Homeರಾಜ್ಯಬೆಂಗಳೂರು ಅಭಿವೃದ್ಧಿಗೆ ಅನುದಾನ ನೀಡುವಂತೆ ಸಿಎಂಗೆ ನಗರದ ಶಾಸಕರ ಮನವಿ

ಬೆಂಗಳೂರು ಅಭಿವೃದ್ಧಿಗೆ ಅನುದಾನ ನೀಡುವಂತೆ ಸಿಎಂಗೆ ನಗರದ ಶಾಸಕರ ಮನವಿ

ಬೆಂಗಳೂರು, ಅ. 28- ಗ್ರೇಟರ್‌ ಬೆಂಗಳೂರು ಪ್ರಾಧಿ ಕಾರದ ಸಮಗ್ರ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡು ವಂತೆ ನಗರದ ಶಾಸಕರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಬೆಂಗಳೂರು ಅಭಿವೃದ್ಧಿ ಕುರಿತ ಸಭೆಯಲ್ಲಿ ನಗರದ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆದಿದ್ದು, ಬಹುತೇಕ ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ.

ನಗರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ಸಾರ್ವಜನಿಕರು ಎದುರಿಸು ತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಆಯೋಜಿಸಿದ್ದ ಸಭೆಯಲ್ಲಿ ಬೆಂಗಳೂರಿನ ಶಾಸಕರು ಭಾಗವಹಿಸಿ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆಗಳು, ಕೈಗೊಳ್ಳಬೇಕಿರುವ ಕಾಮಗಾರಿಗಳು ಮತ್ತು ಅಗತ್ಯ ಅನುದಾನದ ಕುರಿತು ಸಲಹೆ-ಅಭಿಪ್ರಾಯಗಳನ್ನು ಮಂಡಿಸಿದರು.

ಕ್ಷೇತ್ರವಾರು ಕಾಮಗಾರಿಗಳ ಮಾಹಿತಿ ಕೇಳಿದ ಸಿಎಂ:
ಶಾಸಕರ ಬೇಡಿಕೆಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು, ಪ್ರತಿಯೊಬ್ಬ ಶಾಸಕರು ತಮ್ಮ ಕ್ಷೇತ್ರದಲ್ಲಿ ಕೈಗೊಳ್ಳಬೇಕಿರುವ ಅಭಿವೃದ್ಧಿ ಕಾಮಗಾರಿಗಳ ವಿವರ ಹಾಗೂ ಅವುಗಳಿಗೆ ಅಗತ್ಯವಿರುವ ಅನುದಾನದ ಪ್ರಮಾಣದ ಮಾಹಿತಿಯನ್ನು ಒದಗಿಸುವಂತೆ ಸೂಚಿಸಿದರು. ಶಾಸಕರು ನೀಡುವ ಪ್ರಸ್ತಾವನೆಗಳನ್ನು ಪರಿಶೀಲಿಸಿದ ಬಳಿಕ ಅನುದಾನ ಬಿಡುಗಡೆ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ನಗರದ ರಸ್ತೆ, ಸಂಚಾರ ವ್ಯವಸ್ಥೆ ಸೇರಿದಂತೆ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡುವ ಅಗತ್ಯದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಕ್ಷೇತ್ರಗಳ ಅಗತ್ಯಗಳಿಗೆ ಅನುಗುಣವಾಗಿ ಕಾಮಗಾರಿಗಳ ಪಟ್ಟಿ ಸಿದ್ಧಪಡಿಸಿ ಸಲ್ಲಿಸಿದ ಬಳಿಕ ಅನುದಾನದ ಹಂಚಿಕೆ ಕುರಿತು ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು.

ಗುತ್ತಿಗೆದಾರರ ವಿರುದ್ಧ ಶಾಸಕರ ಅಸಮಾಧಾನ:ಬೆಂಗಳೂರು ನಗರದ ಕಸ ವಿಲೇವಾರಿ ಸಮಸ್ಯೆಯೂ ಸಭೆಯಲ್ಲಿ ಪ್ರಮುಖವಾಗಿ ಪ್ರಸ್ತಾಪವಾಯಿತು. ಕಸ ಸಂಗ್ರಹಣೆ ಮತ್ತು ವಿಲೇವಾರಿ ವ್ಯವಸ್ಥೆ ಸಮರ್ಪಕವಾಗಿ ನಡೆಯದಿರುವ ಕುರಿತು ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು. ಕಸದ ನಿರ್ವಹಣೆಯ ಗುತ್ತಿಗೆದಾರರ ಕಾರ್ಯವೈಖರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಟೆಂಡರ್‌ ಪ್ರಕ್ರಿಯೆಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದರು.

ಕಸದ ನಿರ್ವಹಣೆ ವಿಚಾರದಲ್ಲಿ ಗುತ್ತಿಗೆದಾರರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೆ, ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಟೆಂಡರ್‌ ಷರತ್ತುಗಳ ಪಾಲನೆ ಹಾಗೂ ಗುತ್ತಿಗೆದಾರರ ಕಾರ್ಯಕ್ಷಮತೆ ಯನ್ನು ಪರಿಶೀಲಿಸಿ, ಲೋಪ ಗಳಿದ್ದರೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಒತ್ತಾಯಿಸಿ ದರು. ನಗರದಲ್ಲಿ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಯಿತು.

ಟನಲ್‌ ರಸ್ತೆ, ಎಲಿವೇಟೆಡ್‌ ಕಾರಿಡಾರ್‌ಗಳ ಪ್ರಸ್ತಾಪ:
ಇದೇ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಕೈಗೊಳ್ಳಲು ಉದ್ದೇಶಿಸಿರುವ ಸುರಂಗ ರಸ್ತೆ (ಟನಲ್‌ ರಸ್ತೆ) ಹಾಗೂ ಎಲಿವೇಟೆಡ್‌ ಕಾರಿಡಾರ್‌ಗಳ ನಿರ್ಮಾಣ ಯೋಜನೆಗಳ ಕುರಿತು ಸಭೆಯಲ್ಲಿ ಮಾಹಿತಿ ಹಂಚಿಕೊಂಡರು.

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಗೆ ಪರಿಹಾರ ಕಂಡುಕೊಳ್ಳಲು ಪರ್ಯಾಯ ರಸ್ತೆ ಸಂಪರ್ಕ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವ ಅಗತ್ಯದ ಕುರಿತು ಚರ್ಚಿಸಲಾಯಿತು. ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿ, ಕ್ಷೇತ್ರವಾರು ಅನುದಾನದ ಹಂಚಿಕೆ ಹಾಗೂ ಕಸ ವಿಲೇವಾರಿ ವ್ಯವಸ್ಥೆಯ ಸುಧಾರಣೆ ಸಭೆಯಲ್ಲಿ ಪ್ರಮುಖ ಚರ್ಚೆ ಅಯಿತ್ತು.

RELATED ARTICLES

Latest News