Saturday, April 11, 2026
Homeರಾಜ್ಯರಾಮನಗರಲ್ಲಿ ಒಡೆಯರ್‌ ಎಕ್ಸ್ ಪ್ರೆಸ್‌‍ ರೈಲು ನಿಲುಗಡೆಗೆ ಅನುಮೋದನೆ : ರೈಲ್ವೇ ಸಚಿವರಿಗೆ ಧನ್ಯವಾದ ಹೇಳಿದ...

ರಾಮನಗರಲ್ಲಿ ಒಡೆಯರ್‌ ಎಕ್ಸ್ ಪ್ರೆಸ್‌‍ ರೈಲು ನಿಲುಗಡೆಗೆ ಅನುಮೋದನೆ : ರೈಲ್ವೇ ಸಚಿವರಿಗೆ ಧನ್ಯವಾದ ಹೇಳಿದ ಎಚ್‌ಡಿಕೆ

Approval for Wodeyar Express train to stop in Ramanagara: HDK thanks Railway Minister

ನವದೆಹಲಿ,ಮಾ.26- ರಾಜ್ಯದ ಪ್ರಾದೇಶಿಕ ರೈಲು ಸಂಪರ್ಕಕ್ಕೆ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದ್ದು, ಮೈಸೂರು-ಕೆಎಸ್‌‍ಆರ್‌ ಬೆಂಗಳೂರು ನಡುವೆ ನಿತ್ಯ ಸಂಚರಿಸಲಿರುವ ಒಡೆಯರ್‌ ಎಕ್ಸ್ ಪ್ರೆಸ್‌‍ ರೈಲು ರಾಮನಗರದಲ್ಲಿ ನಿಲುಗಡೆಗೆ ಅನುಮೋದನೆ ನೀಡಲಾಗಿದೆ.

