Wednesday, May 8, 2024
Homeರಾಜಕೀಯಸೋಮಶೇಖರ್ ಅಸಮಾಧಾನ ತಣಿಸುವ ಜವಾಬ್ದಾರಿ ಬಿಎಸ್‍ವೈ ಹೆಗಲಿಗೆ

ಸೋಮಶೇಖರ್ ಅಸಮಾಧಾನ ತಣಿಸುವ ಜವಾಬ್ದಾರಿ ಬಿಎಸ್‍ವೈ ಹೆಗಲಿಗೆ

ಬೆಂಗಳೂರು, ಅ.8-ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದನ್ನು ಬರಂಗವಾಗಿ ವಿರೋಧಿಸಿದ ಮಾಜಿ ಸಚಿವ, ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿಗೆ ಕಂಟಕವಾಗಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿಗೆ ಸೋಮಶೇಖರ್ ಅಪಸ್ವರ ಎತ್ತಿದ ಬೆನ್ನಲ್ಲೇ, ಇನ್ನು ಮುಂದೆ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುವ ಹೇಳಿಕೆ ನೀಡದಂತೆ ಸೋಮಶೇಖರ್ ಅವರಿಗೆ ಮನವರಿಕೆ ಮಾಡಿಕೊಡುವ ಮತ್ತು ಸೂಚನೆ ನೀಡುವ ಜವಾಬ್ದಾರಿಯನ್ನು ಬಿಜೆಪಿ ರಾಜ್ಯ ಶಿಸ್ತು ಸಮಿತಿಯು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೀಡಿದೆ.

2018 ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ 17 ವಿರೋಧ ಪಕ್ಷದ ಶಾಸಕರಲ್ಲಿ ಸೋಮಶೇಖರ್ ಅವರು ಯಡಿಯೂರಪ್ಪ ಅವರಿಗೆ ಸರ್ಕಾರ ರಚಿಸಲು ಸಹಾಯ ಮಾಡಿದ್ದರು. ಸೋಮಶೇಖರ್ ಅವರು ಉಪ ಚುನಾವಣೆಯಲ್ಲಿ ಗೆದ್ದು ಮಾಸ್ ಲೀಡರ್ ಆಗಿ ತಮ್ಮ ಸಾಮಥ್ರ್ಯವನ್ನು ಸಾಬೀತುಪಡಿಸಿದ್ದಾರೆ. ಆದ್ದರಿಂದ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ವಿರುದ್ಧವಾಗಿ ಹೋದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಬಿಜೆಪಿ ಹಿಂದೇಟು ಹಾಕಿದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವ ಸೋಮಶೇಖರ್, ಕಾಂಗ್ರೆಸ್ ಸೇರುವ ಸುಳಿವು ನೀಡಿದ್ದರು. ಹೀಗಾಗಿ ರಾಜ್ಯ ಬಿಜೆಪಿ ನಾಯಕರು ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

`ನಾವು ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರಬೇಕು. ಸೋಮಶೇಖರ್ ಕೂಡ ಇದಕ್ಕೆ ಹೊರತಾಗಿಲ್ಲ. ಒಂದು ವೇಳೆ ಅವರು ಬಯಸಿದರೇ ಪಕ್ಷ ತೊರೆದು ಸಂತೋಷವಾಗಿರುವ ಪಕ್ಷಕ್ಕೆ ಸೇರಲಿ ಎಂದು ಮಾಜಿ ಸಚಿವ, ಬಿಜೆಪಿ ರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸೋಮಶೇಖರ್ ಯಾವಾಗಲೂ ತಮ್ಮ ನಿಷ್ಠೆಯನ್ನು ಬದಲಾಯಿಸುತ್ತಿದ್ದಾರೆ ಎಂದು ಮತ್ತೊಬ್ಬ ಹಿರಿಯ ನಾಯಕ ಸಿ.ಟಿ. ರವಿ ಟೀಕಿಸಿದ್ದಾರೆ. ಅಕಾರ ಇಲ್ಲವೆಂದರೆ ಕೆಲವರಿಗೆ ಉಸಿರು ಕಟ್ಟುತ್ತೆ, ಎಸಿ ರೂಮ್‍ನಲ್ಲಿದ್ದರೆ ವಾತಾವರಣ ಚೆನ್ನಾಗಿರುತ್ತದೆ ಎಂದು ಮಾಜಿ ಶಾಸಕ ಸಿ.ಟಿ. ರವಿ ಹೇಳಿದ್ದಾರೆ. ಇವರಿಗೆ ಯಾವಾಗಲೂ ಅಕಾರದಲ್ಲಿರಬೇಕು.

ಆಗ ಎಲ್ಲವೂ ಚೆನ್ನಾಗಿರುತ್ತದೆ. ಬಿಜೆಪಿಯಲ್ಲಿ ಉಸಿರುಗಟ್ಟಿಸುವ ವಾತಾವರಣವಿದೆ ಎಂಬ ಮಾಜಿ ಸಚಿವ ಎಸ್‍ಟಿ ಸೋಮಶೇಖರ್ ಹೇಳಿಕೆಗೆ ಸಿ.ಟಿ. ರವಿ ತಿರುಗೇಟು ನೀಡಿದ್ದಾರೆ. ಮೈತ್ರಿ ಕುರಿತು ವರಿಷ್ಠರ ನಿರ್ಧಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯವನ್ನು ಸೋಮಶೇಖರ್ ತೆಗೆದುಕೊಂಡಿದ್ದಾರೆ ಎಂದು ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಸೋಮಶೇಖರ್ ಹೇಳಿದ್ದೇನು? ಮೇಲಿನವರು ಸುಲಭವಾಗಿ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ.

