ಬೆಂಗಳೂರು, ಮೇ 3-ಹಲವು ನಾಟಕೀಯ ಬೆಳವಣಿಗೆಗಳನ್ನು ಕಂಡ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್ ಜೀವರಾಜ್ ಮುನ್ನಡೆ ಸಾಧಿಸಿದ್ದಾರೆ.
ಅಧಿಕೃತ ಲಿತಾಂಶ ಘೋಷಣೆಯಾಗುವುದಷ್ಟೇ ಬಾಕಿ ಉಳಿದಿದ್ದು, ಚುನಾವಣಾ ಆಯೋಗ ಯಾವುದೇ ಸಂದರ್ಭದಲ್ಲಿ ಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ.ಅಂಚೆ ಮತಗಳ ಎಣಿಕೆ ಪೂರ್ಣಗೊಂಡಿದ್ದು, ಚಿಕ್ಕಮಗಳೂರು ಚುನಾವಣಾಧಿಕಾರಿ ಹೈಕೋರ್ಟ್ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಿದ್ದಾರೆ.
ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್ ಜೀವರಾಜ್ ಅವರು 52 ಮತಗಳ ಮುನ್ನಡೆ ಸಾಧಿಸಿದ್ದು,ಬಹುತೇಕ ಗೆಲುವು ಸಾಧಿಸಿದ್ದಾರೆ.2023ರ ಚುನಾವಣೆಯಲ್ಲಿ ಗೆದ್ದಿದ್ದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಡಿ.ಟಿ ರಾಜೇಗೌಡ ಅವರಿಗೆ ಲಿತಾಂಶ ಮರ್ಮಾಘಾತ ನೀಡಿದೆ.
ಚುನಾವಣಾ ಅಧಿಕಾರಿಗಳು ಹಾಗೂ ಬಿಜೆಪಿ ಏಜೆಂಟರು ಅಂಚೆ ಮತಗಳನ್ನು ತಿರುಚಿದ್ದು, ವಾಮ ಮಾರ್ಗದಲ್ಲಿ ಗೆಲುವು ಸಾಧಿಸಿದ್ದಾರೆ.ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ ಎಂದು ರಾಜೇಗೌಡ ಹೇಳಿದ್ದಾರೆ.
ಮತ ಪತ್ರಗಳನ್ನುಸ್ಟ್ರಾಂಗ್ ರೂಂನಲ್ಲಿ ಸೀಲ್ ಮಾಡಿದ ಬಳಿಕ ಚುನಾವಣಾ ಅಧಿಕಾರಿ ಗೌರವ ಕುಮಾರ್ ಶೆಟ್ಟಿ ಮಾತನಾಡಿ, ಹೈಕೋರ್ಟ್ ಸೂಚನೆಯಂತೆ ಅಂಚೆ ಮತಗಳ ಮರು ಎಣಿಕೆ ಪೂರ್ಣವಾಗಿದೆ. ಮರು ಎಣಿಕೆ ನಡೆದಿರುವುದು ಅಂಚೆ ಮತಗಳು ಮಾತ್ರ 1822 ಅಂಚೆ ಮತಗಳನ್ನ ಮರು ಎಣಿಕೆ ಮಾಡಲಾಗಿದೆ. ಹ್ಯಾಂಡ್ ಬುಕ್ ನಿಯಮಗಳ ಪ್ರಕಾರ ಸಿಂಧು ಮತ್ತು ಅಸಿಂಧು ಮತಗಳನ್ನು ನಿರ್ಧರಿಸಲಾಗಿದೆ.ಎಲ್ಲಾ ವರದಿಗಳನ್ನು ಚುನಾವಣಾ ಆಯೋಗ ಮತ್ತು ಹೈಕೋರ್ಟ್‌ಗೆ ಸಲ್ಲಿಕೆ ಮಾಡಲಾಗಿದೆ. ಮತ ಟ್ಯಾಂಪರಿಂಗ್ ಬಗ್ಗೆ ಪ್ರತಿಕ್ರಿಯೆ ನೀಡಲು ನನಗೆ ಅಧಿಕಾರ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಇನ್ನು ಚುನಾವಣಾ ಅಧಿಕಾರಿಗಳು ಹಾಗೂ ಬಿಜೆಪಿ ಏಜೆಂಟರ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ರಾಜೇಗೌಡ ಅವರ ಪರವಾಗಿ ಕಾಂಗ್ರೆಸ್ ಮುಖಂಡ ಸುಧೀರ್ ಮುರೋಳಿ ಅವರು ದೂರು ನೀಡಿದ್ದಾರೆ.ಇದುವರೆಗೂ ಚುನಾವಣಾ ಅಧಿಕಾರಿಗಳು ಲಿತಾಂಶ ಘೋಷಣೆ ಮಾಡಿಲ್ಲ. ಮತ ಎಣಿಕೆಯ ಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ರವಾನೆ ಮಾಡಲಾಗಿದೆ. ಇದು ಸೂಕ್ಷ ವಿಚಾರವಾಗಿರುವುದರಿಂದ ಲಿತಾಂಶ ಘೋಷಣೆ ಬಾಕಿ ಇದೆ.
