Homeರಾಜ್ಯತೀವ್ರ ಬರದ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಆಹಾರ, ನೀರಿನ ಕೊರತೆ : ಡಿಸಿಎಂ ಪರಮೇಶ್ವರ್ ಆತಂಕ

ತೀವ್ರ ಬರದ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಆಹಾರ, ನೀರಿನ ಕೊರತೆ : ಡಿಸಿಎಂ ಪರಮೇಶ್ವರ್ ಆತಂಕ

ಬೆಂಗಳೂರು, ಅ.19- ರಾಜ್ಯದಲ್ಲಿ ಬರ ಪರಿಸ್ಥಿತಿ ಭೀಕರವಾಗಿದ್ದು ಮುಂದಿನ ದಿನಗಳಲ್ಲಿ ಜನರಿಗೆ ಆಹಾರ, ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಲಿದೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್‌ ಆತಂಕ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿಂದು ತಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಪರಿಸ್ಥಿತಿಯಿಂದಾಗಿ ರಾಜ್ಯದಲ್ಲಿ ಶೇ.82ರಷ್ಟು ಆಹಾರ ಉತ್ಪಾದನೆ ತಗ್ಗಲಿದೆ. ಇದರಿಂದಾಗಿ ಆಹಾರದ ಸಮಸ್ಯೆ ಮುಂದಿನ ದಿನಗಳಲ್ಲಿ ತೀವ್ರವಾಗಲಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಹಣ ಬಿಡುಗಡೆ ಮಾಡಿದೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಕಾರ್ಯನಿರ್ವಾಹಣಾಧಿಕಾರಿಗಳು ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದಾರೆ. ಹಲವು ತಾಲ್ಲೂಕುಗಳನ್ನು ನಾವು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದ್ದೇವೆ.

ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಅದರೆ ಬಹಳಷ್ಟು ಕಡೆ ನೀರಿನ ಮೂಲವೇ ಒಣಗಿ ಹೋಗಿದೆ. ಎಷ್ಟೇ ಹಣ ಖರ್ಚು ಮಾಡಿದರೂ ನೀರು ದೊರೆಯದಿದ್ದರೆ ಏನು? ಮಾಡುವುದು ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಬರ ಪರಿಸ್ಥಿತಿಯಿಂದಾಗಿರುವ ನಷ್ಟದ ಅಂದಾಜು ತಯಾರಿಸಿದ್ದೇವೆ. ಬರದ ಮೂರನೇ ಪಟ್ಟಿಯನ್ನು ಶೀಘ್ರವೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಈಗಾಗಲೇ ರೈತರಿಗೆ ಪ್ರಾಥಮಿಕ ನಷ್ಟ ಪರಿಹಾರವಾಗಿ 2,500 ರೂ.ಗಳನ್ನು ರೈತರಿಗೆ ಹಂಚಿ 1,250 ಕೋಟಿಗಳಷ್ಟು ಹಣ ಖರ್ಚಾಗಿದೆ ಎಂದು ಹೇಳಿದರು.

ಕೇಂದ್ರದಿಂದ ಹಣ ಬಿಡುಗಡೆಯಾದರೆ, ಅದನ್ನು ಸಂಕಷ್ಟದಲ್ಲಿರುವವರಿಗೆ ನೀಡಲು ಸಾಧ್ಯವಾಗುತ್ತದೆ. ಅದಕ್ಕಾಗಿ ದೆಹಲಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ನಿರ್ಧರಿಸಲಾಗಿತ್ತು. ಆದರೆ ವಿರೋಧ ಪಕ್ಷದವರು ಬರುವುದಿಲ್ಲ ಎಂದು ಹೇಳುತ್ತಿದ್ದಾರೆ. ಹಾಗಾಗಿ ನಾವು ಮತ್ತೊಮೆ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.

ಕುಮಾರಸ್ವಾಮಿ ರಾಜೀನಾಮೆ ಕೊಡಲಿ:
ಸ್ಟಿಂಗ್‌ ಆಪರೇಷನ್‌ ಕುರಿತಂತೆ ಚರ್ಚೆಗಳು ಅಸಹ್ಯ ಹುಟ್ಟಿಸುತ್ತಿವೆ. ಇದು ರಾಜಕೀಯದಲ್ಲಿ ಒಳ್ಳೆಯ ಬೆಳವಣಿಗೆಯಲ್ಲ. ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದವರ ವ್ಯಕ್ತಿತ್ವ ಹರಣವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾವು ಇದರ ಬಗ್ಗೆ ಹೆಚ್ಚು ಮಾತನಾಡಲು ಬಯಸುವುದಿಲ್ಲ. ಪ್ರತಿಯೊಬ್ಬರ ಹೇಳಿಕೆಗಳಿಗೂ ಪ್ರತಿಕ್ರಿಯಿಸುತ್ತಾ ಹೋದರೆ, ಎಲ್ಲಿಗೆ ತಲುಪಲಿದೆ ಎಂಬುದನ್ನು ಯೋಚಿಸಬೇಕು ಎಂದರು. ಸ್ಟಿಂಗ್‌ ಆಪರೇಷನ್‌ ಹಿನ್ನೆಲೆಯಲ್ಲಿ ಮಧ್ಯಂತರ ಚುನಾವಣೆ ಎದುರಾಗಲಿದೆ ಆಥವಾ ದಲಿತ ಮುಖಂಡರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತದೆ ಎಂಬೆಲ್ಲಾ ಪ್ರಶ್ನೆಗಳು ಪ್ರತಿಕ್ರಿಯಿಸಲು ನಿರಾಕರಿಸಿದರು. ತಮ ಜೊತೆ ಹೈಕಮಾಂಡ್‌ನ ಯಾವ ನಾಯಕರು ಈ ಬಗ್ಗೆ ಮಾತನಾಡಿಲ್ಲ ಎಂದು ಹೇಳಿದರು.

2028ಕ್ಕೆ ಎನ್‌ಡಿಎ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಾಗಿ ಹೇಳುತ್ತಿರುವುದನ್ನು ಗಮನಿಸಿದ್ದೇನೆ. ಸಮಯ ಬಂದಾಗ ಅದರ ಬಗ್ಗೆ ಮಾತನಾಡೋಣ, ಕುಮಾರಸ್ವಾಮಿಯವರಿಗೆ ರಾಜ್ಯ ರಾಜಕಾರಣಕ್ಕೆ ಬರಬೇಕು ಎಂಬ ಇರಾದೆ ಇದ್ದರೆ, ಅವರು ಕೂಡಲೇ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬರಲಿ, ಯಾರು ಬೇಡ ಎಂದಿದ್ದಾರೆ ಎಂದು ಹೇಳಿದರು.

RELATED ARTICLES
spot_img

Latest News