ಚಿಕ್ಕಮಂಗಳೂರು ಜಿಲ್ಲೆಯ ಕುಗ್ರಾಮದ ವಿದ್ಯಾರ್ಥಿನಿ SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ

Spread the love

ಚಿಕ್ಕಮಂಗಳೂರು ; ಕೊಪ್ಪ ತಾಲೂಕಿನ ಕಮ್ಮರಡಿ ಸರ್ಕಾರೀ ಪ್ರೌಢಶಾಲಾಯ ವಿದ್ಯಾರ್ಥಿನಿ ಆಕೃತಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಕೊಪ್ಪ ತಾಲೂಕಿನ ಸಕ್ರೆಬೈಲು ಮೂಲದ ಕೃಷಿಕ ಕುಟುಂಬದ ಸತೀಶ, ನಯನ ದಂಪತಿಯ ಪುತ್ರಿ ಆಕೃತಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಎಂದಿನಂತೆ ಬಾಲಕಿಯರೇ ಈ ಬಾರಿಯೂ ಮೇಲುಗೈ ಸಾಸಿದ್ದು, ಈ ಬಾರಿ ಪೂರ್ಣ ಪ್ರಮಾಣದ ಪರೀಕ್ಷೆ ನಡೆಸಿದ್ದು, 8,73,859 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, 8,53,436 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇ.85.63ರಷ್ಟು ಫಲಿತಾಂಶ ಬಂದಿದೆ. ಕಳೆದ 10 ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಹೆಚ್ಚು ಫಲಿತಾಂಶ ಬಂದಿದೆ.

Facebook Comments