Homeಇದೀಗ ಬಂದ ಸುದ್ದಿಬರಗಾಲದ ಹಿನ್ನೆಲೆಯಲ್ಲಿ ಕೇಂದ್ರದ ನೆರವು ಪಡೆಯಲು ಸರ್ವಪಕ್ಷ ನಿಯೋಗ ಕರೆದೊಯ್ಯಬೇಕು : ಟಿ.ಎ.ಶರವಣ

ಬರಗಾಲದ ಹಿನ್ನೆಲೆಯಲ್ಲಿ ಕೇಂದ್ರದ ನೆರವು ಪಡೆಯಲು ಸರ್ವಪಕ್ಷ ನಿಯೋಗ ಕರೆದೊಯ್ಯಬೇಕು : ಟಿ.ಎ.ಶರವಣ

ಬೆಂಗಳೂರು,ಸೆ.23- ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ಪಡೆಯಲು ರಾಜ್ಯ ಸರ್ಕಾರವು ಸರ್ವಪಕ್ಷ ನಿಯೋಗವನ್ನು ಕೇಂದ್ರ ಸರ್ಕಾರದ ಬಳಿಗೆ ಕರೆದೊಯ್ಯಬೇಕು ಎಂದು ಜೆಡಿಎಸ್‌‍ ಶಾಸಕಾಂಗ ಪಕ್ಷದ ಉಪನಾಯಕ ಟಿ.ಎ.ಶರವಣ ವಿಧಾನಪರಿಷತ್‌ನಲ್ಲಿ ಆಗ್ರಹಿಸಿದರು.

ರಾಜ್ಯದಲ್ಲಿ ಉಂಟಾಗಿರುವ ಬರಗಾಲದ ಪರಿಸ್ಥಿತಿ, ರೈತರು ಎದುರಿಸುತ್ತಿರುವ ಸಂಕಷ್ಟಗಳು ಹಾಗೂ ಅಗತ್ಯ ಪರಿಹಾರ ಕ್ರಮಗಳ ಕುರಿತು ಮಾತನಾಡಿದ ಅವರು, ರಾಜ್ಯದ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು.

ಬರಗಾಲದ ಪರಿಸ್ಥಿತಿ ಗಂಭೀರವಾಗಿದ್ದು, ರೈತರ ಸಂಕಷ್ಟಗಳನ್ನು ಕೇವಲ ಮಾತುಗಳಿಗೆ ಸೀಮಿತಗೊಳಿಸದೆ, ಸರ್ಕಾರ ತಕ್ಷಣ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸುಮಾರು 25,000 ಕೋಟಿ ರೂ. ಮೊತ್ತದ ರೈತರ ಸಾಲಮನ್ನಾ ಮಾಡಿರುವುದನ್ನು ಸರ್ಕಾರದ ಗಮನಕ್ಕೆ ತಂದರು. ನೆರವಿಗಾಗಿ ಕೇಂದ್ರ ಸರ್ಕಾರವನ್ನು ಕೋರದೆ ದೃಢ ಸಂಕಲ್ಪದೊಂದಿಗೆ ರೈತರ ಹಿತದೃಷ್ಟಿಯಿಂದ ಇಂತಹ ಕ್ರಮಗಳ ಅಗತ್ಯವಿದ್ದು, ಪ್ರಸ್ತುತ ಪರಿಸ್ಥಿತಿಯಲ್ಲಿಯೂ ರೈತರಿಗೆ ಅಗತ್ಯ ನೆರವು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಮೇವು ಖರೀದಿ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳಲ್ಲಿ ಸರ್ಕಾರದ ವತಿಯಿಂದ ಎಲ್ಲಾ ತಾಲೂಕು ಮಟ್ಟದಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವ ವ್ಯವಸ್ಥೆಯನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಶರವಣ ಅವರು ಒತ್ತಾಯಿಸಿದರು.

RELATED ARTICLES
spot_img

Latest News