Wednesday, November 5, 2025
Homeರಾಜ್ಯ2025-26ನೇ ಸಾಲಿನ SSLC ಮತ್ತು ದ್ವಿತೀಯ PUC ಪರೀಕ್ಷೆ-1 ಮತ್ತು ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟ

2025-26ನೇ ಸಾಲಿನ SSLC ಮತ್ತು ದ್ವಿತೀಯ PUC ಪರೀಕ್ಷೆ-1 ಮತ್ತು ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟ

SSLC and PUC Exam-1 and Exam-2 Schedule for the year 2025-26 announced

ಬೆಂಗಳೂರು,ನ.5- ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.

ವೇಳಾಪಟ್ಟಿಯನ್ನು ಸಂಬಂಧಿತ ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ಫಲಕದಲ್ಲಿ ಪ್ರಕಟಿಸಲು ಮಂಡಳಿ ಹೊರಡಿಸುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ-1 2026ರ ಮಾರ್ಚ್‌ 18ರಿಂದ ಏ.2ರವರೆಗೆ ನಡೆಯಲಿದೆ. ಮಾ.18ರಂದು ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್‌, ಸಂಸ್ಕೃತ ಸೇರಿದಂತೆ ಪ್ರಥಮ ಭಾಷೆ ಪರೀಕ್ಷೆ ನಡೆಯಲಿದೆ.

- Advertisement -

ಮಾ.23ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ, ಮಾ.25ರಂದು ದ್ವಿತೀಯ ಭಾಷೆ ಇಂಗ್ಲೀಷ್‌, ಕನ್ನಡ, ಮಾ.28ರಂದು ಗಣಿತ, ಸಮಾಜಶಾಸ್ತ್ರ, ಮಾ.30ರಂದು ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ.
ಏ.1ರಂದು ಜಿಟಿಎಸ್‌‍ ವಿಷಯಗಳು ಹಾಗೂ ಅರ್ಥಶಾಸ್ತ್ರ, ಏ.2ರಂದು ಸಮಾಜವಿಜ್ಞಾನ ಪರೀಕ್ಷೆ ನಡೆಯಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-1: ಫೆಬ್ರವರಿ 28ರಿಂದ ಮಾ.17ರವರೆಗೆ ನಡೆಯಲಿದೆ. ಫೆ.28ರಂದು ಕನ್ನಡ, ಅರೆಬಿಕ್‌ ಭಾಷಾ ವಿಷಯಗಳು, ಮಾ.2ರಂದು ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಶಾಸ್ತ್ರ, ಮಾ.3ರಂದು ಇಂಗ್ಲೀಷ್‌, ಮಾ.4ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌ ಭಾಷಾ ಪರೀಕ್ಷೆಗಳು ನಡೆಯಲಿವೆ.

ಮಾ.5ರಂದು ಇತಿಹಾಸ, ಮಾ.6ರಂದು ಭೌತಶಾಸ್ತ್ರ, ಮಾ.7ರಂದು ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭ ಶಾಸ್ತ್ರ, ಮಾ.9ರಂದು ರಸಾಯನಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ, ಮಾ.10ರಂದು ಅರ್ಥಶಾಸ್ತ್ರ, ಮಾ.11ರಂದು ತರ್ಕಶಾಸ್ತ್ರ, ವಿದ್ಯುನಾನ ಶಾಸ್ತ್ರ, ಗೃಹ ವಿಜ್ಞಾನ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಮಾ.12ರಂದು ಹಿಂದಿ, ಮಾ.13ರಂದು ರಾಜ್ಯಶಾಸ್ತ್ರ, ಮಾ.14ರಂದು ಲೆಕ್ಕಶಾಸ್ತ್ರ, ಗಣಿತ, ಮಾ.16ರಂದು ಸಮಾಜ ಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ, ಮಾ.17ರಂದು ಹಿಂದೂಸ್ತಾನಿ ಸಂಗೀತ, ಎಲೆಕ್ಟ್ರಾನಿಕ್‌್ಸ ಮತ್ತು ಯಂತ್ರಾಂಶ, ಉಡುಪುಗಳ ತಯಾರಿಕೆ ಮತ್ತು ಗೃಹೋಪಯೋಗಿ ವಸ್ತುಗಳು, ಮಾಹಿತಿ ತಂತ್ರಜ್ಞಾನ, ರಿಟೈಲ್‌, ಆಟೋಮೊಬೈಲ್‌, ಆರೋಗ್ಯ ರಕ್ಷಣೆ, ಬ್ಯೂಟಿ ಅಂಡ್‌ ವೆಲ್‌ನೆಸ್‌‍ ಪರೀಕ್ಷೆಗಳನ್ನು ನಿಗದಿಪಡಿಸಲಾಗಿದೆ.

ಮೇ 18ರಿಂದ ಮೇ 25ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಹಾಗೂ ಏಪ್ರಿಲ್‌ 25ರಿಂದ ಮೇ 9ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದೆ ಎಂದು ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ.

- Advertisement -
RELATED ARTICLES

Latest News