ಈ ಬಗ್ಗೆ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ್‌ ಅವರಿಗೆ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಮಂತ್ರಿಗಳಾದ ಹೆಚ್‌.ಡಿ.ಕುಮಾರಸ್ವಾಮಿ ಅವರು ಮಾಡಿದ್ದ ಮನವಿ ಫಲಪ್ರದವಾಗಿದೆ.
ಇದೇ ಮಾ.24ರಂದು ರೈಲ್ವೆ ಸಚಿವಾಲಯ ಈ ಬಗ್ಗೆ ಆದೇಶ ಹೊರಡಿಸಿದೆ. ಈ ಮೂಲಕ ರಾಮನಗರದಿಂದ ನಿತ್ಯವೂ ಬೆಂಗಳೂರಿಗೆ ಸಂಚರಿಸುವ ಪ್ರಯಾಣಿಕರಿಗೆ ಹೆಚ್ಚು ಅನುಕೂಲ ಆಗಲಿದೆ. ಈ ಬಗ್ಗೆ ಸಚಿವ ಕುಮಾರಸ್ವಾಮಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಫೆ.4ರಂದು ಹೆಚ್‌.ಡಿ.ಕುಮಾರಸ್ವಾಮಿ ಅವರು ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಪ್ರತಿನಿತ್ಯವೂ ರಾಮನಗರದಿಂದ ಸಾವಿರಾರು ಪ್ರಯಾಣಿಕರು ಬೆಂಗಳೂರಿಗೆ ಉದ್ಯೋಗ, ಶಿಕ್ಷಣ, ವ್ಯಾಪಾರ ಇತ್ಯಾದಿ ಉದ್ದೇಶಗಳಿಗೆ ಹೋಗಿ ಬರುತ್ತಾರೆ. ಅದರಲ್ಲಿಯೂ ಮುಖ್ಯವಾಗಿ ಗಾರ್ಮೆಂಟ್ಸ್ ಉದ್ಯಮದಲ್ಲಿ ಸಾವಿರಾರು ಮಹಿಳೆಯರು ಕೆಲಸಕ್ಕಾಗಿ ರಾಜಧಾನಿಗೆ ದಿನನಿತ್ಯವೂ ಹೋಗಿ ಬರುತ್ತಾರೆ. ಅಲ್ಲದೆ, ಶಿಕ್ಷಣಕ್ಕೆ ವಿದ್ಯಾರ್ಥಿಗಳು ಹೋಗಿ ಬರುತ್ತಾರೆ. ಕೂಲಿ ಕಾರ್ಮಿಕರಿಗೆ ಕೂಡ ಈ ರೈಲು ನಿಲುಗಡೆಯಿಂದ ಹೆಚ್ಚು ಪ್ರಯೋಜನ ಆಗಲಿದೆ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಮನಗರದಲ್ಲಿ ಒಡೆಯರ್‌ ಎಕ್‌್ಸಪ್ರೆಸ್‌‍ ರೈಲು ನಿಲುಗಡೆ ನೀಡಬೇಕು ಎಂಬುದು ಈ ಭಾಗದ ದೀರ್ಘಕಾಲದ ಸಾರ್ವಜನಿಕ ಬೇಡಿಕೆ ಆಗಿತ್ತು. ಜನರ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಬೆಂಗಳೂರು ಮತ್ತು ಮೈಸೂರು ನಡುವೆ ದೊಡ್ಡ ಪ್ರಮಾಣದಷ್ಟು ಜನರು ಪ್ರಯಾಣ ಮಾಡುತ್ತಾರೆ. ರಾಜ್ಯದಲ್ಲಿಯೇ ಅತಿಹೆಚ್ಚು ಜನರು ಸಂಚರಿಸುವ ಕಾರಿಡಾರ್‌ಗಳಲ್ಲಿ ಇದೂ ಒಂದಾಗಿದ್ದು, ಈ ಉಪಕ್ರಮದಿಂದ ರಾಮನಗರ ಜಿಲ್ಲೆಯ ಜನರಿಗೆ ಹೆಚ್ಚು ಅನುಕೂಲ ಆಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಮೈಸೂರು ಮತ್ತು ಕೆಎಸ್‌‍ಆರ್‌ ಬೆಂಗಳೂರು ನಡುವೆ ಸಂಚರಿಸುವ ಒಡೆಯರ್‌ ಎಕ್‌್ಸಪ್ರೆಸ್‌‍ ರಾಮನಗರದಲ್ಲಿ ನಿಲ್ಲುತ್ತದೆ. ಈ ನಿಲುಗಡೆಗೆ ಅನುಮೋದನೆ ನೀಡಿದ ಕೇಂದ್ರದ ರೆಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಹೃದಯಪೂರ್ವಕ ಧನ್ಯವಾದಗಳು. ಇತ್ತೀಚೆಗೆ ರೆಲ್ವೆ ಸಚಿವರ ಜತೆ ನಡೆದ ಭೇಟಿ ಸಂದರ್ಭದಲ್ಲಿ ಈ ಬಗ್ಗೆ ಮನವಿ ಮಾಡಲಾಗಿತ್ತು. ಈ ವಿನಂತಿ ಮೇರೆಗೆ ರೇಷೆನಾಡು ರಾಮನಗರ ಜಿಲ್ಲೆಯ ರೈಲು ಪ್ರಯಾಣಿಕರಿಗೆ ಬಹಳಷ್ಟು ಅನುಕೂಲವಾಗುವ ನಿರ್ಧಾರವನ್ನು ಕೈಗೊಂಡಿದ್ದಾರೆ.

ಪ್ರಧಾನಿಗಳಾದ ನರೇಂದ್ರ ಮೋದಿ ಅವರ ದೂರದೃಷ್ಟಿ ನಾಯಕತ್ವದಲ್ಲಿ ರಾಷ್ಟ್ರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸಲಾಗುತ್ತಿದೆ ಎಂದಿದ್ದಾರೆ.

RELATED ARTICLES

Latest News