Sunday, April 12, 2026
Homeರಾಜ್ಯಹಿಂದಿ ಭಾಷೆ ಕೈಬಿಡುವ ನಿರ್ಧಾರ ಆಘಾತಕಾರಿ : ಬಿ.ವೈ.ವಿಜಯೇಂದ್ರ

ಹಿಂದಿ ಭಾಷೆ ಕೈಬಿಡುವ ನಿರ್ಧಾರ ಆಘಾತಕಾರಿ : ಬಿ.ವೈ.ವಿಜಯೇಂದ್ರ

Decision to drop Hindi language is shocking: B.Y. Vijayendra

ಬೆಂಗಳೂರು,ಮಾ.28- ಕೇವಲ ರಾಜಕೀಯ ವಿರೋಧಕ್ಕಾಗಿ, ಕೇಂದ್ರ ಸರಕಾರದ ಮೇಲಿನ ದ್ವೇಷಕ್ಕಾಗಿ ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ ಆಡುತ್ತಿರುವ ರಾಜ್ಯ ಸರ್ಕಾರದ ತೀರ್ಮಾನ ವಿವೇಕ ರಹಿತ ಹಾಗೂ ಆಘಾತಕಾರಿ ಎಂದು ಬಿಜೆಪಿ ಹೇಳಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಏಕಾಏಕಿ ಹಿಂದಿ ಭಾಷೆ ಕೈ ಬಿಡುವ ನಿಲುವು ತೆಗೆದುಕೊಂಡಿರುವುದು ಆಘಾತಕಾರಿ ಬೆಳವಣಿಗೆ. ಅದರಲ್ಲೂ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲಿ ಸರ್ಕಾರದ ಹಠಾತ್‌ ನಿಲುವು ವಿದ್ಯಾರ್ಥಿಗಳಲ್ಲಿ ಗೊಂದಲಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ಕಳೆದ ಹಲವು ದಶಕಗಳಿಂದ ದೇಶದಲ್ಲೇ ಮಾದರಿ ಶಿಕ್ಷಣದಲ್ಲಿ ತ್ರಿಭಾಷಾ ನೀತಿ ಹೊಂದಿರುವ ಕರ್ನಾಟಕದಲ್ಲಿ ಯಾವುದೇ ಪೂರ್ವಾಪರ ಚರ್ಚೆ, ಶಿಕ್ಷಣ ತಜ್ಞರ ಸಲಹೆ, ಪ್ರತಿಪಕ್ಷಗಳ ನಿಲುವು ಯಾವುದನ್ನು ಪರಿಗಣನೆಗೆ ತೆಗೆದುಕೊಳ್ಳದೆ ಏಕಾಏಕಿ ಹಿಂದಿ ಭಾಷೆ ಕೈ ಬಿಡುವ ನಿಲುವು ತೆಗೆದುಕೊಂಡಿರುವುದು ಆಘಾತಕಾರಿ ಬೆಳವಣಿಗೆ ಎಂದಿದ್ದಾರೆ.

ನಾವು ಕನ್ನಡ ಭಾಷೆಯಲ್ಲಿ ಕಲಿಕೆಗೆ ವಿರೋಧ ವ್ಯಕ್ತಪಡಿಸುತ್ತಿಲ್ಲ. ಕನ್ನಡ ನಮ ಮಾತೃಭಾಷೆ. ಕನ್ನಡವು ನಮ ಬೋಧನಾ ಭಾಷೆಯಾಗಿ ಜಾಗತಿಕ ದೃಷ್ಟಿಕೋನದಿಂದ ಇಂಗ್ಲಿಷ್‌ ಕಲಿಕೆಗೂ ನಮ ಅಭ್ಯಂತರವಿಲ್ಲ. ಹಾಗೆಯೇ ಕನ್ನಡಿಗರು ದೇಶದ ಅನೇಕ ರಾಜ್ಯಗಳಿಗೆ ಉದ್ಯೋಗ ಅರಸಿ ಹೋದಾಗ ಕನಿಷ್ಠಮಟ್ಟದ ಹಿಂದಿ ಭಾಷಾ ಜ್ಞಾನ ಇರಬೇಕಾಗುತ್ತದೆ. ಕೇಂದ್ರ ಸರಕಾರದ ಉದ್ಯೋಗಗಳಿಗೆ ಸೇರ್ಪಡೆಗೊಳ್ಳುವ ಕರ್ನಾಟಕದ ಯುವ ಸಮೂಹವು ರಾಷ್ಟ್ರಮಟ್ಟದಲ್ಲಿ ಹಿಂದೆ ಬೀಳಬಾರದು ಎಂಬ ಕಾಳಜಿ ನಮದು ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಹಲವು ವರ್ಷಗಳಿಂದ ಅನುಸರಿಸಲಾಗುತ್ತಿರುವ ತ್ರಿಭಾಷಾ ಸೂತ್ರವೂ ಕನ್ನಡವನ್ನು ಅಸಿತೆಯಾಗಿ, ಇಂಗ್ಲಿಷ್‌ನ್ನು ಸಂವಹನ ಭಾಷೆಯಾಗಿ ಹಾಗೂ ಹಿಂದಿಯನ್ನು ರಾಷ್ಟ್ರೀಯ ದೃಷ್ಟಿಕೋನದಿಂದ ನೋಡಲಾಗುತ್ತಿದೆ. ಆದಾಗ್ಯೂ ಹಿಂದಿ ಭಾಷೆಯನ್ನು ಕೈಬಿಡುವುದಾದರೆ ಇದರ ಬಗೆಗೆ ಭಾಷಾ ತಜ್ಞರು, ಶಿಕ್ಷಣ ತಜ್ಞರು, ಎಲ್ಲ ಭಾಷೆಯ ಸಾಹಿತಿಗಳು ಸೇರಿದಂತೆ ಸಾರ್ವಜನಿಕವಾಗಿ ವ್ಯಾಪಕ ಚರ್ಚೆ ನಡೆಸುವ ಅಗತ್ಯವಿದೆ ಎಂದಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಂಕಗಳನ್ನು 625ಕ್ಕೆ ಬದಲಿಗೆ 525 ಅಂಕಗಳಿಗೆ ಇಳಿಕೆ ಮಾಡಲಾಗಿದೆ. ಹಿಂದಿ ಸೇರಿ ತೃತೀಯ ಭಾಷೆಗಳ ಅಂಕಗಳಿಗೆ ಕೊಕ್‌ ನೀಡಲಾಗಿದ್ದು, ಹಿಂದಿನ ವರ್ಷಗಳಂತೆ ಅವರು 100 ಅಂಕಗಳಿಗೆ ಪರೀಕ್ಷೆ ಬರೆಯಲಿದ್ದಾರೆ. ಅಂಕಪಟ್ಟಿಯಲ್ಲಿ ಗ್ರೇಡ್‌ ಎಂದು ನಮೂದಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದರು.

RELATED ARTICLES

Latest News