Tuesday, April 21, 2026
Homeರಾಜ್ಯಮಡಿಕೇರಿಯ ನಾಪೋಕ್ಲುವಿನಲ್ಲಿ ಹಿಂದೂ ಯುವಕರ ಮೇಲೆ ಹಲ್ಲೆ ಪ್ರಕರಣ : ನಾಲ್ವರ ಬಂಧನ

ಮಡಿಕೇರಿಯ ನಾಪೋಕ್ಲುವಿನಲ್ಲಿ ಹಿಂದೂ ಯುವಕರ ಮೇಲೆ ಹಲ್ಲೆ ಪ್ರಕರಣ : ನಾಲ್ವರ ಬಂಧನ

Attack on Hindu youth in Napoklu, Madikeri: Four arrested

ಬೆಂಗಳೂರು,ಫೆ.28- ಮಡಿಕೇರಿ ಜಿಲ್ಲೆಯ ನಾಪೋಕ್ಲುವಿನಲ್ಲಿ ಹಿಂದೂ ಯುವಕರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ನಾಲ್ವರು ದುರ್ಷ್ಕಮಿಗಳನ್ನು ನಾಪೋಕ್ಲು ಠಾಣೆ ಪೊಲೀಸರು ಬಂಧಿಸಿದ್ದಾರೆ.ರಶೀದ್‌ ಸಿದ್ದಿಕ್‌, ಸುಹೇಲ್‌ ರಾಫಿ ಸೇರಿದಂತೆ ನಾಲ್ವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

ನಾಪೋಕ್ಲುವಿನಲ್ಲಿ ಹಿಂದೂ ಸಂಗಮ ಕಾರ್ಯಕ್ರಮದ ಅಂಗವಾಗಿ ಹಿಂದೂ ಯುವಕರು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದಾಗ ದುರ್ಷ್ಕಮಿಗಳು ವಿನಾಕಾರಣ ಜಗಳ ತೆಗೆದು ನಮ ಪ್ರದೇಶದಲ್ಲಿ ಏಕೆ ಪ್ರಚಾರ ಮಾಡುತ್ತಿದ್ದೀರ ಎಂದು ಪ್ರಶ್ನಿಸಿ ಹಲ್ಲೆ ನಡೆಸಿದ್ದಾರೆ.

ಈ ಘಟನೆ ನೋಡ ನೋಡುತ್ತಿದ್ದಂತೆ ಕೈ-ಕೈ ಮಿಲಾಯಿಸುವ ಹಂತಕ್ಕೆ ತಿರುಗಿದಾಗ ಆಕ್ರೋಶಗೊಂಡ ಹಿಂದೂ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಕ್ರಮಕ್ಕೆ ಒತ್ತಾಯಿಸಿದ್ದರು. ಹಲ್ಲೆಯಿಂದ ಹಿಂದೂ ಕಾರ್ಯಕರ್ತ ಗೌತಮ್‌ ಎಂಬಾತ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ನಾಪೋಕ್ಲು ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪ್ರತಿಭಟನಾ ನಿರತರನ್ನು ಸಮಾಧಾನ ಪಡಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಘಟನಾ ಸ್ಥಳದ ಸುತ್ತಮುತ್ತಲಿನ ರಸ್ತೆಗಳಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ನಾಲ್ವರ ದುರ್ಷ್ಕಮಿಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News