ಬೆಂಗಳೂರು,ಜು.24- ಎಪ್ಪತ್ತೆರಡು ವರ್ಷಗಳ ಸುದೀರ್ಘಕಾಲ ನನ್ನೊಂದಿಗೆ ಹೆಜ್ಜೆಗೆ ಹೆಜ್ಜೆ ಇರಿಸಿ ನಡೆದಿದ್ದ ನನ್ನ ಸಹಧರ್ಮಿಣಿ ಶ್ರೀಮತಿ ಚನ್ನಮ ಅವರು ಜುಲೈ 18ರಂದು ಶಿವೈಕ್ಯರಾದರು. ಮನೆಯ ನಂದಾದೀಪ ನಂದಿಹೋದ ಕಷ್ಟಕರ ಸಂದರ್ಭದಲ್ಲಿ ನಮ ದುಃಖದಲ್ಲಿ ಭಾಗಿಯಾಗಿ ಸಾಂತ್ವನದ ಚೈತನ್ಯಧಾರೆ ಎರೆದ ಸಮಸ್ತರಿಗೂ ಕೈ ಜೋಡಿಸಿ ಕೃತಜ್ಞತೆಗಳನ್ನು ಸಮರ್ಪಿಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ.
ಈ ಸಂಬಂಧದ ಬಹಿರಂಗ ಕೃತಜ್ಞತಾ ಪತ್ರವನ್ನು ತಮ ಎಕ್‌್ಸ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಹಿರಿಯರ ಅಣತಿಯಂತೆ ಪತಿ-ಪತ್ನಿಯರಾಗಿ ಸಪ್ತಪದಿ ತುಳಿದು ಬಾಳಬಂಡಿ ಏರಿದ್ದ ನಾವಿಬ್ಬರು ಸುಖ-ದುಃಖದಲ್ಲಿ ಸಮಭಾಗಿಗಳಾಗಿ ಸಪ್ತದಶಕಗಳ ಕಾಲ ಜೀವನುಖಿಗಳಾಗಿ ತುಂಬು ಜೀವನ ನಡೆಸಿದ್ದೇವೆ ಎಂದಿದ್ದಾರೆ.
ಶಾಸಕನಾಗಿ, ಪ್ರತಿಪಕ್ಷ ನಾಯಕನಾಗಿ, ಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ, ಕೊನೆಗೆ ಪ್ರಧಾನ ಮಂತ್ರಿಯಾಗಿ ರಾಷ್ಟ್ರಸೇವೆ ಮಾಡುವ ಮಹಾಭಾಗ್ಯ ಸಿಕ್ಕಿತು. ಕೀರ್ತಿ ಪ್ರಖ್ಯಾತಿ ಎಲ್ಲವೂ ನನಗಷ್ಟೇ ಸೇರಿತು. ಅದರ ಹಿಂದಿನ ಚೈತನ್ಯಶಕ್ತಿ ಚನ್ನಮನವರೇ ಆಗಿದ್ದರು ಎಂದರೆ ಉತೆ್ಪ್ರೕಕ್ಷೆ ಅಲ್ಲ. ಗಂಧದ ಕೊರಡು ತನ್ನನ್ನು ತಾನು ತೇಯ್ದುಕೊಂಡು ಪರಿಮಳ ಹೊರಸೂಸುವಂತೆ ಚನ್ನಮನವರ ಎಣೆಯಿಲ್ಲದ ಮಮತೆ ಮತ್ತು ತ್ಯಾಗಶೀಲತೆ ನನ್ನ ಬಾಳಿಗೆ ಪರಿಪೂರ್ಣತೆ ತುಂಬಿತು ಎಂದು ಹೇಳಿದ್ದಾರೆ.
ರಾಜಕೀಯ ಹಿನ್ನೆಲೆಯೇ ಇಲ್ಲದ ನಮ ಕುಟುಂಬದ ಸೊಸೆಯಾಗಿ ಬಂದ ಅವರು ದೈವಭಕ್ತಿ, ಸಾತ್ವಿಕತೆ ಮತ್ತು ಸಾಂಪ್ರದಾಯಿಕ ನಡವಳಿಕೆಯ ಮೂಲಕ ನಮ ಮನೆಯನ್ನು ನಂದಗೋಕುಲ ಮಾಡಿದರು. ನಿತ್ಯ ದಾಸೋಹಿಯಾಗಿ ಮನೆಯ ಅನ್ನಪೂರ್ಣೆಯಾದರು. ಮಾನವೀಯ ಮೌಲ್ಯಗಳ ಅನುಸರಣೆ ಹಾಗೂ ಶುದ್ಧ ಅಂತಃಕರಣದ ಮಾತೃಪ್ರೇಮದ ಮೂಲಕ ಎಲ್ಲರ ಪಾಲಿನ ಅಮನಾದರು ಎಂದು ಅವರು ಗುಣಗಾನ ಮಾಡಿದ್ದಾರೆ.
