ಬೆಂಗಳೂರು, ಏ.23- ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂ ಸಿದಂತೆ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ಯು(ಸಿಇಟಿ) ರಾಜ್ಯ 745 ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತೆಯೊಂದಿಗೆ ಕ್ಯಾಮೆರಾ ಕಣ್ಗಾವಲಿನಲ್ಲಿ ಇಂದಿನಿಂದ ಆರಂಭವಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾ ಕಾರವು ಇಂದು ಮತ್ತು ನಾಳೆ ನಡೆಸುವ ಸಿಇಟಿ ಪರೀಕ್ಷೆಗೆ ಅಗತ್ಯವಿರುವ ಎಲ್ಲಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ನೇಮಕಾತಿ ಪರೀಕ್ಷೆಗಳಿಗೆ ಮಾದರಿಯಲ್ಲಿ ಈ ಪರೀಕ್ಷೆಗೂ ಕ್ಯಾಮೆರಾ ಕಣ್ಗಾವಲು, ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಿದ್ದು, ಕಟ್ಟೆಚ್ಚರ ವಹಿಸಲಾಗಿದೆ.
ಇಂದು ಭೌತವಿಜ್ಞಾನ ಮತ್ತು ರಸಾಯನ ವಿಜ್ಞಾನ ಪರೀಕ್ಷೆಗಳು ನಡೆದಿದ್ದು, ನಾಳೆ ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಕಾರಿಗಳು ಮೇಲುಸ್ತುವಾರಿ ನಡೆಸಲಿದ್ದಾರೆ.
ರಾಜ್ಯದಲ್ಲಿ ಸಿಇಟಿಗೆ 3,30,479 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, 1,44,380 ವಿದ್ಯಾರ್ಥಿಗಳು, 1,86,099 ವಿದ್ಯಾರ್ಥಿನಿಯರು ಹಾಗೂ 970 ವಿಶೇಷ ಚೇತನರಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಉಪ ಮುಖ್ಯ ಅ ೕಕ್ಷಕರು, ವಸ್ತ್ರ ಸಂಹಿತಾ ಕಾರಿಗಳನ್ನು ನಿಯೋಜಿಸಲಾಗಿದೆ. 12,665ಪರೀಕ್ಷಾ ಕೇಂದ್ರದ ಸಿಬ್ಬಂದಿ ನಿಯೋಜಿಸಿದ್ದು, 15,265 ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ.13,770 ಕೊಠಡಿ ಮೇಲ್ವಿಚಾರಕರು, 3,304 ಫ್ರಿಸ್ಕಿಂಗ್ ದಳ ಹಾಗೂ 3,304 ಮುಖ ಚಹರೆ ದಳದ ಸಿಬ್ಬಂದಿ ನಿಯೋಜಿಸಲಾಗಿದೆ.
ಬೆಂಗಳೂರಿನ 163 ಕೇಂದ್ರಗಳಲ್ಲಿ ಅತಿ ಹೆಚ್ಚು ಅಂದರೆ ಒಟ್ಟು 77,604 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಇದರ ಕಮಾಂಡ್ ಸೆಂಟರ್ ಕೆಇಎ ಕಚೇರಿಯಲ್ಲಿ ಸ್ಥಾಪಿಸಲಾಗಿದೆ ಎಂದು ಕೆಇಎ ತಿಳಿಸಿದೆ.ಒಟ್ಟು 970 ವಿಶೇಷ ಚೇತನ ವಿದ್ಯಾರ್ಥಿಗಳು ಸಿಇಟಿ ಬರೆಯುತ್ತಿದ್ದು, ಅವರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಕೂಡ ಅಳವಡಿಸಿದ್ದು, ಅಕ್ರಮಗಳಿಗೆ ಅವಕಾಶ ಇಲ್ಲದಂತೆ ನಿಗಾ ವಹಿಸಲು ಸಂಬಂಧಪಟ್ಟ ಅ ಕಾರಿಗಳಿಗೆ ಸೂಚಿಸಲಾಗಿದೆ.
