ಬೆಂಗಳೂರು,ಅ.27-ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಆರೋಗ್ಯದಲ್ಲಿ ಏರುಪೇರಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರ್ನಾಟಕ ಬ್ಯಾಡಿಂಟನ್ ಅಸೋಸಿಯೇಷನ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿದ ಕೂಡಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಯು.ಟಿ.ಖಾದರ್, ಪ್ರಿಯಾಂಕ್ ಖರ್ಗೆ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಮೇಶ್ವರ್ ಅವರ ಆರೋಗ್ಯ ವಿಚಾರಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಸಚಿವ ಯು.ಟಿ.ಖಾದರ್, ಡಿಸಿಎಂ ಪರಮೇಶ್ವರ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ತೊಂದರೆ ಇಲ್ಲ. ಆತಂಕಪಡುವ ಅಗತ್ಯವಿಲ್ಲ ಎಂದು ಮಾಹಿತಿ ನೀಡಿದರು.
