Homeರಾಜ್ಯಕಾಫಿ ತೋಟದಲ್ಲಿ ಅಕ್ರಮವಾಗಿ ನೆಲೆಸಿದ್ದ ಒಂದೇ ಕುಟುಂಬದ ಬಾಂಗ್ಲಾ ಪ್ರಜೆಗಳು ವಶಕ್ಕೆ

ಕಾಫಿ ತೋಟದಲ್ಲಿ ಅಕ್ರಮವಾಗಿ ನೆಲೆಸಿದ್ದ ಒಂದೇ ಕುಟುಂಬದ ಬಾಂಗ್ಲಾ ಪ್ರಜೆಗಳು ವಶಕ್ಕೆ

ಬೆಂಗಳೂರು,ಅ.14- ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆಯ ಕಾಫಿ ತೋಟದಲ್ಲಿ ಅಕ್ರಮವಾಗಿ ನೆಲೆಸಿದ್ದ ಒಂದೇ ಕುಟುಂಬದ ನಾಲ್ವರನ್ನು ಪೊನ್ನಂಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ದೊಡ್ಡ ಮಟ್ಟದಲ್ಲಿ ಆಂದೋಲನ ನಡೆದಿದೆ.ಈ ನಾಲ್ವರು ಬಾಂಗ್ಲಾ ವಲಸಿಗರು ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ಕಳೆದ ಎರಡು ತಿಂಗಳ ಹಿಂದೆ ಕೊಡಗಿಗೆ ಹೋಗಿ ಕಾಫಿ ಎಸ್ಟೇಟ್‌ನಲ್ಲಿ ಕೆಲಸ ಮಾಡಿಕೊಂಡು ಅಲ್ಲೇ ಆಶ್ರಯ ಪಡೆದಿದ್ದಾರೆ.

ಅಕ್ರಮ ಬಾಂಗ್ಲಾ ವಲಸಿಗರು ಕಾಫಿ ಎಸ್ಟೇಟ್‌ನಲ್ಲಿ ಇರುವ ಬಗ್ಗೆ ಸ್ಥಳೀಯ ಸಂಘಟನೆಗಳಿಗೆ ಮಾಹಿತಿ ಲಭಿಸಿದ್ದು ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.ಪೊನ್ನಂಪೇಟೆ ಠಾಣೆ ಪೊಲೀಸರು ಅಲ್ಲಿಗೆ ತೆರಳಿ ಅವರನ್ನು ವಶಕ್ಕೆ ಪಡೆದು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ವಿಚಾರಣೆ ವೇಳೆ ತಾವು ಬಾಂಗ್ಲಾದೇಶದ ನಿಯಾಸ್ಪ್‌ ಗ್ರಾಮದವರಾಗಿದ್ದು,ಬ್ರೋಕರ್‌ರೊಬ್ಬರ ನೆರವಿನಿಂದ ಗಡಿದಾಟಿ ಭಾರತಕ್ಕೆ ಬಂದಿದ್ದಾಗಿ ತಿಳಿಸಿದ್ದಾರೆ.ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ನಗರದ ಬೆಳ್ಳಂದೂರು, ಮಾರತಹಳ್ಳಿ ಮತ್ತು ವರ್ತೂರು ಭಾಗಗಳಲ್ಲಿ ನಗರ ಪೊಲೀಸರು ನಡೆಸಿದ ಬೃಹತ್‌ ಕಾರ್ಯಾಚರಣೆಯಲ್ಲಿ 160 ಕ್ಕೂ ಹೆಚ್ಚು ಬಾಂಗ್ಲಾ ಪ್ರಜೆಗಳನ್ನು ಪತ್ತೆಹಚ್ಚಿ ಅವರುಗಳನ್ನು ರೈಲು ಹಾಗೂ ವಿಮಾನಗಳ ಮೂಲಕ ಸ್ವದೇಶಕ್ಕೆ ಗಡಿಪಾರು ಮಾಡಿದ್ದಾರೆ.

ಈ ನಡುವೆಯೂ ಮತ್ತೆ ಅಕ್ರಮ ಬಾಂಗ್ಲಾ ವಲಸಿಗರು ಭಾರತಕ್ಕೆ ನುಸುಳಿದ್ದು, ಇದೀಗ ಮಡಿಕೇರಿ ಹಾಗೂ ಮಲೆನಾಡು ಭಾಗಗಳ ಕಾಫಿ ತೋಟಗಳಲ್ಲಿ ಆಶ್ರಯ ಪಡೆದುಕೊಳ್ಳುತ್ತಿರುವುದು ಕಂಡು ಬಂದಿದೆ.ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದವರನ್ನು ಪತ್ತೆಹಚ್ಚಲು ಆಪರೇಷನ್‌ ಮುಕ್ತ ಹೆಸರಿನಲ್ಲಿ ಕಾರ್ಯಾಚರಣೆ ಮುಂದುವರೆದಿದೆ.

RELATED ARTICLES
spot_img

Latest News