ಚಿಕ್ಕಬಳ್ಳಾಪುರ,ನ.1- ಹಾಲು-ಮೊಸರು ನಂತರ ಈಗ ನ.5 ರಿಂದ ಸಾರಿಗೆ ಬಸ್ಗಳ ಪ್ರಯಾಣ ದರ ಹೆಚ್ಚಳ ಖಚಿತವಾಗಿದೆ. ಇಂದಿಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಾರಿಗೆ ಸಚಿವ ಬೈರತಿ ಸುರೇಶ್ ನಿಗಮ ಉಳಿಸಲು ಟಿಕಿಟ್ ದರ ಹೆಚ್ಚಳ ಅನಿವಾರ್ಯ ಎಂದು ಹೇಳಿದರು.ಕೇಂದ್ರ ಸರ್ಕಾರ ಕಳೆದ ಒಂದು ವರ್ಷದಲ್ಲಿ 5 ಬಾರಿ ಡೀಸೆಲ್ ಬೆಲೆ ಏರಿಕೆ ಮಾಡಿದೆ. ಇದರಿಂದ ನಮ ನಾಲ್ಕೂ ಸಾರಿಗೆ ನಿಗಮಗಳಿಗೆ ವಾರ್ಷಿಕ 2 ಸಾವಿರ ಕೋಟಿ ರೂಪಾಯಿ ನಷ್ಟ ಆಗುತ್ತಿದೆ. ಈಗಾಗಲೇ 9 ಸಾವಿರ ಕೋಟಿ ರೂ ನಷ್ಟದಲ್ಲಿವೆ ಎಂದು ಹೇಳಿದರು.
ಸದ್ಯ ದರ ಏರಿಕೆ ಆಗಲೇಬೇಕು ಎಂದರು. ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ದರ ಏರಿಕೆ ನಿರ್ಧಾರವನ್ನು ಕೈಗೊಳ್ಳುವ ಜವಾಬ್ದಾರಿಯನ್ನು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಸಂಪುಟ ಸಾರಿಗೆ ಇಲಾಖೆಗೆ ನೀಡಿದೆ ಎಂದು ಹೇಳಿದರು.ಎಷ್ಟು ಪ್ರಮಾಣದಲ್ಲಿ ದರ ಏರಿಕೆ ಎಂಬ ಪ್ರಶ್ನೆಗೆ ಸದ್ಯದಲ್ಲೇ ತಿಳಿಸಲಾಗುವುದು ಎಂದು ಸಚಿವರು ಹೇಳಿದರು.
ಈ ಹಿನ್ನೆಲೆಯಲ್ಲಿ ನ.4 ರಂದು ಇಲಾಖೆ ಮತ್ತು ಸಾರಿಗೆ ನಿಗಮಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಎಷ್ಟು ಪ್ರಮಾಣದಲ್ಲಿ ಹೆಚ್ಚಿಸಬೇಕೆಂದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಮತ್ತು ನವೆಂಬರ್ 5 ರಿಂದ ಹೊಸ ಪ್ರಯಾಣ ದರ ಜಾರಿಗೆ ಬರಲಿದೆ ಎಂದರು.
ಬಸ್ ಪ್ರಯಾಣ ದರ ಏರಿಕೆ ಮಾಡುವ ಬಗ್ಗೆ ಸಂಸದ ಡಾ. ಸುಧಾಕರ್ ಅವರು ಮಾಡಿರುವ ಟೀಕೆಗೆ ಸಚಿವ ಬೈರತಿ ಸುರೇಶ್ ತಿರುಗೇಟು ನೀಡಿದರು.
ಇತರೆ ರಾಜ್ಯಗಳಿಗೆ ಹೋಲಿಸಿದರೆ ನಮಲ್ಲಿ ಪ್ರಯಾಣ ದರ ಕಡಿಮೆ ಇದೆ. ಸುಧಾಕರ್ ಅವರು ಕಣ್ಣಿಗೆ ಬಟ್ಟೆ ಕಟ್ಟಿ ಮಾತನಾಡುವ ಬದಲು ಬಿಜೆಪಿ ಅ ಕಾರದಲ್ಲಿರುವ ರಾಜ್ಯಗಳಲ್ಲಿ ಪ್ರಯಾಣ ದರ ಎಷ್ಟಿದೆ ಎಂಬುದನ್ನು ಗಮನಿಸಲಿ. ಹಾಗಾದರೆ ನಷ್ಟದಲ್ಲಿರುವ ಸಾರಿಗೆ ಸಂಸ್ಥೆಗಳನ್ನು ಮುಚ್ಚಬೇಕಾ ಎಂದು ಕಿಡಿಕಾರಿದರು.
ಹಾಲಿನ ದರವನ್ನು ಹೆಚ್ಚಲು ಮಾಡಿರುವ ಬಗ್ಗೆ ಬಿಜೆಪಿಯವರು ಪ್ರತಿಭಟನೆ ಮಾಡಲಿ. ನಮ ಸರ್ಕಾರ ಸಾಕಷ್ಟದಲ್ಲಿರುವ ರೈತರಿಗೆ ನೆರವಾಗಬೇಕೆಂಬ ಉದ್ದೇಶದಿಂದ ಹಾಲಿನ ದರವನ್ನು ಹೆಚ್ಚಿಸಿದೆ ಎಂದರು.ಆದರೆ, ಬಿಜೆಪಿಯವರು ರೈತ ವಿರೋಧಿಧೋರಣೆ ಹೊಂದಿದ್ದಾರೆ. ಅವರಿಗೆ ಚುನಾವಣೆಯಲ್ಲಿ ರೈತರೇ ಪಾಠ ಕಲಿಸಲಿದ್ದಾರೆ ಎಂದು ಬೈರತಿ ಸುರೇಶ್ ಎಚ್ಚರಿಸಿದರು.
