Friday, December 27, 2024
Homeರಾಜ್ಯಎಸ್‌‍ಎಸ್‌‍ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1ರ ವೇಳಾಪಟ್ಟಿ ಪ್ರಕಟಣೆ

ಎಸ್‌‍ಎಸ್‌‍ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1ರ ವೇಳಾಪಟ್ಟಿ ಪ್ರಕಟಣೆ

SSLC and PUC exam schedule announced

ಬೆಂಗಳೂರು,ಡಿ.2- ಪ್ರಸಕ್ತ ಸಾಲಿನ ಎಸ್‌‍ಎಸ್‌‍ಎಲ್‌ಸಿ ಮತ್ತು ದ್ವಿತೀಯ ಪರೀಕ್ಷೆ-1ರ ಮತ್ತು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆಯು 2025ರ ಮಾ.20ರ ಏಪ್ರಿಲ್‌ 2ವರೆಗೆ ನಡೆಯಲಿದೆ. ದ್ವಿತೀಯ ಪಿಯುಸಿ ಮಾ.1ರಿಂದ ಮಾ.19ರವರೆಗೆ ನಡೆಯಲಿದೆ. ಇಂದಿನಿಂದ ಡಿ.16ರವರೆಗೆ ಎಸ್‌‍ಎಸ್‌‍ಎಲ್‌ಸಿ ಮತ್ತುದ್ವಿತೀಯ ಪಿಯುಸಿ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆ 1ರ ತಾತ್ಕಾಲಿಕ ವೇಳಾಪಟ್ಟಿ :ಮಾ.20ರಂದು ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್‌, ಇಂಗ್ಲಿಷ್‌(ಎನ್‌ಸಿಇಆರ್‌ಟಿ), ಸಂಸ್ಕೃತ ಹಾಗೂ ಮಾ.22ರಂದು ಸಮಾಜವಿಜ್ಞಾನ, ಮಾ.24ರಂದು ದ್ವಿತೀಯ ಭಾಷೆ ಕನ್ನಡ, ಇಂಗ್ಲೀಷ್‌ ಪರೀಕ್ಷೆಗಳು ಜರುಗಲಿವೆ.

ಮಾ.27ರಂದು ತೃತೀಯ ಭಾಷೆ ಹಿಂದಿ(ಎನ್‌ಸಿಇಆರ್‌ಟಿ), ಹಿಂದಿ, ಕನ್ನಡ, ಇಂಗ್ಲೀಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮಾಹಿತಿ ತಂತ್ರಜ್ಞಾನ, ರೀಟೇಲ್‌ , ಆಟೋಮೊಬೈಲ್‌ , ಬ್ಯೂಟಿ ಅಂಡ್‌ ವೆಲ್‌ನೆಸ್‌‍, ಅಪರೆಲ್‌ ಮೇಡ್‌ ಆಪ್ಸ್ ಮತ್ತು ಹೋಮ್‌ ಫರ್ನಿಸಿಂಗ್‌, ಎಲೆಕ್ಟ್ರಾನಿಕ್ಸ್ ಅಂಡ್‌ ಹಾರ್ಡ್‌ವೇರ್‌ ಪರೀಕ್ಷೆಗಳು ನಡೆಯಲಿವೆ.

ಏ.1ರಂದು ಎಲಿಮೆಂಟ್‌್ಸ ಆಫ್‌ ಎಲೆಕ್ಟ್ರಿಕಲ್‌ ಇಂಜಿನಿಯರಿಂಗ್‌-4, ಎಲಿಮೆಂಟ್ಸ್ ಆಫ್‌ ಮೆಕಾನಿಕಲ್‌ ಇಂಜಿನಿಯರಿಂಗ್‌-4, ಎಲಿಮೆಂಟ್ಸ್ ಆಫ್‌ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್‌-4, ಪ್ರೋಗ್ರಾಮಿಂಗ್‌ ಇನ್‌ ಎನ್‌ಎಸ್‌‍ಐ ಸಿ, ಅರ್ಥಶಾಸ್ತ್ರ. ಏ.2ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ ಪರೀಕ್ಷೆಗಳು ನಡೆಯಲಿವೆ ಎಂದು ಮಂಡಳಿ ತಿಳಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಈ ಕೆಳಕಂಡಂತಿದೆ.
ಮಾ.1ರಂದು ಕನ್ನಡ, ಅರೇಬಿಕ್‌, ಮಾ.3ರಂದು ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಮಾ.4ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ,ಉರ್ದು, ಸಂಸ್ಕೃತ, ಫ್ರೆಂಚ್‌, ಮಾ.5ರಂದು ರಾಜ್ಯ ಶಾಸ್ತ್ರ, ಸಂಖ್ಯಾ ಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

ಮಾ.7ರಂದು ಇತಿಹಾಸ, ಭೌತಶಾಸ್ತ್ರ, ಮಾ.8ರಂದು ಹಿಂದಿ, ಮಾ.10ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ, ಮಾ.12ರಂದು ಮನಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ, ಮಾ.13 ಅರ್ಥ ಶಾಸ್ತ್ರ, ಮಾ.15 ಇಂಗ್ಲೀಷ್‌, ಮಾ.17 ಭೂಗೋಳ ಶಾಸ್ತ್ರ, ಜೀವಶಾಸ್ತ್ರ, ಮಾ.18 ಸಮಾಜಶಾಸ್ತ್ರ, ವಿದ್ಯುನಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದು ಮಂಡಳಿ ತಿಳಿಸಿದೆ.

ಈ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿವೆ. ಬಹುತೇಕ ಎಲ್ಲಾ ವಿಷಯಗಳಿಗೆ ಒಟ್ಟು 80 ಅಂಕಗಳನ್ನು ನಿಗದಿಪಡಿಸಲಾಗಿದೆ. ಆದರೆ ಭೌತಶಾಸ್ತ್ರ, ಗೃಹವಿಜ್ಞಾನ, ರಸಾಯನ ಶಾಸ್ತ್ರ, ಜೀವಶಾಸ್ತ್ರ, ವಿದ್ಯುನಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆಗಳಿಗೆ 70 ಅಂಕಗಳನ್ನು ನಿಗದಿಪಡಿಸಲಾಗಿದೆ.

ಹಿಂದೂಸ್ತಾನಿ ಸಂಗೀತಕ್ಕೆ 40 ಅಂಕಗಳು, ಮಾಹಿತಿ ತಂತ್ರಜ್ಞಾನ, ರಿಟೇಲ್‌, ಆಟೋಮೊಬೈಲ್‌, ಹೆಲ್ತ್‌ ಕೇರ್‌, ಬ್ಯೂಟಿ ಅಂಡ್‌ ವೆಲ್‌ನೆಸ್‌‍ ತಲಾ 60 ಅಂಕಗಳನ್ನು ನಿಗದಿಪಡಿಸಲಾಗಿದೆ. ಮಾ.19ರಂದು ಬೆಳಗ್ಗೆ 10ರಿಂದ 12.15ರವರೆಗೆ ಪರೀಕ್ಷೆಗಳು ನಡೆಯಲಿವೆ.

RELATED ARTICLES

Latest News