Monday, December 8, 2025
Homeರಾಜ್ಯಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಸೂಕ್ತ ಕ್ರಮ

ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಸೂಕ್ತ ಕ್ರಮ

Appropriate action against private hospitals performing cesarean deliveries

ಬೆಳಗಾವಿ,ಡಿ.8– ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂ ರಾವ್ ತಿಳಿಸಿದರು.

ವಿಧಾನ ಪರಿಷತ್ನಲಿಂದ್ಲು ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವಂತಹ ಖಾಸಗಿ ಆಸ್ಪತ್ರೆಗಳನ್ನು ನಿರ್ದಿಷ್ಟವಾಗಿ ಗುರುತಿಸಿರುವುದಿಲ್ಲ ಹಾಗೂ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡಿರುವ ಬಗ್ಗೆ, ಜಿಲ್ಲಾ, ಕೆ.ಪಿ.ಎಂ.ಇ. ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರದಲ್ಲಿ ಯಾವುದೇ ದೂರುಗಳು ಸಾರ್ವಜನಿಕರಿಂದ ಸ್ವೀಕೃತವಾಗಿರುವುದಿಲ್ಲ ಎಂದು ತಿಳಿಸಿದರು.

ಈ ಬಗ್ಗೆ ದೂರುಗಳು ಬಂದಲ್ಲಿ ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆಪಿಎಂಇ ಅಧಿನಿಯಮದ ಸೆಕ್ಷನ್ 15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು ಎಂದರು. ಗರ್ಭಿಣಿಯರಿಗೆ ತಪಾಸಣೆ ಮಾಡುವ ಸಂದರ್ಭದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಅನುಸರಿಬೇಕಾದ ನೀತಿ ನಿಯಮಗಳಿದ್ದು,ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆ.ಪಿ.ಎಂ.ಇ, ಅಧಿನಿಯಮದ ಸೆಕ್ಷನ್ 15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

RELATED ARTICLES

Latest News