Friday, November 22, 2024
Homeರಾಜ್ಯಮೇ.10ರಂದು SSLC ರಿಸಲ್ಟ್

ಮೇ.10ರಂದು SSLC ರಿಸಲ್ಟ್

ಬೆಂಗಳೂರು,ಏ.30- ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ಮೇ 10ರಂದು ಪ್ರಕಟವಾಗುವ ಸಂಭವವಿದೆ. ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು ತೆಗೆದುಕೊಂಡಿದ್ದು ಎಲ್ಲವೂ ನಿರೀಕ್ಷೆಯಂತೆ ನಡೆದು ಮೇ 10ರಂದು ಫಲಿತಾಂಶ ಹೊರಬೀಳಲಿದೆ.

2024ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು 4.28 ಲಕ್ಷ ಬಾಲಕಿಯರು ಸೇರಿದ್ದರು.

ಇನ್ನು ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು 41,375 ರೀ ಎಕ್ಸಾಮ್‌ ಬರೆದಿದ್ದ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ. ಹೀಗಾಗಿ ಇವರೆಲ್ಲರ ಭವಿಷ್ಯ ಮೇ 10 ರಂದು ನಿರ್ಧಾರ ಆಗಲಿದೆ.

ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳು ಫಲಿತಾಂಶ ನೋಡಲು ಮೊದಲಿಗೆ ತಮ್ಮ ರಿಜಿಸ್ಟರ್‌ ನಂಬರ್‌ / ರೋಲ್‌ ನಂಬರ್‌ ಹೊಂದಿರಬೇಕು. ವಿದ್ಯಾರ್ಥಿಗಳು, ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್‌ ನಂಬರ್‌ (ನೋಂದಣಿ ಸಂಖ್ಯೆ) ಮೂಲಕವೇ ಕರ್ನಾಟಕ ಶಾಲೆ ಪರೀಕ್ಷೆ ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು.

kseab.karnataka.gov.inಗೆ ಭೇಟಿ ನೀಡಬಹುದು. ಈ ಮೂಲಕವಾಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಮೇ 10 ರಂದು ನಿರ್ಧಾರ ಆಗಲಿದೆ. ಹಾಗೇ ಫಲಿತಾಂಶವನ್ನ ವೀಕ್ಷಿಸಲು ಕೆಲವು ಕಡೆ ವಿಶೇಷ ವ್ಯವಸ್ಥೆ ಮಾಡುವ ನಿರೀಕ್ಷೆ ಇದೆ.

RELATED ARTICLES

Latest News