ಅಂಡಮಾನ್ ಸಮುದ್ರದಲ್ಲಿ ಭೂಕಂಪ

ಕೆಳಹಂತದ ಕಾರ್ಯಕರ್ತರು ಹಿಂಸೆ ಅನುಭವಿಸುತ್ತಾರೆ. ಉಸಿರುಕಟ್ಟುವ ವಾತಾವರಣ ಸೃಷ್ಟಿಯಾಗಿದೆ. ಮೈತ್ರಿಗೆ ವೈಯಕ್ತಿಕವಾಗಿ ನನ್ನ ವಿರೋಧದೆ. ಅಧಿಕೃತ ಘೋಷಣೆ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳುವೆ ಎಂದಿದ್ದರು. ಮೈತ್ರಿ ಅಧಿಕೃತವಾಗಿ ಘೋಷಣೆಯಾದ ಬಳಿಕ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ಶಾಸಕ ಸೋಮಶೇಖರ್, ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಜೆಡಿಎಸ್ ವಿರುದ್ಧ ಆರು ವಿಧಾನಸಭಾ ಚುನಾವಣೆಗಳಲ್ಲಿ ಹೋರಾಡಿದ್ದೇನೆ. ಬಿಜೆಪಿ ಮತ್ತು ಜೆಡಿಎಸ್‍ನ ಹಲವು ಶಾಸಕರು ಮೈತ್ರಿಗೆ ವಿರುದ್ಧವಾಗಿದ್ದರೂ ಬರಂಗವಾಗಿ ಮಾತನಾಡುತ್ತಿಲ್ಲ ಎಂದು ಸ್ವಪಕ್ಷೀಯರ ವಿರುದ್ದವೇ ಗುಡುಗಿದ್ದರು.

ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಮೊದಲಿನಿಂದಲೂ ಪರಸ್ಪರ ರುದ್ಧವಾಗಿ ಇದ್ದವರು. ಪಕ್ಷದ ಕಾರ್ಯಕರ್ತರು ಅನುಭಸಿದ ಕಿರುಕುಳವನ್ನು ಹತ್ತಿರದಿಂದ ಕಂಡಿದ್ದೇನೆ. ಪಕ್ಷಗಳು ಒಂದಾದರೂ, ಕಾರ್ಯಕರ್ತರ ಮಧ್ಯೆ ಹೊಂದಾಣಿಕೆ ಅಸಾಧ್ಯವಾಗಿದೆ. ಮೈತ್ರಿ ವಿರೋಧಿಸಿ ಈಗಾಗಲೇ ಹಲವು ಕಾರ್ಯಕರ್ತರು, ಬೆಂಬಲಿಗರು ಕಾಂಗ್ರೆಸ್ ಸೇರುವ ನಿರ್ಧಾರ ಮಾಡಿದ್ದಾರೆ. ಇದು ನನ್ನ ಕ್ಷೇತ್ರದ ಸಮಸ್ಯೆ ಮಾತ್ರವಲ್ಲ. ಇತರೆ ಶಾಸಕರೂ ತಮ್ಮ ಕ್ಷೇತ್ರಗಳಲ್ಲಿ ಇಂತಹ ಸಮಸ್ಯೆ ಎದುರಿಸುತ್ತಿದ್ದಾರೆ’ ಎಂದು ಹೇಳಿದ್ದರು.

ಪಟಾಕಿ ದುರಂತ : ಉನ್ನತ ಮಟ್ಟದ ತನಿಖೆಗೆ ಹೆಚ್‌ಡಿಕೆ ಆಗ್ರಹ

`ನಾನೂ ಸಹ 20 ವರ್ಷಗಳಿಂದ ಜೆಡಿಎಸ್ ಜತೆ ಸೆಣಸಾಟ ನಡೆಸಿಕೊಂಡು ಬಂದಿದ್ದೇನೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮಧ್ಯೆ ಹೊಂದಾಣಿಕೆಯಾದರೂ, ಕಾರ್ಯಕರ್ತರು ಪರಸ್ಪರ ಮತ ಚಲಾಯಿಸಲಿಲ್ಲ. ಇದರಿಂದ ಮೈತ್ರಿ ಎಷ್ಟು ಸ್ಥಾನದಲ್ಲಿ ಗೆಲುವು ಪಡೆಯಿತು ಎನ್ನುವುದು ಎಲ್ಲರಿಗೂ ಗೊತ್ತಿದೆ’ ಎಂದು ಗತ ಮೈತ್ರಿ ನೆನಪಿಸಿದ್ದರು.

2019ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಾಗ ಏನಾಯಿತು? ಅವರು ಗೆದ್ದಿದ್ದು ಒಂದೇ ಒಂದು ಸ್ಥಾನ ಎಂದ ಅವರು, ಜೆಡಿಎಸ್-ಬಿಜೆಪಿ ಮೈತ್ರಿಕೂಟಕ್ಕೂ ಇದೇ ಫಲಿತಾಂಶ ಬರಲಿದೆ ಎಂದು ಭವಿಷ್ಯ ನುಡಿದ್ದಾರೆ.

RELATED ARTICLES

Latest News