ಬೆಂಗಳೂರು, ಮೇ 10- ಯೋಜನೆ ಮತ್ತು ಸಾಂಖ್ಯಿಕ ಸಚಿವ ಸುಧಾಕರ್ ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟವುಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಸದಾಶಿವ ನಗರದಲ್ಲಿರುವ ಸಚಿವ ಸುಧಾಕರ್ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದು ಮಾಧ್ಯಮದವರೊಂದಿಗೆ ಸಿದ್ದರಾಮಯ್ಯ ಅವರು ಮಾತನಾಡಿದರು.
ಸಹಕಾರ ಕ್ಷೇತ್ರಕ್ಕೂ ಕೊಡುಗೆ:
ಸುಧಾಕರ್ ಅವರು ಮೂಲತಃ ಚಳ್ಳಕರೆಯವರು. 2008ರಿಂದ ಹಿರಿಯೂರು ಶಾಸಕರಾಗಿದ್ದರು. ಎರಡನೇ ಬಾರಿಗೆ ಮಂತ್ರಿಯಾಗಿದ್ದ ಅವರು ಅತ್ಯಂತ ಜನಪ್ರಿಯ ವ್ಯಕ್ತಿ. ಸಮಾಜ ಕಲ್ಯಾಣ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಸಹಕಾರ ಕ್ಷೇತ್ರದಲ್ಲಿಯೂ ಸಾಕಷ್ಟು ಕೊಡುಗೆ ನೀಡಿರುವ ಅವರು, ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿದ್ದರು. ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು.
ಸುಧಾಕರ್ ಅವರ ಚಿಕ್ಕಪ್ಪ ಜಯಣ್ಣ ಕೂಡಾ ಶಾಸಕರಾಗಿದ್ದವರು. ರಾಜಕೀಯ ಕ್ಷೇತ್ರದಲ್ಲಿ ಅಪಾರ ಜನಪ್ರಿಯತೆ ಗಳಿಸಿಕೊಂಡಿದ್ದರು. ಚಳ್ಳಕೆರೆ ಎಸ್.ಟಿ ಮೀಸಲು ಕ್ಷೇತ್ರವಾಗಿದ್ದರಿಂದ ಹಿರಿಯೂರಿನಿಂದ ಸ್ಪರ್ಧಿಸಿ ಗೆದ್ದಿದ್ದರು ಎಂದು ವಿವರಿಸಿ, ರೈತರ ಹಾಗೂ ಬಡವರ ಪರವಾಗಿ ಸಾಕಷ್ಟು ಕೆಲಸ ಮಾಡಿದ್ದು, ಜನಪ್ರಿಯ ವ್ಯಕ್ತಿಯಾಗಿದ್ದರು ಎಂದರು.
ಆತಕ್ಕೆ ಚಿರಶಾಂತಿ ದೊರಕಲಿ:
ಸುಧಾಕರ್ ಅವರು ಪತ್ನಿ, ಪುತ್ರಿ ಹಾಗೂ ಪುತ್ರ ಸೇರಿದಂತೆ ಅಪಾರ ಬಂಧುಬಳಗ, ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ. ಅವರ ಆತಕ್ಕೆ ಚಿರಶಾಂತಿ ದೊರಕಲಿ ಹಾಗೂ ಕುಟುಂಬದವರಿಗೆ ಅವರ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.
ಮೂರು ದಿನಗಳ ಶೋಕಾಚರಣೆ:
ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಮಾಡುತ್ತಿದ್ದು, ಚಿತ್ರದುರ್ಗದಲ್ಲಿ ಸೋಮವಾರ ರಜೆ ಘೋಷಣೆ ಮಾಡಲಾಗಿದೆ ಎಂದರು.
ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ:
ನಾಳೆ ಚಳ್ಳಕೆರೆಯಲ್ಲಿ ಸಂಜೆ 4ಗಂಟೆಗೆ ನಡೆಯಲಿರುವ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ ಮುಖ್ಯಮಂತ್ರಿ, ಅವರ ಮತಕ್ಷೇತ್ರ ಹಿರಿಯೂನಲ್ಲಿ ಅವರ ಪಾರ್ಥಿವ ಶರೀರವನ್ನು ದರ್ಶನಕ್ಕಾಗಿ ಇರಿಸಿದ್ದು, ನಾಳೆ ಚಳ್ಳಕೆರೆಗೆ ಕೊಂಡೊಯ್ಯಲಾಗುವುದು ಎಂದು ವಿವರಿಸಿದರು.ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದರು.
ಸಚಿವ ಕೆ.ಹೆಚ್. ಮುನಿಯಪ್ಪ ಸಂತಾಪ
ಬೆಂಗಳೂರು,ಮೇ 10- ಬಡವರ ಪರ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದ ಉತ್ತಮ ಆಡಳಿತಗಾರ ಡಿ.ಸುಧಾಕರ್ ಅವರ ಅಗಲಿಕೆ ನೋವುಂಟು ಮಾಡಿದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸಂತಾಪ ಸೂಚಿಸಿದ್ದಾರೆ.
ಯೋಜನಾ ಸಚಿವ ಡಿ.ಸುಧಾಕರ್‌ರವರು ನಮನ್ನು ಅಗಲಿರುವುದು ನನಗೆ ನೋವುಂಟು ಮಾಡಿದೆ. ಸರಳ ಸಜ್ಜನಿಕೆ ರಾಜಕಾರಣಿ ಅತ್ಯುತ್ತಮ ಆಡಳಿತಗಾರ ನಾನು ಸಂಸತ್ತಿನಲ್ಲಿದ್ದಾಗ ಅವರು ನನ್ನ ಮಾತನಾಡಿಸದೇ ಹೋಗುತ್ತಿರಲಿಲ್ಲ. ಅವರಿಗೂ ನನಗೂ ಅವಿನಾಭಾವ ಸಂಬಂಧವಿತ್ತು. ಅವರು ಅನಾರೊಗ್ಯ ಹಿನ್ನಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಅವರ ಯೋಗಕ್ಷೇಮ ವಿಚಾರಿಸ್ದೆಿ. ಅವರು ಸದಾ ಬಡವರ ಪರವಾಗಿ ಕೆಲಸ ಮಾಡುತ್ತಿದ್ದರು ಎಂದು ಸರಿಸಿದರು.
ಹಲವಾರು ಜನರಿಗೆ ಸಹಾಕರಿ ಸಹಾಯ ಹಸ್ತರಾಗಿದ್ದವರು ಇಂದು ಅವರ ನಿಧನದ ಸುದ್ದಿ ತಿಳಿದು ನನಗೆ ನೊವುಂಟು ಮಾಡಿದೆ. ಅವರ ಆತಕ್ಕೆ ಶಾಂತಿಯನ್ನು ಕೊರುತ್ತೇನೆ ಹಾಗೂ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ದುಖಃವನ್ನು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದರು.
