Homeರಾಜ್ಯವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಡಿ.ಕೆ.ಶಿವಕುಮಾರ್‌

ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು, ಅ.5- ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆಯ ಮೂಲಕ ತಮ್ಮ ಸರ್ಕಾರದ 100ನೇ ದಿನದ ಸಂದರ್ಭದಲ್ಲಿ ಘೋಷಿಸಲಾದ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ ಅವರು, ಕೃಷಿ, ಜವಳಿ, ಸಕ್ಕರೆ, ತೋಟಾಗಾರಿಗೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪಶು ಸಂಗೋಪನೆ, ಗಣಿ ಮತ್ತು ಭೂ ವಿಜ್ಞಾನ, ಸಣ್ಣ ಕೈಗಾರಿಕೆ, ವಾಣಿಜ್ಯ ಮತ್ತು ಕೈಗಾರಿಕೆ, ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ್ದಾರೆ. 100 ದಿನಗಳ ಕಾರ್ಯ ಯೋಜನೆ ಆಧ್ಯತೆಯಲ್ಲಿ ಇಲಾಖಾವಾರು ಕೈಗೊಂಡ ಪ್ರಗತಿಗಳ ಬಗ್ಗೆ ಚರ್ಚೆ ನಡೆಸಲಾಗಿದೆ.

ಪ್ರಮುಖವಾಗಿ ಸರ್ಕಾರದ ವಿವಿಧ ಯೋಜನೆಗಳ ನೇಮಕಾತಿ ಕುರಿತಂತೆ ಇದೇ ಸಂದರ್ಭದಲ್ಲಿ ಪರಿಶೀಲನೆ ನಡೆಸಲಾಗಿದೆ ಎಂದು ಮೂಲಗಳು ವಿವರಿಸಿವೆ.ಸಚಿವರಾದ ಎಂ.ಬಿ.ಪಾಟೀಲ್‌, ಕೃಷ್ಣ ಭೈರೇಗೌಡ, ಪ್ರಿಯಾಂಕ್‌ ಖರ್ಗೆ, ಬೈರತಿ ಸುರೇಶ್‌ ಸೇರಿದಂತೆ ವಿವಿಧ ಸಚಿವರು ಸಭೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಪೈಕಿ 72 ಸಾವಿರ ಹುದ್ದೆಗಳನ್ನು ಮೊದಲ ಹಂತದಲ್ಲಿ ನೇಮಕಾತಿ ಮಾಡಿಕೊಳ್ಳಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಅದರಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು. 2ನೇ ಹಂತದಲ್ಲಿ ಮತ್ತಷ್ಟು ಹುದ್ದೆಗಳ ನೇಮಕಾತಿಯ ಅಗತ್ಯವಿದೆ. ಈ ನಿಟ್ಟಿನಲ್ಲಿ ಖಾಲಿಯಿರುವ ಹುದ್ದೆಗಳ ಬಗ್ಗೆ ಆಯಾ ಇಲಾಖೆಗಳು ಸಮಗ್ರ ಮಾಹಿತಿಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ನೀಡಬೇಕೆಂದು ಸೂಚಿಸಲಾಗಿದೆ.

ಹಣಕಾಸು ಇಲಾಖೆ ಅದನ್ನು ಪರಿಶೀಲಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.ನೇಮಕಾತಿ ಪ್ರಕ್ರಿಯೆಗಳು ಯಾವುದೇ ಲೋಪಗಳಾಗಬಾರದು. ಪ್ರಶ್ನೆ ಪತ್ರಿಕೆ ತಯಾರಿಕೆಯಿಂದ ಆರಂಭಿಸಿ, ಲಿಖಿತ ಪರೀಕ್ಷೆ, ಸಂದರ್ಶನ ಯಾವುದೇ ಹಂತದಲ್ಲೂ ಸಮಸ್ಯೆಗಳಾಗದಂತಹ ಪಾರದರ್ಶಕ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ.

ಗ್ಯಾರಂಟಿಗಳ ಪರಿಷ್ಕರಣೆಯಲ್ಲಿ ಜನ ಸಾಮಾನ್ಯರಿಗೆ ತೊಂದರೆಯಾಗದಂತೆ ಮುನ್ನೆಚರಿಕೆ ವಹಿಸಬೇಕು. ಅರ್ಹ ಫಲಾನುಭವಿಗಳು ಅವಕಾಶ ವಂಚಿತರಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ತಾಕೀತು ಮಾಡಿದ್ದಾರೆ.

RELATED ARTICLES
spot_img

Latest News