ಬೆಂಗಳೂರು,ಜ.30- ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತಹತ್ಯೆಗೆ ಶರಣಾಗಿರುವ ಘಟನೆ ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿ ನಡೆದಿದೆ.
ಶ್ರೀನಗರದ ನಿವಾಸಿ ಭೂಮಿಕಾ(15) ಆತಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಭೂಮಿಕಾ ಅವರ ಪೋಷಕರಿಗೆ ಇಬ್ಬರು ಮಕ್ಕಳು. ಒಂದು ಹೆಣ್ಣು ಹಾಗೂ ಒಂದು ಗಂಡು. ಭೂಮಿಕಾ ಉತ್ತಮ ವ್ಯಾಸಂಗ ಮಾಡುತ್ತಿದ್ದಳು.
ಪ್ರಿಪೆಟ್ರಿ ಪರೀಕ್ಷೆ ನಡೆಯುತ್ತಿದ್ದು, ನಿನ್ನೆ ರಾತ್ರಿ ಊಟ ಮಾಡಿ ಓದಿಕೊಳ್ಳುವುದಾಗಿ ಹೇಳಿ ರೂಂಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾಳೆ. ಆದರೆ ಬೆಳಗಾಗುವಷ್ಟರಲ್ಲಿ ಸೀರೆಯಿಂದ ಫ್ಯಾನಿಗೆ ನೇಣು ಬಿಗಿದುಕೊಂಡು ಆತಹತ್ಯೆಗೆ ಶರಣಾಗಿದ್ದಾಳೆ.
ಬೆಳಗಿನ ಜಾವ ಪೋಷಕರು ಎದ್ದು ನೋಡಿದಾಗ ರೂಂ ಬಾಗಿಲು ಹಾಕಿಯೇ ಇತ್ತು. ಹಾಗಾಗಿ ಬಾಗಿಲು ತಟ್ಟಿದ್ದಾರೆ. ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಗಾಬರಿಯಾಗಿ ಕಿಟಕಿ ಮೂಲಕ ನೋಡಿದಾಗ ಭೂಮಿಕಾ ಆತಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಹನುಮಂತನಗರ ಠಾಣೆ ಪೊಲೀಸರು ಬಾಗಿಲು ಒಡೆದು ಒಳಗೆ ಹೋಗಿ ಪರಿಶೀಲಿಸಿದ್ದಾರೆ.
ಭೂಮಿಕಾ ಆತಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಆತಹತ್ಯೆಗೂ ಮುನ್ನ ಏನಾದರೂ ಡೆತ್ ನೋಟ್ ಬರೆದಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.