ಬೆಂಗಳೂರು,ಜ.12- ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ 15 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಪತ್ತೆಹಚ್ಚಿದ್ದಾರೆ.ಪಶ್ಚಿಮ ಬಂಗಾಳದ ಮೂಲಕ ಅಕ್ರಮವಾಗಿ ಭಾರತಕ್ಕೆ ಬಂದು ನಂತರ ನಗರದಲ್ಲಿ ನೆಲೆಸಿ ಗುಜರಿ ಕೆಲಸ, ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕನಾಗಿ, ಪ್ಲಾಸ್ಟಿಕ್ ವಸ್ತುಗಳ ಮಾರಾಟ ಸೇರಿದಂತೆ ವಿವಿಧ ಕೆಲಸಗಳಲ್ಲಿ ತೊಡಗಿಕೊಂಡಿದ್ದರು.
ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಪತ್ತೆಕಾರ್ಯದಲ್ಲಿ ತೊಡಗಿದ್ದ ಪೊಲೀಸರು ಕಳೆದ ಹತ್ತು ದಿನಗಳಲ್ಲಿ 15 ಮಂದಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.
ಕಳೆದ ಎರಡು ವರ್ಷಗಳಿಂದ ಹೆಬ್ಬಗೋಡಿ ಭಾಗದಲ್ಲಿ ವಾಸವಿದ್ದ ಬಾಂಗ್ಲಾ ದೇಶದ ಜಹಿದುಲ್ ಇಸ್ಲಾಂ (35) ಮತ್ತು ಫೈರೋಡ್್ಸ (32) ಎಂಬಾತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಇನ್ನಷ್ಟು ಬಾಂಗ್ಲಾ ಪ್ರಜೆಗಳು ಇರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಈ ಆಧಾರದ ಮೇಲೆ ಇದೀಗ ಈ ಇಬ್ಬರು ಸೇರಿದಂತೆ 15 ಮಂದಿ ಬಾಂಗ್ಲಾ ಪ್ರಜೆಗಳನ್ನು ಬಂಧಿಸಿ ಇವರ ಬಳಿಯಿದ್ದ ನಕಲಿ ಆಧಾರ್ಕಾರ್ಡ್ ಹಾಗೂ ಪಾಸ್ಪೋರ್ಟ್ಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಅವರೆಲ್ಲರನ್ನು ಎಫ್ಆರ್ಆರ್ಓ ಮುಂದೆ ಹಾಜರು ಪಡಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ಮೂವರು ವಿದೇಶಿಗರ ಪತ್ತೆ:
ವಿವಿಧ ವೀಸಾದಡಿ ಬಂದು ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಮೂವರು ವಿದೇಶಿ ಪ್ರಜೆಗಳನ್ನು ಸಹ ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ.
