Homeರಾಜ್ಯಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎ.ಪಿ.ರಂಗನಾಥ್ ಭರ್ಜರಿ ಗೆಲುವು

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎ.ಪಿ.ರಂಗನಾಥ್ ಭರ್ಜರಿ ಗೆಲುವು

ಬೆಂಗಳೂರು, ಆ. 27- ತೀವ್ರ ಜಿದ್ದಾಜಿದ್ದಿನಿಂದ ಕೂಡಿದ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಜೆಡಿಎಸ್ ಅಭ್ಯರ್ಥಿ ಎಪಿ ರಂಗನಾಥ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. 712 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ.ಒಟ್ಟು 21 000 ಎಣಿಕೆಯಾದ ಮತಗಳಲ್ಲಿ ಎಪಿ ರಂಗನಾಥ್ 9846 , ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ 9,134 ಮತಗಳು ಪಡೆದಿದ್ದರೆ.

ಈ ಮೂಲಕ ಕಳೆದ ನಾಲ್ಕು ಬಾರಿ ಶಿಕ್ಷಕರ ಕ್ಷೇತ್ರದಿಂದ ಸತತವಾಗಿ ಗೆಲುವು ಸಾಧಿಸಿದ ಪುಟ್ಟಣ್ಣ ಅವರಿಗೆ ಸೋಲಾಗಿದೆ. ಬಿಜೆಪಿಯಿಂದ ಗೆದ್ದು ರಾಜೀನಾಮೆ ನೀಡಿ ನಂತರ ಕಳೆದ ರಾಜಾಜಿನಗರ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು.

ಆದರೆ ಮತ್ತೊಮ್ಮೆ ವಿಧಾನಪರಿಷತ್ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ರಂಗನಾಥ್ ಪರವಾಗಿ ಸತತವಾಗಿ ಶ್ರಮಿಸಿ ಶ್ರಮಿಸಿತ್ತು ಅದು ಈಗ ಫಲ ನೀಡಿದೆ. ಇನ್ನು ಮೂರು ಕ್ಷೇತ್ರಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಸಾಧಿಸಿದ್ದು ಎಲ್ಲಾ ನಾಲ್ಕು ಸ್ಥಾನಗಳನ್ನು ಕೂಡ ಗೆಲ್ಲುವ ಸಾಧ್ಯತೆ ದಟ್ಟವಾಗಿದೆ.

NDA ಅಭ್ಯರ್ಥಿ ಗೆಲವಿನಿಂದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮತ್ತು ಕಾರ್ಯಕರ್ತರಲ್ಲಿ ಹೊಸ ಉರುಪು ಮೂಡಿದೆ. ಈ ಮೂಲಕ ಮುಂದಿನ ವಿಧಾನಸಭೆ ಚುನಾವಣೆಗೆ ಈ ಗೆಲವು ಬಲ ನೀಡಲಿದೆ.

RELATED ARTICLES

Latest News