ಬೆಂಗಳೂರು,ಫೆ.22- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಮಾಜಿ ಆಯುಕ್ತ ನಟೇಶ್‌ಬಡ್ತಿಗೆ ಲಂಚ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸ್ಪಷ್ಟಪಡಿಸಿದ್ದಾರೆ.
ನಾನು ಪ್ರಕರಣ ದಾಖಲು ಮಾಡುತ್ತಿದ್ದಂತೆಯೇ ತಮ್ಮ ತಪ್ಪನ್ನು ಒಪ್ಪಿಕೊಂಡು 14 ನಿವೇಶನಗಳನ್ನು ವಾಪಸ್ ನೀಡಿದ್ದಾರೆ. ನಿವೇಶನಗಳನ್ನು ವಾಪಸ್ ಕೊಟ್ಟದ್ದಕ್ಕಿಂತ ದೊಡ್ಡ ತಪ್ಪನ್ನು ನಾನು ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಕುಟುಕಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾಗಿ ಪೋಸ್ಟ್ ಹಾಕಿರುವ ಸ್ನೇಹಮಯಿ ಕೃಷ್ಣ, ಸ್ನೇಹಮಯಿ ಕೃಷ್ಣ ಮುಖ್ಯಮಂತ್ರಿ ಸಿದ್ದರಾಮಯ್ಯರ ಹೇಳಿಕೆಯನ್ನು ಉಲ್ಲೇಖಿಸಿ ವಿಮರ್ಶಿಸಿದ್ದಾರೆ.
ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ 14 ನಿವೇಶನಗಳನ್ನು ಕಾನೂನುಬದ್ಧವಾಗಿಯೇ ಪಡೆದಿದ್ದೇವೆಂದು ಹೇಳಿದ್ದನ್ನು ಉಲ್ಲೇಖಿಸಿದ್ದರು. ಆದರೆ ನಾನು ಪ್ರಕರಣ ದಾಖಲಿಸಿದ ತಕ್ಷಣವೇ ನಿವೇಶನಗಳನ್ನು ವಾಪಸ್ ನೀಡಿದ್ದರೂ ಪುನಃ ಅವರ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಹೆಸರನ್ನು ಉಲ್ಲೇಖ ಮಾಡಿದ್ದಕ್ಕೆ ಮಾತ್ರ ಕ್ಷಮೆ ಕೇಳಿದ್ದಾರೆ. ನಟೇಶ್ ಬಡ್ತಿ ಅವರಿಗೆ ಲಂಚ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಕ್ಷಮೆ ಕೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪೂರಕ ಸಾಕ್ಷ್ಯಾಧಾರಗಳನ್ನು ಒದಗಿಸಿದ್ದೇನೆ. ತನಿಖೆ ನಡೆಸಿದಾಗ ಪ್ರಭಾವಿ ವ್ಯಕ್ತಿ ಯಾರು ಎಂಬ ಸತ್ಯ ಹೊರಬರುತ್ತದೆ ಎಂದು ಸ್ಫೋಟಕ ಮಾಹಿತಿ ನೀಡಿದರು.
ಸ್ನೇಹಮಯಿ ಕೃಷ್ಣ ವಿನೋದ್ ಎಂಬವರು ಈ ವಿಚಾರದಲ್ಲಿ ಉಲ್ಟಾ ಹೊಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಸದ್ಯ ಪ್ರಭಾವಿಗೆ ಲಂಚ ಕೊಟ್ಟಿರುವುದು ಸತ್ಯ. ಲಂಚ ಪಡೆದ ಪ್ರಭಾವಿ ಯಾರು ಎಂಬುದನ್ನು ತನಿಖೆಯ ಬಳಿಕ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯರ ಹೇಳಿಕೆಯನ್ನು ಉಲ್ಲೇಖಿಸಿ, ಮನುಷ್ಯ ನಡೆಯುವಾಗ ಎಡವುದು ಸಹಜ. ಆದರೆ ತಪ್ಪನ್ನು ಒಪ್ಪಿಕೊಂಡು ಸರಿಪಡಿಸುವುದು ಮುಖ್ಯ ಎಂದು ಹೇಳಿದ್ದಾರೆ. ಈ ಪೋಸ್ಟ್‌ನಿಂದ ಈಗಾಗಲೇ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ. ನಟೇಶ್ ಬಡ್ತಿ ಮುಡಾ ಆಯುಕ್ತರಾಗಿದ್ದಾಗ ನಿವೇಶನಗಳ ವಿಚಾರದಲ್ಲಿ ಲಂಚ ಪಡೆದ ಆರೋಪ ಎದುರಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಸಾಕ್ಷಿಯಾಗಿ ಹೆಸರು ಕೇಳಿ ಬಂದಿರುವ ಸ್ನೇಹಮಯಿ ಕೃಷ್ಣ ಅವರು ತನಿಖೆಯಲ್ಲಿ ಸತ್ಯ ಹೊರಬರಲಿ ಎಂದು ಒತ್ತಾಯಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮಾಜಿ ಆಯುಕ್ತ ನಟೇಶ್ ಬಡ್ತಿಗೆ ಲಂಚ ಪಡೆದ ಆರೋಪದಲ್ಲಿ ಭ್ರಷ್ಟಾಚಾರ ಪ್ರಕರಣ ದಾಖಲಾಗಿದ್ದು, ಈಗ ಈ ವಿಚಾರದಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ. ಈ ಕುರಿತು ಕೃಷ್ಣ ಅವರು ವಿವರವಾದ ಸ್ಪಷ್ಟನೆ ನೀಡಿದ್ದಾರೆ.
