Tuesday, April 14, 2026
Homeರಾಜ್ಯಡಿಜಿಪಿ ರಾಮಚಂದ್ರರಾವ್‌ ವಿಡಿಯೋ ಅಸಲಿ..!

ಡಿಜಿಪಿ ರಾಮಚಂದ್ರರಾವ್‌ ವಿಡಿಯೋ ಅಸಲಿ..!

DGP Ramachandra Rao video is genuine..!

ಬೆಂಗಳೂರು,ಮಾ.20- ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗಲೇ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿರುವ, ಅಮಾನತುಗೊಂಡಿರುವ ಹಿರಿಯ ಐಪಿಎಸ್‌‍ ಅಧಿಕಾರಿ ಹಾಗೂ ಡಿಜಿಪಿ ಕೆ.ರಾಮಚಂದ್ರ ರಾವ್‌ ಅವರ ವೈರಲ್‌ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತಿರುವೊಂದು ಎದುರಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಈ ವಿಡಿಯೋಗಳು ಸಂಪೂರ್ಣವಾಗಿ ನಿಜವಾಗಿದ್ದು, ಅವು ಯಾವುದೇ ರೀತಿಯ ಡೀಪ್‌ಫೇಕ್‌, ಕೃತಕ ಬುದ್ಧಿಮತ್ತೆ ನಿರ್ಮಿತ ಅಥವಾ ಎಡಿಟ್‌ ಮಾಡಲಾದ ದೃಶ್ಯಗಳಲ್ಲ ಎಂಬುದು ಇದೀಗ ಅಧಿಕೃತವಾಗಿ ದೃಢಪಟ್ಟಿದೆ. ಈ ಮೂಲಕ ನಿವೃತ್ತಿಯ ಅಂಚಿನಲ್ಲಿರುವ ಹಿರಿಯ ಪೊಲೀಸ್‌‍ ಅಧಿಕಾರಿಗೆ ತೀವ್ರ ಕಾನೂನಿನ ಸಂಕಷ್ಟ ಎದುರಾಗಿದೆ.

ರಾಜ್ಯ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಈ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಲು ರಾಜ್ಯ ಸರ್ಕಾರವು ಹೆಚ್ಚುವರಿ ಪೊಲೀಸ್‌‍ ಮಹಾನಿರ್ದೇಶಕ ಆರ್‌. ಹಿತೇಂದ್ರ ಅವರ ನೇತೃತ್ವದಲ್ಲಿ ನಾಲ್ವರು ಐಪಿಎಸ್‌‍ ಅಧಿಕಾರಿಗಳ ವಿಶೇಷ ತನಿಖಾ ತಂಡವನ್ನು ರಚಿಸಿತ್ತು.

ಇದೀಗ ಈ ಉನ್ನತ ಮಟ್ಟದ ಸಮಿತಿಯು ಸರ್ಕಾರಕ್ಕೆ ಬರೋಬ್ಬರಿ 100 ಪುಟಗಳ ಸಮಗ್ರ ವರದಿಯನ್ನು ಸಲ್ಲಿಸಿದ್ದು, ವಿಡಿಯೋ ಅಸಲಿಯತ್ತನ್ನು ಸಂಪೂರ್ಣವಾಗಿ ಬಯಲು ಮಾಡಿದೆ.

RELATED ARTICLES

Latest News