Monday, May 4, 2026
Homeರಾಜ್ಯಡಿ.ಎನ್‌.ಜೀವರಾಜ್‌ ಶೃಂಗೇರಿ ಕ್ಷೇತ್ರದ ನೂತನ ಶಾಸಕ : ಚುನಾವಣಾ ಆಯೋಗ ಘೋಷಣೆ

ಡಿ.ಎನ್‌.ಜೀವರಾಜ್‌ ಶೃಂಗೇರಿ ಕ್ಷೇತ್ರದ ನೂತನ ಶಾಸಕ : ಚುನಾವಣಾ ಆಯೋಗ ಘೋಷಣೆ

D.N. Jeevaraj is the new MLA of Sringeri constituency

ಚಿಕ್ಕಮಗಳೂರು,ಮೇ 4- ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್‌.ದೇವರಾಜ್‌ ಅವರ ಗೆಲುವು ಖಚಿತಗೊಂಡಿದ್ದು, ಚುನಾವಣಾಧಿಕಾರಿಗಳು ಫಲಿತಾಂಶವನ್ನು ಪ್ರಕಟಿಸಿದ್ದಾರೆ.

ಹೈಕೋರ್ಟ್‌ ಆದೇಶದ ಮೇರೆಗೆ ಮೇ 2ರಂದು ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಇದೀಗ ಅಂತಿಮ ಘಟ್ಟ ತಲುಪಿದ್ದು, ಚುನಾವಣಾ ಆಯೋಗ ಅಧಿಕೃತ ಫಲಿತಾಂಶವನ್ನು ಪ್ರಕಟಿಸಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಡಿ.ಎನ್‌.ಜೀವರಾಜ್‌ ಅವರು ಮರು ಎಣಿಕೆಯಲ್ಲಿ ಮುನ್ನಡೆ ಸಾಧಿಸಿ, ಹಾಲಿ ಶಾಸಕ ಟಿ.ಡಿ.ರಾಜೇಗೌಡ ಅವರ ವಿರುದ್ಧ ಗೆಲುವು ದಾಖಲಿಸಿದ್ದಾರೆ.

ಮೇ 2ರಂದು ನಡೆದ ಮರು ಎಣಿಕೆಯಲ್ಲಿ ಅಂಚೆ ಮತಗಳ ಪರಿಶೀಲನೆ ಪೂರ್ಣಗೊಂಡಿದ್ದರೂ ಫಲಿತಾಂಶವನ್ನು ತಕ್ಷಣ ಘೋಷಿಸಲಾಗಿರಲಿಲ್ಲ. ಈ ಬೆಳವಣಿಗೆ ಕ್ಷೇತ್ರದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು.ಮರು ಎಣಿಕೆಯು ರೋಚಕ ಹಣಾಹಣಿಗೆ ಸಾಕ್ಷಿಯಾಗಿದ್ದು, ಕೊನೆ ಹಂತದಲ್ಲಿ ಜೀವರಾಜ್‌ 52 ಮತಗಳ ಮುನ್ನಡೆ ಕಾಯ್ದುಕೊಂಡಿದ್ದರು. ಈ ಫಲಿತಾಂಶ ಶೃಂಗೇರಿ ಕ್ಷೇತ್ರದ ರಾಜಕೀಯದಲ್ಲಿ ಮಹತ್ವದ ತಿರುವು ತಂದಿದ್ದು, ಬೆಂಬಲಿಗರಲ್ಲಿ ಸಂಭ್ರಮ ಮನೆಮಾಡಿದೆ.

RELATED ARTICLES

Latest News