ಹೈಕೋರ್ಟ್ ಆದೇಶದಂತೆ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಗೆಲುವು ಎಂದು ಘೋಷಿಸಲ್ಪಟ್ಟಿದ್ದ ಹಾಲಿ ಶಾಸಕ ಕಾಂಗ್ರೆಸ್ ನ ಟಿ.ಡಿ. ರಾಜೇಗೌಡ ಅವರಿಗೆ ಭಾರೀ ಹಿನ್ನಡೆಯಾಗಿದೆ. ಅಂಚೆ ಮತಗಳ ಮರು ಮತಎಣಿಕೆಯಲ್ಲಿ ಟಿ.ಡಿ ರಾಜೇಗೌಡ ಅವರು ವಿಜಯ ಸಾಧಿಸಿದರು ಎಂದು ಹೇಳಲಾಗಿತ್ತು. ಆದರೆ ಮತ ಏಣಿಕೆಯಲ್ಲಿ ಭಾರೀ ಗೊಂದಲಗಳು ಉಂಟಾಗಿತ್ತು.
ನಿನ್ನೆ ಬೆಳಗ್ಗೆ ಏಳು ಗಂಟೆಗೆ ಆರಂಭವಾದ ಮತ ಎಣಿಕೆ ಮಧ್ಯರಾತ್ರಿಯವರೆಗೂ ನಡೆದು ಬೆಳಗ್ಗೆ ಎಲ್ಲ ಗೊಂದಲಗಳಿಗೆ ಮಹತ್ವದ ತಿರುವು ಸಿಕ್ಕಿತು. 2023ರ ಮೇ 13 ರಂದು ನಡೆದಿದ್ದ ಮತ ಎಣಿಕೆ ವೇಳೆ ಸಿಂಧು ಎಂದು ಪರಿಗಣಿಸಲಾಗಿದ್ದ ಮತಗಳು, ಈಗಿನ ಮರು ಎಣಿಕೆ ವೇಳೆ ತಿರಸ್ಕೃತಗೊಂಡಿವೆ.
ಮತಎಣಿಕೆ ಪತ್ರದಲ್ಲಿ ರಾಜೇಗೌಡ ಮತ್ತು ಮತ್ತೊಬ್ಬ ಅಭ್ಯರ್ಥಿ ಇಬ್ಬರಿಗೂ ಡಬ್ಬಲ್ ಟಿಕ್ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ 258 ಮತಗಳು ತಿರಸ್ಕೃತಗೊಂಡವು. ಈ ಹಿಂದೆ 569 ಅಂಚೆ ಮತಗಳನ್ನು ಪಡೆದಿದ್ದ ರಾಜೇಗೌಡರ ಪಟ್ಟಿಯಿಂದ 255 ಮತಗಳು ಮರು ಎಣಿಕೆ ವೇಳೆ ಕಡಿತಗೊಂಡವು. ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರಿಗೆ ಬಂದಿದ್ದ 692 ಅಂಚೆ ಮತಗಳಲ್ಲಿ ಕೇವಲ 2 ಮತಗಳು ಮಾತ್ರ ತಿರಸ್ಕೃತಗೊಂಡಿವೆ.
ಹಿನ್ನೆಲೆ: 2023ರ ಶೃಂಗೇರಿ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 1,822 ಅಂಚೆ ಮತಗಳು ಚಲಾವಣೆಯಾಗಿದ್ದವು. ಆದರೆ ಎಣಿಕೆ ವೇಳೆ 279 ಮತಗಳು ತಿರಸ್ಕೃತಗೊಂಡಿದ್ದವು. 3 ಮತಗಳು ನೋಟಾ ಎಂದು ಚಲಾವಣೆಯಾಗಿದ್ದವು. ಉಳಿದಂತೆ 1,540 ಮತಗಳನ್ನು ಗಣನೆಗೆ ತೆಗೆದುಕೊಂಡು ಎಣಿಕೆ ಮಾಡಲಾಗಿತ್ತು.
ಚುನಾವಣೆಯಲ್ಲಿ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರು 201 ಮತಗಳಿಂದ ಗೆಲುವು ಸಾಧಿಸಿದ್ದರು. ಇವರ ವಿರುದ್ಧ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಲಿತಾಂಶವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು. ಅಂಚೆ ಮತಗಳ ಮರು ಎಣಿಕೆಗೆ ಕೋರಿದರೂ ಚುನಾವಣಾಧಿಕಾರಿ ಅವಕಾಶ ನೀಡಲಿಲ್ಲ ಎಂಬುದು ಆರೋಪವಾಗಿತ್ತು.
