ಬೆಂಗಳೂರು, ಜ. 30 – ಬಿಜೆಪಿಯ ಎಕ್ಸ್ ಖಾತೆಯ ಮೇಲೆ ವ್ಯಕ್ತಿತ್ವ ವಿನಾಶದ ಆರೋಪ ಹೊರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರಾಜ್ಯದ ಇತರ ಸಚಿವರ ವಿರುದ್ಧ ಅವಹೇಳನಕಾರಿ ವಿಷಯ ಪೋಸ್ಟ್ ಮಾಡಿದ ಆರೋಪದ ಮೇಲೆ ಕರ್ನಾಟಕ ಬಿಜೆಪಿಯ ಎಕ್ಸ್ ಖಾತೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕರ್ನಾಟಕ ಬಿಜೆಪಿ ಸ್ಕ್ಯಾಮ್ ಲಾರ್ಡ್ ಎಂಬ ಶೀರ್ಷಿಕೆಯೊಂದಿಗೆ ಸಚಿವರ ಛಾಯಾಚಿತ್ರವನ್ನು ಪೋಸ್ಟ್ ಮಾಡಿ ಕರ್ನಾಟಕವನ್ನು ಹಗಲಿರುಳು ಲೂಟಿ ಮಾಡುತ್ತಿರುವ ಹಗರಣ ಸಾಮ್ರಾಜ್ಯದ ಅಸ್ತಿತ್ವ ಎಂದು ಆರೋಪಿಸಿ ಎಕ್ಸ್ ನಲ್ಲಿ ಪೋಸ್ಟ್ ಹಾಕಿದ ಒಂದು ದಿನದ ನಂತರ ಪ್ರಕರಣ ದಾಖಲಿಸಲಾಗಿದೆ.
ಕರ್ನಾಟಕವನ್ನು ಹಗಲಿರುಳು ಲೂಟಿ ಮಾಡುತ್ತಿರುವ ಸರ್ಕಾರದ ಹಗರಣ ಸಾಮ್ರಾಜ್ಯದ ನಿಜವಾದ ಕಥೆ!! ಎಂದು ಮಾಡಿದದ ಪೋಸ್ಟ್ ವಿರುದ್ಧ ಕೆಪಿಸಿಸಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ದೂರಿನಲ್ಲಿ, ಬಿಜೆಪಿಯ ಎಕ್ಸ್ ಖಾತೆಯು ವ್ಯಕ್ತಿತ್ವ ವಿನಾಶ ಮತ್ತು ಸಮಾಜದಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಲಾಗಿದೆ.ಪೊಲೀಸರು ದೂರನ್ನು ಸ್ವೀಕರಿಸಿ ಸ್ವೀಕೃತಿ ಪತ್ರ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕರ್ನಾಟಕ ಸರ್ಕಾರದ ಮೇಲೆ ಬಿಜೆಪಿ ಬಹಳ ದಿನಗಳಿಂದ ಭ್ರಷ್ಟಾಚಾರದ ಆರೋಪ ಮಾಡುತ್ತಿದೆ. ಕಳೆದ ತಿಂಗಳು, ಕರ್ನಾಟಕದಲ್ಲಿ ಶೇ.63 ರಷ್ಟು ಭ್ರಷ್ಟಾಚಾರ ನಡೆದಿದೆ ಎಂಬ ನ್ಯಾಯಮೂರ್ತಿ ವೀರಪ್ಪ ಅವರ ಹೇಳಿಕೆಯನ್ನು ನೆನಪಿಸಿಕೊಂಡ ಪಕ್ಷವು, ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.
ದೇಶದ ಇತರ ರಾಜ್ಯಗಳ ಚುನಾವಣೆಗಳಿಗೆ ಹಣಕಾಸು ಒದಗಿಸಲು ಇಲ್ಲಿನ ಕಾಂಗ್ರೆಸ್ ಪಕ್ಷಕ್ಕೆ ಎಟಿಎಂ ಆಗಿ ಮಾರ್ಪಟ್ಟಿದೆ ಎಂದು ಹೇಳಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಮಾಡಲಾದ ಶೇ.40 ರಷ್ಟು ಕಮಿಷನ್ ಆರೋಪದ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದನ್ನು ನೆನಪಿಸಿಕೊಂಡು ಇದೀಗ ನಗಡೆಯುತ್ತಿರುವ ಶೇ.63 ರಷ್ಟು ಭ್ರಷ್ಟಾಚಾರ ಆರೋಪದ ನಂತರ ಸರ್ಕಾರ ಯಾವ ತನಿಖೆಗೆ ಆದೇಶಿಸುತ್ತದೆ ಎಂದು ಪ್ರಶ್ನಿಸಲಾಗಿತ್ತು.
