Wednesday, December 3, 2025
Homeರಾಜ್ಯನ್ಯಾಷನಲ್‌ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲು : ರಾಜಕೀಯ ಪ್ರೇರಿತ ಎಂದ...

ನ್ಯಾಷನಲ್‌ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲು : ರಾಜಕೀಯ ಪ್ರೇರಿತ ಎಂದ ಸಿಎಂ ಸಿದ್ದು

Case filed against Rahul Gandhi in National Herald case: CM Sidaramaiah says it is politically motivated

ಬೆಂಗಳೂರು, ಡಿ.1- ನ್ಯಾಷನಲ್‌ ಹೆರಾಲ್ಡ್ ಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿರುವುದು ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ವಿಧಾನಸೌಧದ ಆವರಣದಲ್ಲಿಂದು ಮಾಜಿ ಮುಖ್ಯಮಂತ್ರಿ ಕೆಂಗಲ್‌ ಹನುಮಂತಯ್ಯ ಅವರ ಪುಣ್ಯ ಸರಣೆಯ ಅಂಗವಾಗಿ ಕೆಂಗಲ್‌ಅವರ ಭಾವಚಿತ್ರ ಹಾಗು ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ನ್ಯಾಷನಲ್‌ ಹೆರಾಲ್‌್ಡ ಪ್ರಕರಣದಲ್ಲಿ ದುರುದ್ದೇಶ ಪೂರ್ವಕವಾಗಿ ರಾಜಕೀಯ ಮಾಡಲಾಗುತ್ತಿದೆ ಎಂದು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಉಪಾಹಾರಕ್ಕೆ ತಮನ್ನು ಇನ್ನೂ ಕರೆದಿಲ್ಲ. ಬಹುಶಃ ಇವತ್ತು ಕರೆಯಬಹುದು. ಆಹ್ವಾನ ಬಂದರೆ ಅವರ ಮನೆಗೆ ಭೇಟಿ ನೀಡುತ್ತೇನೆ ಎಂದರು.

ಕೆಂಗಲ್‌ ದಕ್ಷ ಆಡಳಿತಗಾರರು:
ಕೆಂಗಲ್‌ ಹನುಮಂತಯ್ಯ ದಕ್ಷ ಆಡಳಿತಗಾರರಾಗಿದ್ದರು. ಸ್ವಾತಂತ್ರ್ಯ ನಂತರ ರಾಜ್ಯದ ಎರಡನೇ ಮುಖ್ಯಮಂತ್ರಿಯಾಗಿದ್ದರು. ಅವರ ಆಡಳಿತದಲ್ಲಿ ಉತ್ತಮ ವಾತಾವರಣ ಇತ್ತು. ಬಹಳಷ್ಟು ಗಂಭೀರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿತ್ತು ಎಂದರು.

ವಿಧಾನಸೌಧ ನಿರ್ಮಾಣಕ್ಕೆ ಕೆಂಗಲ್‌ ಹನುಮಂತಯ್ಯ ಬುನಾದಿ ಹಾಕಿದ್ದರು. ಆದರೆ ಉದ್ಘಾಟನೆಯ ವೇಳೆಗೆ ಅವರು ಮುಖ್ಯಮಂತ್ರಿಯಾಗಿರಲಿಲ್ಲ. ಸರ್ಕಾರದ ಕೆಲಸ ದೇವರ ಕೆಲಸ ಎಂದು ವಿಧಾನಸೌಧದ ಮೇಲೆ ಬರೆಸುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದರು ಎಂದು ಮುಖ್ಯಮಂತ್ರಿ ಪ್ರಶಂಸಿದರು.ಸಚಿವ ಪ್ರಿಯಾಂಕ ಖರ್ಗೆ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಸಜೀರ್‌ ಅಹದ್‌ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

RELATED ARTICLES

Latest News