ಬೆಂಗಳೂರು,ಡಿ.13- ವೋಟ್‌ಚೋರಿ ಅಭಿಯಾನದ ಅಂಗವಾಗಿ ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಾಳೆ ನಡೆಯುವ ಪ್ರತಿಭಟನೆಯಲ್ಲಿ ರಾಜ್ಯದ 1 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆ. ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ ರಾಜ್ಯದಿಂದ ವೋಟ್‌ಚೋರಿ( ಮತಗಳ್ಳತನ) ಅಭಿಯಾನ ಪ್ರಾರಂಭವಾಗಿದೆ. ನಗರದ ಫ್ರೀಡಂಪಾರ್ಕ್‌ನಿಂದ ಈ ಅಭಿಯಾನ ಆರಂಭಿಸಲಾಗಿದೆ. ಈಗಾಗಲೇ ರಾಜ್ಯದ ಮೂಲೆ ಮೂಲೆಯಿಂದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ದೆಹಲಿಗೆ ತೆರಳಿದ್ದಾರೆ. 100ಕ್ಕೂ ಹೆಚ್ಚು ವಿಧಾನಸಭೆ ಹಾಗೂ ವಿಧಾನಪರಿಷತ್ ಸದಸ್ಯರು ದೆಹಲಿಗೆ ತೆರಳುತ್ತಿದ್ದಾರೆ ಎಂದರು.
ವೋಟ್ ಚೋರಿ ಅಭಿಯಾನದ ಅಂಗವಾಗಿ ದೆಹಲಿಯಲ್ಲಿ ಎಐಸಿಸಿ ಹಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ನಾನು ಇಂದು ದೆಹಲಿಗೆ ಹೋಗುತ್ತಿದ್ದೇನೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶಕ್ತಿ ತುಂಬುತ್ತೇವೆ. ಬಿಹಾರ ಚುನಾವಣೆಯಲ್ಲಿ ನಾವು ಸೋತಿದ್ದರೂ ನಮಗೆ ಆತವಿಶ್ವಾಸವಿದೆ. ವೋಟ್ ಚೋರಿ ಕುರಿತು ಜನಜಾಗೃತಿ ಮೂಡಿಸಲು ಅಭಿಯಾನ ಹಮಿಕೊಳ್ಳಲಾಗಿದೆ ಎಂದು ಹೇಳಿದರು.
ಡ್ರಗ್‌್ಸ ಪೆಡ್ಲರ್‌ಗಳ ಮನೆಗಳ ಮೇಲೆ ಬುಲ್ಡೋಜರ್ ಹತ್ತಿಸಬೇಕೆಂಬ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಉತ್ತರಪ್ರದೇಶದಲ್ಲಿ ಏನೇನಾಯಿತು? ಅದರ ಬಗ್ಗೆ ಏಕೆ ಚಕಾರವೆತ್ತಲಿಲ್ಲ ಎಂದು ಪ್ರಶ್ನಿಸಿದರು. ನನಗೆ ಇ.ಡಿ ನೀಡಿರುವ ನೋಟಿಸ್‌ಗೆ ಸಂಬಂಧಿಸಿದಂತೆ ಉತ್ತರ ನೀಡಲು ದಾಖಲೆಗಳನ್ನು ಸಂಗ್ರಹಿಸುತ್ತಿದ್ದೇನೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
