Homeರಾಜ್ಯಹೊಸ ಸಚಿವರ ಪಟ್ಟಿ ಬಿಡುಗಡೆ ಬೆನ್ನಲ್ಲೇ ಸಂಪುಟ ವಂಚಿತರ ಆಕ್ರೋಶ ಸ್ಫೋಟ

ಹೊಸ ಸಚಿವರ ಪಟ್ಟಿ ಬಿಡುಗಡೆ ಬೆನ್ನಲ್ಲೇ ಸಂಪುಟ ವಂಚಿತರ ಆಕ್ರೋಶ ಸ್ಫೋಟ

ಬೆಂಗಳೂರು,ಆ.3- ಇತ್ತ ಸಚಿವ ಸಂಪುಟದ ಪಟ್ಟಿ ಬಿಡುಗಡೆಯಾಗಿ ಪ್ರಮಾಣವಚನಕ್ಕೆ ಸಿದ್ಧತೆಯಾಗುತ್ತಿದ್ದಂತೆ ಅತ್ತ ಸಂಪುಟ ವಂಚಿತರ ಆಕ್ರೋಶ ಭುಗಿಲೆದ್ದಿದೆ.ಮೈಸೂರು, ಬೆಳಗಾಂ, ದಾವಣಗೆರೆ, ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ವಿವಿಧೆಡೆ ಕಾಂಗ್ರೆಸ್‌‍ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಎನ್‌.ಆರ್‌.ಕ್ಷೇತ್ರದ ಶಾಸಕ ತನ್ವೀರ್‌ ಸೇಠ್‌ಗೆ ಸಚಿವ ಸ್ಥಾನ ಸಿಗುತ್ತದೆ ಎಂದು ಭಾರೀ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಕೈತಪ್ಪಿದ್ದರಿಂದ ಆಕ್ರೋಶದಿಂದ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಸಿದ್ದರಾಮಯ್ಯನವರ ಸಂಪುಟದಲ್ಲೂ ಸಚಿವ ಸ್ಥಾನ ಸಿಗಲಿಲ್ಲ. ಈ ಬಾರಿ ಡಿ.ಕೆ.ಶಿವಕುಮಾರ್‌ರವರ ಸಂಪುಟದಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ ಸಚಿವ ಸ್ಥಾನ ಸಿಗಲಿಲ್ಲ. ಹೀಗಾಗಿ ಬೆಂಬಲಿಗರು, ಕಾಂಗ್ರೆಸ್‌‍ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿ ನಾಯಕರು ಹೈಕಮಾಂಡ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯ ಮುಖಂಡರಾದ ತನ್ವೀರ್‌ ಸೇಠ್‌ರಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಕಣ್ಣೀರಿಟ್ಟರು. ಅದೇ ರೀತಿ ಚಿಕ್ಕಮಗಳೂರು, ಬೆಳಗಾವಿ, ದಾವಣಗೆರೆ ಮುಂತಾದೆಡೆ ಕಾರ್ಯಕರ್ತರು ತಮ ನಾಯಕರಿಗೆ ಸ್ಥಾನ ಕೈತಪ್ಪಿದೆ ಎಂದು ಕಾರ್ಯಕರ್ತರು ಆರೋಪಿಸಿ ಬೀದಿಗಿಳಿದು ಪ್ರತಿಭಟನೆ ನಡೆಸಿದ ಘಟನೆಗಳು ನಡೆದಿವೆ.

ಚಿಕ್ಕಮಗಳೂರಿನಲ್ಲಿ ಶೃಂಗೇರಿ ಕ್ಷೇತ್ರದ ಶಾಸಕ ರಾಜೀವ್‌ಗೌಡರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನಿರೀಕ್ಷಿಸಲಾಗಿತ್ತು. ಬೆಳಗಾವಿಯಲ್ಲಿ ಲಕ್ಷ್ಮೀಹೆಬ್ಬಾಳ್ಕರ್‌ರವರಿಗೆ ಸಚಿವ ಸ್ಥಾನ ನಿರೀಕ್ಷಿಸಲಾಗಿತ್ತು.

RELATED ARTICLES
spot_img

Latest News