ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್, ಶೇ.3.75ರಷ್ಟು ತುಟ್ಟಿಭತ್ಯೆ ಹೆಚ್ಚಳ

ಬೆಂಗಳೂರು,ಮಾ.12-ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ದರಗಳನ್ನು ಮೂಲ ವೇತನದ ಶೇ.38.75ರಿಂದ ಶೇ.42.5ಕ್ಕೆ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪರಿಷ್ಕøತ ತುಟ್ಟಿಭತ್ಯೆಯು ಜನವರಿ 1ರಿಂದ ಪೂರ್ವಾನ್ವಯವಾಗಲಿದೆ. ಪರಿಷ್ಕøತ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಪಾವತಿ ಮಾಡಲಾಗುತ್ತದೆ. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವ, ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಈ ಪರಿಷ್ಕøತ ತುಟ್ಟಿಭತ್ಯೆ ದರವು ಅನ್ವಯವಾಗಲಿದೆ. … Continue reading ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್, ಶೇ.3.75ರಷ್ಟು ತುಟ್ಟಿಭತ್ಯೆ ಹೆಚ್ಚಳ