ನ.1ರಿಂದಲೇ ಪೂರ್ವಾನ್ವಯವಾಗುವಂತೆ ಮೀಸಲಾತಿ ಹೆಚ್ಚಳ ಜಾರಿ

Social Share

ಬೆಂಗಳೂರು,ನ.18- ಪರಿಶಿಷ್ಟ ವರ್ಗಗಳ ಮೀಸಲಾತಿ ಹೆಚ್ಚಳದ ಸುಗ್ರೀವಾಜ್ಞೆಯು ಶಿಕ್ಷಣ ಸಂಸ್ಥೆಗಳಲ್ಲಿ ನವೆಂಬರ್ 1ರಿಂದಲೇ ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಆದೇಶಿಸಿದೆ.

ಸುಗ್ರೀವಾಜ್ಞೆ ಪ್ರಕಾರ, ಮೀಸಲಾತಿ ಪ್ರಮಾಣವನ್ನು ಪರಿಶಿಷ್ಟ ಜಾತಿಗೆ ಶೇ.15ರಿಂದ ಶೇ.17% ಕ್ಕೆ ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ. 3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿದೆ.

ರಾಜ್ಯ ಸರ್ಕಾರದಿಂದ ನಿರ್ವಹಿಸಲಾಗುತ್ತಿರುವ ಅಥವಾ ರಾಜ್ಯ ನಿಧಿಗಳಿಂದ ಅನುದಾನ ಪಡೆಯುತ್ತಿರುವ ಯಾವುದೇ ಶಾಲೆ, ಕಾಲೇಜು ಅಥವಾ ಇತರೆ ಶೈಕ್ಷಣಿಕ ಸಂಸ್ಥೆಗಳಿಗೆ ಈ ಮೀಸಲಾತಿ ಹೆಚ್ಚಳ ಅನ್ವಯ ವಾಗಲಿದೆ.

ಕಾಂಗ್ರೆಸ್‍ ಆರೋಪದಲ್ಲಿ ಎಳ್ಳಷ್ಟು ಸತ್ಯಾಂಶವಿಲ್ಲ: ಬಿಎಸ್‌ವೈ

ಶೈಕ್ಷಣಿಕ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಯಲ್ಲಿ ಮೀಸಲಾತಿ ಪ್ರಮಾಣವನ್ನು ಅನುಷ್ಠಾನಗೊಳಿಸಬೇಕು. ಆದರೆ, 01-11-2022 ಮುಂಚೆ ಈಗಾಗಲೇ ಪ್ರವೇಶ ಪ್ರಕ್ರಿಯೆ ಪೂರ್ಣಗೊಂಡಿದ್ದಲ್ಲಿ ಈ ಆದೇಶ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ನಿಯಂತ್ರಣ ತಪ್ಪಿ ಟ್ರಕ್‍ಗೆ ಅಪ್ಪಳಿಸಿದ ಕಾರು, 5 ಸಾವು

ScheduledCastes, #ScheduledTribes, #reservation, #increase, #implemented, #November1,

Articles You Might Like

Share This Article