Tuesday, January 27, 2026
Homeರಾಜ್ಯಉಡುಪಿಯ ಮಲ್ಪೆಯಲ್ಲಿ ಬಂಧಿಸಲಾಗಿದ್ದ 10 ಮಂದಿ ಬಾಂಗ್ಲಾ ವಲಸಿಗರಿಗೆ 2 ವರ್ಷ ಜೈಲು ಶಿಕ್ಷೆ

ಉಡುಪಿಯ ಮಲ್ಪೆಯಲ್ಲಿ ಬಂಧಿಸಲಾಗಿದ್ದ 10 ಮಂದಿ ಬಾಂಗ್ಲಾ ವಲಸಿಗರಿಗೆ 2 ವರ್ಷ ಜೈಲು ಶಿಕ್ಷೆ

10 Bangladeshi immigrants arrested in Malpe, Udupi sentenced to 2 years in prison

ಉಡುಪಿ, ಡಿ.9-ಅಕ್ರಮವಾಗಿ ಭಾರತಕ್ಕೆ ಬಂದು ಮಲ್ಪೆಯಲ್ಲಿ ಬಂಧಿತರಾಗಿದ್ದ 10 ಮಂದಿ ಬಾಂಗ್ಲಾ ವಲಸಿಗರಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ಮತ್ತು ತಲಾ 10 ಸಾವಿರ ರೂ. ದಂಡ ವಿಧಿಸಿದೆ. ಬಾಂಗ್ಲಾ ದೇಶದಿಂದ ಅಕ್ರಮವಾಗಿ ಉಡುಪಿಗೆ ಬಂದಿದ್ದ ಹಕೀಮ್‌ ಆಲಿ, ಸುಜೋನ್‌ ಎಸ್‌‍.ಕೆ., ಇಸ್ಮಾಯಿಲ್‌ ಎಸ್‌‍.ಕೆ , ಕರೀಮ್‌ ಎಸ್‌‍.ಕೆ., ಸಲಾಂ ಎಸ್‌‍.ಕೆ., ರಾಜಿಕುಲ್‌ ಎಸ್‌‍.ಕೆ., ಮೊಹಮ್ಮದ್‌ ಸೋಜಿಬ್‌ , ರಿಮೂಲ್‌ , ಮೊಹಮ್ಮದ್‌ ಇಮಾಮ್‌ ಶೇಖ್‌, ಮೊಹಮ್ಮದ್‌ ಜಹಾಂಗಿರ್‌ ಆಲಂ ಶಿಕ್ಷೆಗೊಳಗಾದವರು.

ಕಳೆದ 2024ರ ಅ.11ರಂದು ರಾತ್ರಿ 7 ಗಂಟೆಗೆ ಮಲ್ಪೆ ಠಾಣೆ ಪಿಎಸ್‌‍ಐ ಗಸ್ತಿನಲ್ಲಿದ್ದಾಗ ಮಲ್ಪೆ ವಡಭಾಂಡೇಶ್ವರ ಬಸ್‌‍ ನಿಲ್ದಾಣದ ಬಳಿ 7 ಜನರು ಅನುಮಾನಸ್ಪದವಾಗಿ ಒಡಾಡುತ್ತಿದ್ದರು.
ಇದನ್ನು ಕಂಡು ವಿಚಾರಿಸಿದಾಗ ಆರೋಪಿತರು ಆಸ್ಪಷ್ಟ ಮಾಹಿತಿ ನೀಡಿದರು ನಕಲಿ ಆಧಾರ್‌ ಕಾರ್ಡ್‌ ಮತ್ತು ನಕಲಿ ದಾಖಲೆಗಳನ್ನು ಸೃಷ್ಟಿಸಿರುವುದು ಕಂಡುಬಂದಿತ್ತು. ಹೀಗಾಗಿ ಏಳು ಜನರನ್ನು ಬಂಧಿಸಲಾಗಿತ್ತು.

ಇನ್ನು ತನಿಖೆ ವೇಳೆ ಬಾಂಗ್ಲಾದೇಶದಿಂದ ಉಡುಪಿ ತಾಲೂಕು ಪಡುತೋನ್ಸೆ ಗ್ರಾಮದ ಹೂಡೆಗೆ ಬಂದಿರುವುದಾಗಿ ಬಾಯ್ಬಿಟ್ಟಿದ್ದರು. ಅಲ್ಲದೇ ಇವರು ನೀಡಿದ ಮಾಹಿತಿಯಂತೆ ಉಳಿದ 3 ಮಂದಿ ಅಕ್ರಮ ವಲಸಿಗರನ್ನು ನಂತರ ಬಂಧಿಸಲಾಗಿತ್ತು.ಈ ಆರೋಪಿಗಳು ನಕಲಿ ಭಾರತೀಯ ದಾಖಲಾತಿ ಸೃಷ್ಟಿಸಿ ಉಡುಪಿಗೆ ಪ್ರವೇಶಿಸಿದ್ದರು.ಆರೋಪಿಗಳ ಪೈಕಿ ಸಿಕ್ಕಿಂ ಅಗರ್ತಲಾದ ಕಾಜೋಲ್‌ ಎಂಬಾತ ನಕಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿದ್ದಾನೆಂದು ತಿಳಿದುಬಂದಿತ್ತು.

ಹಾಗೇ ಮತ್ತೋರ್ವ ಆರೋಪಿ ಉಸ್ಮಾನ್‌ ಎಂಬಾತ ಅಕ್ರಮವಾಗಿ ಕರೆತಂದು ಉದ್ಯೋಗದ ವ್ಯವಸ್ಥೆ ಮಾಡಿದ್ದ. ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧಿಸಿ ಮಲ್ಪೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.ವಿಚಾರಣೆ ನಡೆದು ಆರೋಪಿಗಳಿಗೆ ಶಿಕ್ಷೆಯಾಗಿದೆ.

RELATED ARTICLES

Latest News