ಬಜೆಟ್ ಹೈಲೈಟ್ಸ್ : ಗೃಹಲಕ್ಷಿ ಗ್ಯಾರಂಟಿಗೆ ಬಜೆಟ್‌ನಲ್ಲಿ 28,608 ಕೋಟಿ ಮೀಸಲು
ಬೆಂಗಳೂರು, ಮಾ.6: ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷಿ ಯೋಜನೆಗೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ 28,608 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ಈ ಯೋಜನೆಯ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಸಿದ್ದರಾಮಯ್ಯ ಹೇಳಿದರು. ಜೊತೆಗೆ ಮೂಲಸೌಕರ್ಯ ಅಭಿವೃದ್ಧಿಗೂ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಎಂದರು. ಅಂಗನವಾಡಿ ಕಾರ್ಯಕರ್ತೆಯರು-ಸಹಾಯಕಿಯರಿಗೆ ಒಂದು ಜೊತೆ ಸಮವಸ್ತ್ರ ನೀಡಲಾಗುವುದೆಂದು ತಿಳಿಸಿದ್ದಾರೆ.
Copy and paste this URL into your WordPress site to embed
Copy and paste this code into your site to embed