ಬೆಂಗಳೂರು, ಮಾ.21- ಖಾಸಗಿ ಆಸ್ಪತ್ರೆಯೊಂದರ ಸ್ಟಾಫ್ ನರ್ಸ್‌ರೊಬ್ಬರು ಅನುಮಾನಾಸ್ಸಾದವಾಗಿ ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಅವರ ಮನೆಯಲ್ಲಿ ನಿನ್ನೆ ಸಂಜೆ ಶಿಲ್ಪಾ(35) ಅನುಮಾನಾಸ್ಸಾದವಾಗಿ ಮೃತಪಟ್ಟಿದ್ದಾರೆ.
ಪತಿಯ ಮನೆಯವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳುತ್ತಿದ್ದಾರೆ. ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ ತನಿಖೆ ಕೈಗೊಂಡಿದ್ದಾರೆ. ನರ್ಸ್ ಸಾವು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರವಷ್ಟೇ ಗೊತ್ತಾಗಲಿದೆ.