍ಗೆ ಬಂದ ಕಕ್ಷಿದಾರನಿಗೆ ದಂಡ

Srishailappa, Bidarur, collapses, Congress, party, meeting, passes away,

Articles You Might Like

Share This Article