Tuesday, September 17, 2024
Homeರಾಜ್ಯ"ಉಡ್ತಾ ಕರ್ನಾಟಕ"ವಾಗಲು ರಾಜ್ಯಸರ್ಕಾರ ಬಿಡಲ್ಲ : ಗೃಹಸಚಿವ ಪರಮೇಶ್ವರ್‌

“ಉಡ್ತಾ ಕರ್ನಾಟಕ”ವಾಗಲು ರಾಜ್ಯಸರ್ಕಾರ ಬಿಡಲ್ಲ : ಗೃಹಸಚಿವ ಪರಮೇಶ್ವರ್‌

ಬೆಂಗಳೂರು,ಜು.18- ಯಾವುದೇ ಕಾರಣಕ್ಕೂ ರಾಜ್ಯವನ್ನು ಉಡ್ತಾ ಕರ್ನಾಟಕವನ್ನಾಗಿ ಮಾಡಲು ರಾಜ್ಯಸರ್ಕಾರ ಬಿಡುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ವಿಧಾನಪರಿಷತ್‌ನಲ್ಲಿ ಪುನರುಚ್ಚರಿಸಿದರು. ಬಿಜೆಪಿ ಸದಸ್ಯ ಡಾ.ಧನಂಜಯ ಸರ್ಜಿಯವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಹಿಂದೆ ಕೆಲವು ಸದಸ್ಯರು ಕರ್ನಾಟಕವು ಪಂಜಾಬ್‌ನಂತೆ ಉಟ್ತಾ ಕರ್ನಾಟಕವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು.

ನಾನು ಒಬ್ಬ ಗೃಹಸಚಿವನಾಗಿ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಎಂತಹ ಸಂದರ್ಭದಲ್ಲೂ ಕರ್ನಾಟಕವನ್ನು ಉಟ್ತಾ ಪಂಜಾಬ್‌ ಮಾಡಲು ಬಿಡುವುದಿಲ್ಲ. ಇದಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಿದ್ದೇವೆ ಎಂದು ಸದನಕ್ಕೆ ತಿಳಿಸಿದರು.
ಸರ್ಕಾರವು ಡ್ರಗ್ಸ್‌‍ ಮುಕ್ತ ಕರ್ನಾಟಕ ನಿರ್ಮಾಣದ ಘೋಷಣೆ ಮಾಡಿದ್ದು, ಯಾವುದೇ ಕಾರಣಕ್ಕು ಉಡ್ತಾ ಕರ್ನಾಟಕ ಆಗಲು ಬಿಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ರಾಜ್ಯದಲ್ಲಿ ಕಾಲೇಜು ವಿದ್ಯಾರ್ಥಿಗಳು ಮಾದಕ ವ್ಯಸನಿಗಳಾಗುತ್ತಿರುವುದು ಗಮನಕ್ಕೆ ಬಂದಿದೆಯೇ, ದಾಖಲಾಗಿರುವ ಪ್ರಕರಣಗಳೆಷ್ಟು ಮತ್ತು ಎಷ್ಟು ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ ಆಗಿದೆ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು.

ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಕೆ ಮಾಡುವ ಪೆಡ್ಲರ್‌ಗಳ ಮೇಲೆ ಕ್ರಮ ತೆಗೆದುಕೊಳ್ಳುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಮಾದಕ ದ್ರವ್ಯ ಕುರಿತು ವಿದ್ಯಾರ್ಥಿಗಳಿಗಾಗಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮಿಕೊಂಡಿದ್ದೇವೆ.

ಕಳೆದ ವರ್ಷ 2023ರಲ್ಲಿ 2409 ಶಾಲಾ-ಕಾಲೇಜುಗಳಲ್ಲಿ 3.95 ಲಕ್ಷ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಗಿತ್ತು. ಪ್ರಸಕ್ತ ವರ್ಷ ಜೂನ್‌ನಲ್ಲಿ 3,600 ಶಾಲಾ-ಕಾಲೇಜುಗಳಲ್ಲಿ 5.50 ಲಕ್ಷ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ್ದೇವೆ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಕೈಗೆ ಡ್ರಗ್‌್ಸ ಸಿಗಬಾರದು ಎಂಬುದು ನಮ ಉದ್ದೇಶ. ಅವರಿಗೆ ಜಾಗೃತಿ ಮೂಡಿಸಿದರೆ ಡ್ರಗ್‌್ಸ ತೆಗೆದುಕೊಳ್ಳಲು ಹಿಂಜರಿಯುತ್ತಾರೆ ಎಂಬ ನಿಟ್ಟಿನಲ್ಲಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಗೃಹ ಸಚಿವ ಪರಮೇರ್ಶ್ವ ಅವರು ತಿಳಿಸಿದರು.

2022ರಲ್ಲಿ ಎನ್‌ಡಿಪಿಎಸ್‌‍ ಕಾಯ್ದೆಯಡಿ 6406 ಪ್ರಕರಣ ದಾಖಲಿಸಿದ್ದು, 6164 ಆರೋಪಿಗಳನ್ನು ಬಂಧಿಸಲಾಗಿದೆ. 3881 ಪ್ರಕರಣಗಳು ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದ್ದು, ಇದರಲ್ಲಿ 2365 ಜನರಿಗೆ ಶಿಕ್ಷೆಯಾಗಿದೆ. 2023ರಲ್ಲಿ 6764 ಪ್ರಕರಣಗಳಲ್ಲಿ 2280 ಬಂಧಿಸಲಾಗಿದೆ.

