ಇಂದಿನಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ, ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ
ಬೆಂಗಳೂರು, ಜೂ.21- ಇಂದಿನಿಂದ ಜೂ.28ರವರೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಕೇಂದ್ರಗಳ 200 ಮೀಟರ್ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ನಗರದ ಪೊಲೀಸ್ ಆಯುಕ್ತರಾದ ಟಿ.ಸುನೀಲ್ಕುಮಾರ್ ಆದೇಶ ಹೊರಡಿಸಿದ್ದಾರೆ. ಪರೀಕ್ಷೆ ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸುವ ಸಲುವಾಗಿ ಪರೀಕ್ಷೆ ಕೇಂದ್ರಗಳ ಸುತ್ತಲೂ ಪರೀಕ್ಷೆ ನಡೆಯುವ ದಿನಗಳಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚುವಂತೆ ಆದೇಶದಲ್ಲಿ ಸೂಚಿಸಿದ್ದಾರೆ.
Facebook Comments