Friday, November 22, 2024
Homeರಾಜ್ಯವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಪ್ರತಿಯಾಗಿ ಸಂವಿಧಾನ ಯಾತ್ರೆಗೆ ರಾಜ್ಯ ಸರ್ಕಾರ ಸಿದ್ಧತೆ

ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಪ್ರತಿಯಾಗಿ ಸಂವಿಧಾನ ಯಾತ್ರೆಗೆ ರಾಜ್ಯ ಸರ್ಕಾರ ಸಿದ್ಧತೆ

ಬೆಂಗಳೂರು,ಜ.8- ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಸೆಡ್ಡು ಹೊಡೆಯುವಂತೆ ರಾಜ್ಯಸರ್ಕಾರದಿಂದ ಎಲ್ಲಾ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಸಂವಿಧಾನ ಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ ಸಂಘಟನಾ ಸಮಿತಿ ಸಭೆಯಲ್ಲಿ ಮಹತ್ವದ ಚರ್ಚೆಗಳಾಗಿವೆ.

ಜನವರಿ 26 ರಿಂದ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಆಯೋಜಿಸಲು ನಿರ್ಧರಿಸಲಾಗಿದೆ. ಈ ಜಾಥಾ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸುತ್ತಿದ್ದು, ಸಂವಿಧಾನದ ಮಹತ್ವ, ರಾಷ್ಟ್ರದ ಭಾವೈಕ್ಯತೆ ಕುರಿತಂತೆ ಅರಿವು ಮೂಡಿಸುವ ಕಿರುಚಿತ್ರಗಳು, ಸ್ತಬ್ಧ ಚಿತ್ರಗಳನ್ನೊಳಗೊಂಡಿರಲಿದೆ. ಒಂದು ತಿಂಗಳ ಕಾಲ ನಡೆಯುವ ಯಾತ್ರೆಯ ಸಮಾರೋಪ ಸಮಾವೇಶ ಫೆಬ್ರವರಿ 24 ಹಾಗೂ 25 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ : ವಿಜಯೇಂದ್ರ

ಜೊತೆಗೆ ಅಲ್ಲಲ್ಲಿ ವಿಚಾರ ಸಂಕಿರಣ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ವಸ್ತು ಪ್ರದರ್ಶನ ಆಯೋಜಿಸಲಾಗಿದೆ. ಸಮಾರೋಪ ಸಮಾರಂಭದಲ್ಲಿ ಒಂದು ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದ್ದು, ವಿವಿಧ ವಿಷಯಗಳ ಕುರಿತು ಪರಿಣಿತರ ಚರ್ಚೆಯನ್ನು ಆಧರಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕಚೇರಿಗೆ ತಿಳಿಸಿದೆ.

ಸಮಾವೇಶಕ್ಕಾಗಿ ಅತ್ಯುತ್ತಮ ಸಂಪನ್ಮೂಲ ವ್ಯಕ್ತಿಗಳು ಹಾಗೂ ಅತಿಥಿಗಳನ್ನು ಆಹ್ವಾನಿಸಿ, ಮಾಹಿತಿಪೂರ್ಣ ಚರ್ಚಾಗೋಷ್ಠಿಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಇಂದಿನ ಸಮಾಜ ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ಸಂವಿಧಾನದಲ್ಲಿ ಉತ್ತರವಿದ್ದು, ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಉದ್ದೇಶ ಎಂದು ಸಭೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ತನ್ನ ಕಾರ್ಯಕ್ರಮಗಳ ಪ್ರಚಾರಕ್ಕಾಗಿ ಡಿಸೆಂಬರ್‍ನಿಂದ ಜನವರಿ 26 ರವರೆಗೆ ವಿಕಸಿತ ಭಾರತ್ ಸಂಕಲ್ಪ ಯಾತ್ರೆಯಡಿ ರಾಜ್ಯಾದ್ಯಂತ ಸಾವಿರಾರು ಗ್ರಾಮಗಳಿಗೆ, ನಗರ ಪ್ರದೇಶಗಳಿಗೆ ತಲುಪಿವೆ. ಅದರಲ್ಲಿ ರಾಜ್ಯದ ಅಧಿಕಾರಿಗಳು ಭಾಗವಹಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು.
ಪರಿಣಾಮ ಕೇಂದ್ರ ಸರ್ಕಾರ ಬ್ಯಾಂಕಿಂಗ್ ಕ್ಷೇತ್ರದ ಅಧಿಕಾರಿಗಳನ್ನು ಬಳಸಿಕೊಂಡು ಯಾತ್ರೆಯನ್ನು ಯಶಸ್ವಿಗೊಳಿಸಲಿದೆ. ಜನವರಿ 26 ಕ್ಕೆ ವಿಕಸಿತ ಯಾತ್ರೆ ಸಮಾರೋಪಗೊಳ್ಳಲಿದೆ.

ಅದರ ಬೆನ್ನಲ್ಲೇ ರಾಜ್ಯಸರ್ಕಾರ ಸಂವಿಧಾನದ ಮಹತ್ವ ಹಾಗೂ ಮೌಲ್ಯಗಳ ಕುರಿತು ಅರಿವು ಮೂಡಿಸಲು ರಾಷ್ಟ್ರದ ಐಕ್ಯತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಸಂವಿಧಾನ ಆ ಯಾತ್ರೆಯನ್ನು ಆಯೋಜನೆಗೊಳಿಸಿದೆ.

ಯಶ್ ಕಟೌಟ್‍ ದುರಂತದಲ್ಲಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ

ಇಂದಿನ ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹಾಗೂ ಸಚಿವರಾದ ಹೆಚ್.ಕೆ.ಪಾಟೀಲ, ಕೆ.ಹೆಚ್.ಮುನಿಯಪ್ಪ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು ಹಾಗೂ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲï.ಕೆ. ಅತೀಕ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ.ಮಣಿವಣ್ಣನ್ ಹಾಗೂ ಇತರ ಹಿರಿಯ ಅಕಾರಿಗಳು ಭಾಗವಹಿಸಿದ್ದರು.

RELATED ARTICLES

Latest News