Homeರಾಜ್ಯವಾರ್ತಾ ಇಲಾಖೆ ಆಯುಕ್ತರಾಗಿ ಅನುಚೇತ್‌ ಅಧಿಕಾರ ಸ್ವೀಕಾರ

ವಾರ್ತಾ ಇಲಾಖೆ ಆಯುಕ್ತರಾಗಿ ಅನುಚೇತ್‌ ಅಧಿಕಾರ ಸ್ವೀಕಾರ

Anucheth assumes office as Information Department Commissioner

ಬೆಂಗಳೂರು,ಜೂ.25- ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್‌‍ ಅಧಿಕಾರಿ ಎಂ.ಎನ್‌ ಅನುಚೇತ್‌ ಅವರು ಇಂದು ಅಧಿಕಾರ ಸ್ವೀಕರಿಸಿದರು. ಇದುವರೆಗೂ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಎಡಿಜಿಪಿ ಹೇಮಂತ್‌ ನಿಂಬಾಳ್ಕರ್‌ ಅವರು ಅನುಚೇತ್‌ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಮೂಲತಃ ಕೋಲಾರ ಜಿಲ್ಲೆಯವರಾದ ಅನುಚೇತ್‌ ಅವರು ಬೆಂಗಳೂರಿನ ಆರ್‌.ವಿ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ 2006ರಲ್ಲಿ ಎಲೆಕ್ಟ್ರಾನ್ಸಿ್‌ ಇಂಜಿನಿಯರಿಂಗ್‌ ಪದವಿ ಮುಗಿಸಿರುವ ಇವರು ತಾಂತ್ರಿಕ ಹಿನ್ನೆಲೆಯನ್ನು ಹೊಂದಿದ್ದಾರೆ. ಬಳಿಕ ನಾಗರಿಕ ಸೇವೆಗೆ ಸೇರುವ ಆಕಾಂಕ್ಷೆಯೊಂದಿಗೆ ಶ್ರಮಿಸಿ, 2008ರ ಯುಪಿಎಸ್‌‍ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಯಶಸ್ಸು ಸಾಧಿಸಿದರು. ತರುವಾಯ 2009ರ ಬ್ಯಾಚ್‌ನ ಕರ್ನಾಟಕ ವೃಂದದ ಐಪಿಎಸ್‌‍ ಅಧಿಕಾರಿಯಾಗಿ ಇವರು ಆಯ್ಕೆಯಾದರು.

ಪೊಲೀಸ್‌‍ ಇಲಾಖೆಯಲ್ಲಿ ತಂತ್ರಜ್ಞಾನ ಆಧಾರಿತ ಪೊಲೀಸ್‌‍ ವ್ಯವಸ್ಥೆ ಹಾಗೂ ಸಮರ್ಥ ಆಡಳಿತಕ್ಕಾಗಿ ಅನುಚೇತ್‌ ಅವರು ಹೆಸರಾಗಿದ್ದಾರೆ. ಈ ಹಿಂದೆ ಇವರು ಕೈಗೊಂಡ ಅತ್ಯುತ್ತಮ ತನಿಖಾ ಕಾರ್ಯಗಳನ್ನು ಗುರುತಿಸಿ ಕೇಂದ್ರ ಸರ್ಕಾರವು ಇವರಿಗೆ ಪ್ರತಿಷ್ಠಿತ ಕೇಂದ್ರ ಗೃಹ ಸಚಿವರ ತನಿಖೆಗಾಗಿ ಅತ್ಯುತ್ತಮ ಪದಕ ನೀಡಿ ಗೌರವಿಸಿದೆ.

2011ರಲ್ಲಿ ಪುತ್ತೂರಿನ ಸಹಾಯಕ ಪೊಲೀಸ್‌‍ ಅಧೀಕ್ಷಕರಾಗಿ ತಮ ವೃತ್ತಿಜೀವನ ಆರಂಭಿಸಿದ ಇವರು, ಆ ಬಳಿಕ ಸಿಐಡಿ ವಿಭಾಗದ ಹಾಗೂ ಚಿತ್ರದುರ್ಗದ ಎಸ್ಪಿ ಆಗಿ ಮತ್ತು ಬೆಂಗಳೂರು ನಗರದ ಪಶ್ಚಿಮ ಹಾಗೂ ಕೇಂದ್ರ ವಿಭಾಗದ ಡಿಸಿಪಿ ಆಗಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.

ಬೆಂಗಳೂರು ನಗರ ಸಂಚಾರಿ ವಿಭಾಗದ ಜಂಟಿ ಪೊಲೀಸ್‌‍ ಕಮಿಷನರ್‌ ಆಗಿ ಅತ್ಯಂತ ಯಶಸ್ವಿಯಾಗಿ ಸೇವೆ ಸಲ್ಲಿಸಿ, ನಗರದ ಸಂಚಾರ ನಿಯಂತ್ರಣಕ್ಕೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಅಳವಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಹ್ದುೆಗೆ ಬರುವ ಮುನ್ನ ಇವರು ಪೊಲೀಸ್‌‍ ನೇಮಕಾತಿ ವಿಭಾಗದ ಡಿಐಜಿಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ವಾರ್ತಾ ಇಲಾಖೆಯ ಜೊತೆಗೆ ಯುವ ಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ಆಯುಕ್ತರ ಹೆಚ್ಚುವರಿ ಪ್ರಭಾರದಲ್ಲೂ ಅನುಚೇತನ್‌ ಅವರಿಗೆ ಜವಾಬ್ದಾರಿ ವಹಿಸಿ ಸರ್ಕಾರ ಆದೇಶಿಸಿದೆ. ವಾರ್ತಾ ಇಲಾಖೆಯ ಕಾರ್ಯವೈಖರಿಗೆ ಇವರು ಹೊಸ ವೇಗ ನೀಡಬಲ್ಲ ಸಾಮರ್ಥ್ಯ ಹೊಂದಿದ್ದಾರೆ.

ಈ ಸಂದರ್ಭದಲ್ಲಿ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ್,ಸಿದ್ದೇಶ್ವರಪ್ಪ ಜಿಬಿ, ಸಿ.ಆರ್.ನವೀನ್, ಉಪನಿರ್ದೇಶಕರಾದ ಬಿ.ಕೆ.ರಾಮಲಿಂಗಪ್ಪ, ಶಫಿ ಸಾದುದ್ಧಿನ್ ಸೇರಿದಂತೆ ಇತರರರು ಇದ್ದರು.

RELATED ARTICLES

Latest News