ಅಭ್ಯರ್ಥಿಗಳನ್ನು ತೀವ್ರ ತಪಾಸಣೆ ಮಾಡಿಯೇ ಪರೀಕ್ಷಾ ಕೇಂದ್ರದೊಳಗೆ ಬಿಡುವ ಕಾರಣಕ್ಕೆ ಕನಿಷ್ಠ ಎರಡು ಗಂಟೆ ಮುಂಚಿತವಾಗಿ ಅವರು ಪರೀಕ್ಷಾ ಕೇಂದ್ರಕ್ಕೆ ಹೋಗಬೇಕಾಗಿತ್ತು. ಅಭ್ಯರ್ಥಿಯ ಮುಖ ಚಹರೆ ಮತ್ತು ಕ್ಯೂಆರ್ ಕೋಡ್ ವ್ಯವಸ್ಥೆ ಮೂಲಕ ಅಭ್ಯರ್ಥಿಯ ನೈಜತೆ ಪರಿಶೀಲನೆ ಮಾಡಲಾಗಿದೆ. ನಕಲಿ ಅಭ್ಯರ್ಥಿಗಳಿಗೆ ಸಂಪೂರ್ಣ ಕಡಿವಾಣ ಹಾಕಲಾಗಿದೆ ಎಂದು ಕೆಇಎ ತಿಳಿಸಿದೆ.
ವಸ್ತ್ರ ಸಂಹಿತೆ:
ಅನಗತ್ಯ ಗೊಂದಲ ತಪ್ಪಿಸಲು ಇದೇ ಮೊದಲ ಬಾರಿಗೆ ಪ್ರತಿ ಕೇಂದ್ರಕ್ಕೆ ಒಬ್ಬ ವಸ್ತ್ರ ಸಂಹಿತೆ ಅ ಕಾರಿಯನ್ನು ನೇಮಿಸಲಾಗಿದೆ. ಪುರುಷ/ಮಹಿಳಾ ಅಭ್ಯರ್ಥಿಗಳು ಅರ್ಧ ತೋಳಿನ ಬಟ್ಟೆ ಧರಿಸಬೇಕು. ಪುರುಷರು, ಜೇಬು ಇಲ್ಲದ/ಕಡಿಮೆ ಜೇಬುಗಳಿರುವ ಸರಳ ಪ್ಯಾಂಟ್ ಧರಿಸಬೇಕು. ಕುರ್ತಾ ಪೈಜಾಮ/ಜೀನ್‌್ಸಪ್ಯಾಂಟ್‌ಗೆ ಅವಕಾಶ ಇಲ್ಲ. ಶೂ ಕೂಡ ನಿಷೇ ಸಲಾಗಿದೆ.ಮೊಬೈಲ್, ಬ್ಲೂಟೂತ್, ಇಯರ್ ಪೋನ್, ಮೈಕ್ರೋ ಪೋನ್ ಇತ್ಯಾದಿ ಎಲೆಕ್ಟ್ರಾನಿಕ್ ವಸ್ತುಗಳನ್ನು ಸಂಪೂರ್ಣ ನಿಷೇ ಸಲಾಗಿದೆ.
ನಿನ್ನೆ ಕನ್ನಡ ಪರೀಕ್ಷೆ:
ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ನಿನ್ನೆ ನಡೆಸಿದ ಸಿಇಟಿ ಕನ್ನಡ ಭಾಷಾ ಪರೀಕ್ಷೆಗೆ 1,792 ಅಭ್ಯರ್ಥಿಗಳ ಪೈಕಿ 822 (ಶೇ. 46) ಮಂದಿ ಹಾಜರಾಗಿದ್ದರು. ಬೆಂಗಳೂರು, ಮಂಗಳೂರು, ವಿಜಯಪುರ, ಬೆಳಗಾವಿ ನಗರಗಳ ಐದು ಕೇಂದ್ರಗಳಲ್ಲಿ 50 ಅಂಕಗಳ ಈ ಪರೀಕ್ಷೆ ಸುಗಮವಾಗಿ ನಡೆಯಿತು ಎಂದು ಪ್ರಾ ಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