ಹೀಗೆ ನನ್ನ ಮನೆಯನ್ನು ಬೆಳಗಿ ಬೆಳೆಸಿದ ಶ್ರೀಮತಿ ಚನ್ನಮನವರು ಶಿವನ ಪಾದ ಸೇರಿದ ಹೊತ್ತಿನಲ್ಲಿ ರಾಜ್ಯದ ಜನರು ತೋರಿದ ಅಂತಃಕರಣಪೂರ್ವಕ ಮಮತೆ, ಗೌರವಕ್ಕೆ ಪರಲೋಕದಲ್ಲಿರುವ ಅವರು, ಇಹದಲ್ಲಿರುವ ನಾನೂ ಧನ್ಯರಾಗಿದ್ದೇವೆ. ಅವರು ಕೊನೇ ಶ್ವಾಸ ಬಿಟ್ಟಾಗಿನಿಂದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಶ್ರೀ ರಂಗನಾಥ ಸ್ವಾಮಿ ಪಾದದ ಬುಡದಲ್ಲಿ ಚಿರನಿದ್ರೆಗೆ ಜಾರುವ ಕ್ಷಣದವರೆಗೂ ಅವರ ಆತಕ್ಕಾಗಿ ಮರುಗಿದ ಎಲ್ಲರಿಗೂ ಭಾವಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಗೌಡರು ಹೇಳಿದ್ದಾರೆ.
ಮಾಜಿ ಪ್ರಧಾನಿಯ ಮಡದಿಯಾಗಿದ್ದರೂ ಬದುಕಿನ ಕಟ್ಟಕಡೆಯ ಕ್ಷಣದವರೆಗೂ ಸಾಮಾನ್ಯ ನಾರಿಯಾಗಿ ಬದುಕಿದ ಸಾತ್ವಿಕ ಜೀವಿ ನನ್ನ ಧರ್ಮಪತ್ನಿ. ತಮ ವ್ಯಕ್ತಿತ್ವ, ಕರುಣೆ, ವಾತ್ಸಲ್ಯಕ್ಕೆ ರಾಜಕೀಯದ ಸೋಂಕು ಸೋಕದಂತೆ ಎಚ್ಚರ ವಹಿಸಿದ್ದ ಅವರು, ಮನುಷ್ಯ ಸಂಬಂಧಗಳಿಗೆ ಅತೀ ಹೆಚ್ಚು ಮಹತ್ವ ನೀಡುತ್ತಿದ್ದರು ಎಂದಿದ್ದಾರೆ.
ರಾಜ್ಯದ ಮುಖ್ಯಮಂತ್ರಿ, ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿಗಳು, ವಿವಿಧ ಮಠಗಳ ಪೀಠಾಧೀಶರು, ಮಂತ್ರಿಗಳು, ಮಾಜಿ ಮಂತ್ರಿಗಳು, ಶಾಸಕರು, ಮಾಜಿ ಶಾಸಕರು, ಮಾಧ್ಯಮ ಬಂಧುಗಳು, ಪೊಲೀಸ್ ಇಲಾಖೆ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕಲೆ, ಸಾಹಿತ್ಯ, ಸಿನಿಮಾ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಮತ್ತು ರಾಜ್ಯದ ಸರ್ವ ಭಾಗಗಳಿಂದ ಹರಿದುಬಂದ ಜನಸಾಗರ ನನ್ನ ಅರ್ಧಾಂಗಿಯ ಆತಕ್ಕೆ ಚಿರಶಾಂತಿಯನ್ನು ಕೋರಿತು ಎಂದು ಹೇಳಿದ್ದಾರೆ.
ಇದಕ್ಕೆ ಪ್ರತಿಯಾಗಿ ಕೃತಜ್ಞತೆ ಸಲ್ಲಿಸುವೆ ಎನ್ನುವುದು ಬಹಳ ಚಿಕ್ಕ ಮಾತಾಗುತ್ತದೆ. ಅದಕ್ಕೂ ಮೀರಿ ನಾನು ವಿನೀತನಾಗಿ ಎಲ್ಲರಿಗೂ ನಮಿಸುತ್ತೇನೆ. ವಿಶೇಷವಾಗಿ ನಾನು ಜನವೆತ್ತಿದ ಹಾಸನ ಜಿಲ್ಲೆಯ ಮಹಾಜನರು ತಮಗಳ ಅಕ್ಕರೆಯ ಅಮ್ಮ ಚನ್ನಮನವರ ಬಗ್ಗೆ ತೋರಿದ ಅಭಿಮಾನ, ವಾತ್ಸಲ್ಯಕ್ಕೆ ನಾನು ಮೂಕನಾಗಿದ್ದೇನೆ. ಮತ್ತೊಮೆ ನನ್ನ ಕುಟುಂಬದ ಜತೆ ನಿಂತು ಧೈರ್ಯ ತುಂಬಿದ ಪ್ರತಿಯೊಬ್ಬರಿಗೂ ಹೃದಯಪೂರ್ವಕವಾಗಿ ಧನ್ಯವಾದಗಳನ್ನು ಸಮರ್ಪಿಸುತ್ತೇನೆ ಎಂದು ಗೌಡರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
