Homeರಾಜ್ಯಶಾಲಾ ವಾಹನದ ಮೇಲೆ ಬೃಹತ್‌ ಗಾತ್ರದ ಮರ ಉರುಳಿ ಬಿದ್ದು 5 ವರ್ಷದ ಬಾಲಕಿ ಸಾವು

ಶಾಲಾ ವಾಹನದ ಮೇಲೆ ಬೃಹತ್‌ ಗಾತ್ರದ ಮರ ಉರುಳಿ ಬಿದ್ದು 5 ವರ್ಷದ ಬಾಲಕಿ ಸಾವು

A huge tree fell on a school vehicle, killing a 5-year-old girl

ಮಂಗಳೂರು,ಜು.23-ಚಲಿಸುತ್ತಿದ್ದ ಶಾಲಾ ವಾಹನದ ಮೇಲೆ ಬೃಹತ್‌ ಗಾತ್ರದ ಮರ ಉರುಳಿ ಬಿದ್ದು ಐದು ವರ್ಷದ ಬಾಲಕಿ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ.ಚಿರನ್ವಿ (5) ಮೃತಪಟ್ಟ ಬಾಲಕಿ.

ಬಂಟ್ವಾಳ ತಾಲೂಕಿನ ಬಿಳಿಯೂರಿನ ಚಂದ್ರಹಾಸ ಅವರ ಪುತ್ರಿ ಚಿರನ್ವಿ. ಕಲ್ಲಡ್ಕ ಶ್ರೀರಾಮ ಶಾಲೆಗೆ ಓದುತ್ತಿದ್ದು ಬಂಟ್ವಾಳ ತಾಲೂಕಿನ ಕಲ್ಲೇಟಿ ಕಾನಲ್ತಾಯ ದೈವಸ್ಥಾನದ ಬಳಿ ದುರ್ಘಟನೆ ನಡೆದಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಮಕ್ಕಳಿಗೆ ಕಲ್ಲಡ್ಕ ಹಾಗೂ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ಯು. ಚಿಂತಾಜನಕ ಸ್ಥಿತಿಯಲ್ಲಿದ್ದ ಚಿರನ್ವಿಯನ್ನ ತಕ್ಷಣ ಆಟೋದಲ್ಲಿ ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದ ದಾರಿ ಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ.

ಪುತ್ತೂರು ತಾಲೂಕು ಆಸ್ಪತ್ರೆಗೆ ಬಂಟ್ವಾಳ ತಹಸಿಲ್ದಾರ್‌ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಮೃತಪಟ್ಟ ಚಿರನ್ವಿ ಕುಟುಂಬಕ್ಕೆ ಜಿಲ್ಲಾಡಳಿತದಿಂದ ಪ್ರಾಕೃತಿಕ ವಿಕೋಪದಡಿಯಲ್ಲಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

RELATED ARTICLES

Latest News