4187 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, 2280 ಆರೋಪಿತರಿಗೆ ಶಿಕ್ಷೆಯಾಗಿದೆ. ಪ್ರಸಕ್ತ ವರ್ಷ ಜುಲೈ 10ರವರೆಗೆ 1791 ಪ್ರಕರಣಗಳಲ್ಲಿ 1179 ಆರೋಪಿಗಳನ್ನು ಬಂಧಿಸಲಾಗಿದೆ. 884 ಪ್ರಕರಣಗಳು ವಿಚಾರಣೆ ಹಂತದಲ್ಲಿದ್ದು 189 ಆರೋಪಿಗಳಿಗೆ ಶಿಕ್ಷೆಯಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಸುಮಾರು 150 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ ಪಡಿಸಿದ್ದೇವೆ. 10 ಟನ್‌ ಗಾಂಜಾ, 250 ಕೆಜಿಯಷ್ಟು ಸಿಂಥೆಟಿಕ್‌ ಡ್ರಗ್ಸ್ ಸುಟ್ಟು ಹಾಕಲಾಗಿದೆ. ಯುವಕರು ಮಾದಕ ವ್ಯಸನದಲ್ಲಿ ಸಿಲುಕಿಕೊಂಡು ನರಳುತ್ತಿದ್ದಾರೆ. ಹೀಗಾಗಿ ಡ್ರಗ್‌್ಸ ವಿರುದ್ಧವಾಗಿ ನಿರಂತರವಾದ ಹೋರಾಟ ನಡೆಸಲಾಗುತ್ತಿದೆ ಎಂದರು.

ವಿದೇಶದಿಂದ ವಿದ್ಯಾರ್ಥಿ ವೀಸಾದ ಮೇಲೆ ಬಂದು ದಂಧೆಗೆ ಇಳಿಯುತ್ತಿದ್ದಾರೆ. 150 ವಿದೇಶಿಗರನ್ನು ಗುರುತಿಸಿ, ಅಂಥವರನ್ನು ಬಂಧಿಸಿ ವಾಪಸ್‌‍ ಕಳುಹಿಸಲಾಗಿದೆ. ವಿದೇಶಿ ಯುವಕರ ಮೇಲೆ ಹೆಚ್ಚಿನ ನಿಗಾವಹಿಸಲಾಗಿದೆ. ಸಿಐಡಿ ಮಾದಕದ್ರವ್ಯ ವಿಭಾಗವನ್ನು ಬಲಪಡಿಸುವ ನಿಟ್ಟಿನಲ್ಲಿ ಎಡಿಜಿಪಿ ಮತ್ತು ಐಜಿಪಿ ಹ್ದುೆಯನ್ನು ಸೃಜಿಸಲಾಗಿದೆ. ರಾಜ್ಯದಲ್ಲಿ 43 ಸೆನ್‌ (ಸೈಬರ್‌, ನಾರ್ಕೋಟಿಕ್‌ ಮತ್ತು ಎಕನಾಮಿಕ್‌ ಅೆನ್‌್ಸ) ಸ್ಥಾಪಿಸಲಾಗಿದ್ದು, ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ವಿದೇಶದಿಂದ ಬರುವ ಪಾರ್ಸೆಲ್‌ಗಳ ಮೇಲೆ ನಿಗಾ ವಹಿಸಲಾಗಿದೆ. ಡ್ರಗ್‌್ಸ ಕುರಿತು ಸಾರ್ಜಜನಿಕತು ಮಾಹಿತಿ ನೀಡಲು ಆ್ಯಪ್‌ಗಳು ಮೊಬೈಲ್‌ ಅಪ್ಲಿಕೇಶನ್‌ ತರಲಾಗಿದೆ. ಇದರ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದರೆ ತಕ್ಷಣ ಕ್ರಮ ಜರುಗಿಸಲಾಗುತ್ತಿದೆ ಎಂದು ಹೇಳಿದರು.

ಮುಲಾಜಿಲ್ಲದೆ ಕ್ರಮ :
ಸದಸ್ಯ ಡಾ. ಧನಂಜಯ್‌ ಸರ್ಜಿ ಅವರು, ಡಾರ್ಕ್‌ ಕ್ಲಬ್‌ ಮೂಲಕ ಡ್ರಗ್‌್ಸ ಬರುತ್ತಿದೆ. ಈ ಬಗ್ಗೆ ಗಮನಹರಿಸಬೇಕು. ಕಾಲೇಜು ವಿದ್ಯಾರ್ಥಿಗಳು ಡ್ರಗ್ಸ್ ತೆಗೆದುಕೊಂಡು ಅಮಲಿನಲ್ಲಿ ಓಡಾಡುವ ವೀಡಿಯೋಗಳು ವೈರಲ್‌ ಆಗುತ್ತಿವೆ ಎಂದರು. ಈ ವೇಳೆ ಕಾಂಗ್ರೆಸ್‌‍ ಸದಸ್ಯ ಸಲೀಂ ಅಹದ್‌ ಅವರು, ದಂಧೆಯಲ್ಲಿ ಪೊಲೀಸರು ಭಾಗಿಯಾಗುತ್ತಿದ್ದಾರೆ. ಇದಕ್ಕೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಧ್ವನಿ ಎತ್ತಿದರು.

ಇದಕ್ಕೆ ಗೃಹ ಸಚಿವ ಪರಮೇಶ್ವರ ಅವರು ಪ್ರತಿಕ್ರಿಯಿಸಿ, ಈಗಾಗಲೇ ಸಾವಿರಾರು ಕೇಸ್‌‍ಗಳನ್ನು ದಾಖಲಿಸಿ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಪೊಲೀಸರು ಭಾಗಿಯಾಗಿರುವುದು ಕಂಡು ಬಂದರೆ, ಅವರ ವಿರುದ್ಧವೂ ಯಾವುದೇ ರೀತಿಯ ಮುಲಾಜಿಲ್ಲದೆ ಕ್ರಮ ಜರುಗಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

RELATED ARTICLES

Latest News