ಬೆಂಗಳೂರು,ಡಿ.20- ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಿ, ಅಕ್ರಮ ವಲಸಿಗರ ಮೇಲೆ ಕಠಿಣ ಕ್ರಮಕೈಗೊಂಡು ಅವರನ್ನು ಹೊರದಬ್ಬುವ ಕೆಲಸ ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ತಮ ಸಾಮಾಜಿಕ ಜಾಲ ತಾಣ ಎ್ಸ್‌ನಲ್ಲಿ ಪ್ಟೋ್ ಮಾಡಿರುವ ಅವರು, ರಾಜ್ಯದೆಲ್ಲೆಡೆ ಅಕ್ರಮ ವಲಸಿಗರ ಪಿಡುಗು ಮಿತಿ ಮೀರಿದೆ. ರಾಜ್ಯದಲ್ಲಿರುವ ಸುಮಾರು 20 ಲಕ್ಷ ಅಕ್ರಮ ವಲಸಿಗರನ್ನು ಹೊರಹಾಕುವ ಬದಲು ಅವರನ್ನು ಮತ ಬ್ಯಾಂಕ್‌ಗಾಗಿ ಪೋಷಿಸುವ ಕೆಲಸವನ್ನು ಸರ್ಕಾರ ವ್ಯವಸ್ಥಿತವಾಗಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಅಕ್ರಮ ವಲಸಿಗರು ರಾಷ್ಟ್ರೀಯ ಭದ್ರತೆಗೆ ಅಪಾಯ ತಂದೊಡ್ಡುತ್ತಿದ್ದಾರೆ. ಚುನಾವಣಾ ಆಯೋಗವು ಖಐಖ ಮೂಲಕ ಮತದಾರರ ಪಟ್ಟಿಯಿಂದ ಅಕ್ರಮ ವಲಸಿಗರನ್ನು ಹೊರಹಾಕಲು ಮುಂದಾದರೆ, ಕಾಂಗ್ರೆಸ್ ಪಕ್ಷವು ಅವರ ಪರವಾಗಿ ಮೃದು ಧೋರಣೆ ತಾಳಿ ಮತಗಳ್ಳತನ ಎಂಬ ಕುಂಟು ನೆಪವೊಡ್ಡಿ ಬೀದಿಗಿಳಿದು ನಾಟಕ ಮಾಡುತ್ತಿದೆ.
ಕೊಲೆ, ಹಲ್ಲೆ, ಸುಲಿಗೆ, ದರೋಡೆ, ಅತ್ಯಾಚಾರ ಮತ್ತು ಗಲಭೆ ಪ್ರಕರಣದಲ್ಲಿ ಈ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಿದೆ. ಕಾಂಗ್ರೆಸ್ ಸರ್ಕಾರದ ಅತಿಯಾದ ಓಲೈಕೆ ರಾಜಕಾರಣದ ಕಾರಣಕ್ಕೆ ಅವರಿಗೆ ಬೇಕಾದಂತಹ ದಾಖಲಾತಿಗಳು ಅಕ್ರಮವಾಗಿ ಸಿಗುತ್ತಿದೆ ಎಂದು ದೂರಿದ್ದಾರೆ.
ಮತ್ತೊಂದು ಪ್ಟೋ್‌ನಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರು ತಮ ಹಾಗು ತಮ ಕುಟುಂಬ ಸದಸ್ಯರ ಮೇಲೆ ಹನಿ ಟ್ರ್ಯಾಪ್ ಪ್ರಯತ್ನಗಳು ನಡೆದಿವೆ ಎಂದು ಸದನದ ಒಳಗೆ ಆರೋಪ ಮಾಡಿ ತನಿಖೆಗೆ ಆಗ್ರಹಿಸಿದ ನಂತರ ಈಗ ಮತ್ತೊಬ್ಬ ಕಾಂಗ್ರೆಸ್ ಸಚಿವ ತಮ ಹೆಸರಿಗೆ ಮಸಿ ಬಳಿಯಲು ಸ್ವಪಕ್ಷದವರಿಂದಲೇ ಷಡ್ಯಂತ್ರ ನಡೆಯುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ತಮ ಮೇಲೆ ಬಂದಿರುವ ಭೂಕಬಳಿಕೆ ಆರೋಪಗಳಿಗೆ ಸ್ವಪಕ್ಷದವರೇ ಕಾರಣ ಎಂದು ಹೇಳುವ ಮೂಲಕ ಕಂದಾಯ ಸಚಿವರು ಕಾಂಗ್ರೆಸ್ ಪಕ್ಷದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಆಂತರಿಕ ಕಚ್ಚಾಟಕ್ಕೆ ಕನ್ನಡಿ ಹಿಡಿದಿದ್ದಾರೆ.
ಇಷ್ಟಕ್ಕೂ ಪದೇ ಪದೇ ಸಿಎಂ ಸಿದ್ದರಾಮಯ್ಯ ಅವರ ಗುಂಪಿನಲ್ಲಿ ಗುರುತಿಸಿಕೊಂಡಿರುವ ನಾಯಕರೇ ಈ ರೀತಿ ಟಾರ್ಗೆಟ್ ಆಗುತ್ತಿರುವುದು ಕಾಕತಾಳೀಯವೋ ಅಥವಾ ವ್ಯವಸ್ಥಿತ ಕುತಂತ್ರವೋ ಈ ಷಡ್ಯಂತ್ರದ ಹಿಂದಿರುವ ಮಹಾನಾಯಕ ಯಾರು ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟದ ಬಗ್ಗೆ ನಮ ಪಕ್ಷಕ್ಕೆ ಯಾವುದೇ ಆಸಕ್ತಿಯಿಲ್ಲ. ಆದರೆ ಆಡಳಿತ ಪಕ್ಷವು ಈ ರೀತಿ ಆಂತರಿಕ ಕಚ್ಚಾಟದಲ್ಲಿ ಮುಳುಗಿ ಆಡಳಿತ ಮತ್ತು ಅಭಿವೃದ್ಧಿಯ ಮೇಲೆ ದುಷ್ಪರಿಣಾಮ ಬೀರುತ್ತಿರುವಾಗ ಅದರ ಬಗ್ಗೆ ದನಿ ಎತ್ತುವುದು ಜವಾಬ್ದಾರಿಯುತ ವಿಪಕ್ಷ ನಾಯಕನಾಗಿ ನನ್ನ ಜವಾಬ್ದಾರಿ. ಇದಕ್ಕೆ ಎಐಸಿಸಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಉತ್ತರ ನೀಡಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ.