ಅಂಚೆ ಮತಗಳ ಪೈಕಿ 279 ಮತಗಳನ್ನು ತಿರಸ್ಕಾರ ಮಾಡಿರುವುದು ಅನುಮಾನಕ್ಕೆ ಕಾರಣವಾಗಿತ್ತು.ಹಾಗಾಗಿ, ಮರು ಎಣಿಕೆಗೆ ಅವಕಾಶ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಹೈಕೋರ್ಟ್ ಆದೇಶ ಏನಿತ್ತು?
ಪ್ರಕರಣವನ್ನು ಪರಿಶೀಲನೆ ನಡೆಸಿದ್ದ ಹೈಕೋರ್ಟ್ ಏ.6 ರಂದು ಮಹತ್ವದ ಆದೇಶ ನೀಡಿತ್ತು. 2023ರ ಚುನಾವಣೆಯಲ್ಲಿ 279 ಅಂಚೆ ಮತಗಳನ್ನು ಮರು ಪರಿಶೀಲಿಸಿ ನಂತರ ಎಲ್ಲಾ ಅಂಚೆ ಮತಗಳನ್ನು ಎಣಿಕೆ ಮಾಡಬೇಕು. ಅಲ್ಲದೆ, ಹೊಸದಾಗಿ ಲಿತಾಂಶ ಪ್ರಕಟಿಸಬೇಕು ಎಂದು ಆದೇಶಿಸಿತ್ತು.
ಇದೇ ಸಂದರ್ಭದಲ್ಲಿ ಆಕ್ಷೇಪಣೆ ಸಲ್ಲಿಸಲು ಶಾಸಕ ರಾಜೇಗೌಡ ಅವರಿಗೆ ಎರಡು ವಾರ ಕಾಲಾವಕಾಶವನ್ನು ನೀಡಿತ್ತು.ಈ ಕುರಿತು ಬಿಜೆಪಿ ಅಭ್ಯರ್ಥಿ ಮಾತನಾಡಿದ್ದು, ಅಧಿಕೃತ ಅಂತರದ ಬಗ್ಗೆ ಏನೂ ಹೇಳಿಲ್ಲ. ಆದರೆ, ನಾನು ಮುನ್ನಡೆಯಲ್ಲಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. 3 ವರ್ಷದ ಕಾನೂನು ಹೋರಾಟಕ್ಕೆ ನ್ಯಾಯ ಸಿಕ್ಕಿದೆ ಎಂದು ಜೀವರಾಜ್ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ ದೂರು: ಹೈಕೋರ್ಟ್ ಹೊರಡಿಸಿದ ತೀರ್ಪಿನ ಪ್ರಕಾರ, ಸುಮಾರು 279 ಅಂಚೆ ಮತಪತ್ರಗಳನ್ನು ಮರು ಪರಿಶೀಲನೆ ಮತ್ತು ಮರು ಎಣಿಕೆ ಮಾಡಲಾಯಿತು. ಇವಿಎಂ ಮತಗಳ ಬಗ್ಗೆ ಯಾವುದೇ ಆದೇಶವಿರಲಿಲ್ಲ. ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮುರೋಳಿ ಅವರು ಅಂದಿನ ಚುನಾವಣಾಧಿಕಾರಿ ವೇದಮೂರ್ತಿ ವಿರುದ್ಧ ಅಂಚೆ ಮತಗಳ ಟ್ಯಾಂಪರಿಂಗ್ ಆರೋಪದ ಮೇಲೆ ನಗರ ಪೆಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮರು ಎಣಿಕೆಯಲ್ಲಿ ಇಷ್ಟೊಂದು ದೊಡ್ಡ ಮಟ್ಟದ ವ್ಯತ್ಯಾಸ ಕಂಡುಬಂದ ಬೆನ್ನಲ್ಲೇ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಶಾಸಕ ರಾಜೇಗೌಡ ಅವರು ಇಂದು ನಸುಕಿನ ಜಾವ 4 ಗಂಟೆಯವರೆಗೂ ನಗರ ಪೊಲೀಸ್ ಠಾಣೆಯಲ್ಲಿ ಬೀಡುಬಿಟ್ಟಿದ್ದರು.ರಾಜೇಗೌಡರ ಮತಪತ್ರಗಳಲ್ಲಿ ಡಬ್ಬಲ್ ಟಿಕ್ ಮಾಡಿ ಉದ್ದೇಶಪೂರ್ವಕವಾಗಿ ಅವುಗಳನ್ನು ತಿರಸ್ಕೃತಗೊಳಿಸಲಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ.
