ಬೆಂಗಳೂರು, ಸೆ.26- ರಾಜ್ಯಸರ್ಕಾರ ಸಮಗ್ರತೆ ಚರ್ಚೆ ನಡೆಸುವ ಮೂಲಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ತಿರಸ್ಕರಿಸುವಂತಹ ನಿಲುವನ್ನು ವ್ಯಕ್ತಪಡಿಸಬೇಕು ಎಂದು ಅಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.
ಬೆಂಗಳೂರು ಬಂದ್ ವೇಳೆ ಮಾತನಾಡಿರುವ ಅವರು, ಕಾವೇರಿ ನದಿ ವಿವಾದದಲ್ಲಿ ತಮಿಳುನಾಡು ತನ್ನ ಪಾಲಿನ ಹಕ್ಕನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿದೆ. ನಮ್ಮ ರಾಜ್ಯಸರ್ಕಾರ ವೈಫಲ್ಯ ಅನುಭವಿಸಿದೆ. ಕೇಂದ್ರ ಸರ್ಕಾರ ನ್ಯಾಯಾಲಯದ ಹೊರಗೆ ವಿವಾದವನ್ನು ಇತ್ಯರ್ಥಗೊಳಿಸಲು ಮಧ್ಯಪ್ರವೇಶ ಮಾಡಬೇಕಿತ್ತು. ಆದರೆ ಪ್ರಧಾನಿ ಹಾಗೂ ಕೇಂದ್ರ ಸರ್ಕಾರ ಕಂಡೂ ಕಾಣದಂತೆ ಜಾರಿಗೊಳ್ಳುತ್ತಿದೆ ಎಂದು ಆರೋಪಿಸಿದರು.
ಕಾವೇರಿ ನದಿ ನೀರನ್ನು ಒಂದು ತಿಂಗಳಿನಿಂದಲೂ ತಮಿಳುನಾಡಿಗೆ ಹರಿಸಲಾಗುತ್ತಿದೆ. ಮಂಡ್ಯ ಭಾಗದ ಜನ ಇದನ್ನು ವಿರೋಧಿಸಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಬೆಂಗಳೂರಿಗೆ ಕುಡಿಯುವ ನೀರು ಇಲ್ಲವಾಗುತ್ತದೆ. ಇಂತಹ ಸಂಕಷ್ಟದಲ್ಲಿ ಪ್ರತಿಭಟನೆ ಬಿಟ್ಟು ಬೇರೆ ಮಾರ್ಗ ಏನಿದೆ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಮಧ್ಯಪ್ರದೇಶ ಅನಾರೋಗ್ಯ ರಾಜ್ಯವಾಗಿತ್ತು : ಚೌಹಾಣ್ ವಾಗ್ದಾಳಿ
ಕಾಂಗ್ರೆಸ್ ಸರ್ಕಾರ ಗಂಭೀರ ಸಮಸ್ಯೆಯನ್ನು ಕಡೆಗಣಿಸಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಯ ಜಂಜಾಟದಲ್ಲಿ ಮುಳುಗಿದೆ. ಬೆಂಗಳೂರು ಬಂದ್ ಪಕ್ಷಾತೀತವಾದ ಹೋರಾಟ. ಇದರಿಂದ ಬ್ರಾಂಡ್ ಬೆಂಗಳೂರಿಗೆ ಧಕ್ಕೆಯಾಗಲಿದೆ ಎಂಬ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಸರಿಯಲ್ಲ. ಸರ್ಕಾರ ಜನರ ಕಷ್ಟಕ್ಕೆ ಸ್ಪಂಧಿಸಬೇಕು. ಬ್ರಾಂಡ್‍ಗೋಸ್ಕರ ಸಮಸ್ಯೆಗಳನ್ನು ಕಡೆಗಣಿಸಬಾರದು ಎಂದು ಎಚ್ಚರಿಸಿದರು.
ಕಾಂಗ್ರೆಸ್ ಅಧಿಕಾರಕ್ಕಾಗಿ ಮೇಕೆದಾಟು ಪಾದಯಾತ್ರೆ ಮಾಡಿತ್ತು. ಅಧಿಕಾರಕ್ಕೆ ಬಂದು ಮೂರು ತಿಂಗಳಾದರೂ ಅಣೆಕಟ್ಟು ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಲಾಗಿಲ್ಲ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ವಿಶೇಷ ಅಧಿವೇಶನ ಕರೆದು ನೀರು ಬಿಡದೇ ಇರುವ ನಿರ್ಣಯ ಕೈಗೊಳ್ಳಬೇಕು. ನೀರಿಲ್ಲ ಎಂದರೂ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡುತ್ತಿರುವ ಕಾವೇರಿ ನೀರು ನಿಯಂತ್ರಣಾ ಸಮಿತಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಗಳನ್ನು ತಿರಸ್ಕಾರ ಮಾಡಬೇಕು.
ನ್ಯಾಯಾಲಯದ ಮುಂದೆ ವಾದ ಮಂಡಿಸಲು ಸಮರ್ಥ ತಂಡವನ್ನು ರಚಿಸಬೇಕು ಎಂದು ಒತ್ತಾಯಿಸಿದರು. ಸೆ.29 ರಂದು ಕರೆ ನೀಡಿರುವ ಕರ್ನಾಟಕ ಬಂದ್‍ಗೂ ನಮಗೂ ಸಂಬಂಧವಿಲ್ಲ. ನಾವು ಮೊದಲಿಗೆ ಬೆಂಗಳೂರು ಬಂದ್‍ಗೆ ಕರೆ ನೀಡಿದ್ದೆವು. ಅದನ್ನು ಇಂದು ಆಚರಿಸಿದ್ದೇವೆ ಎಂದರು.