Thursday, April 16, 2026
Homeರಾಜ್ಯ12 ಪುಟಗಳ ಡೆತ್‌ನೋಟ್‌ ಬರೆದಿಟ್ಟಿದ್ದಾರಾ ಉದ್ಯಮಿ ರಾಯ್‌..?

12 ಪುಟಗಳ ಡೆತ್‌ನೋಟ್‌ ಬರೆದಿಟ್ಟಿದ್ದಾರಾ ಉದ್ಯಮಿ ರಾಯ್‌..?

Did businessman Roy write a 12-page death note?

ಬೆಂಗಳೂರು,ಫೆ.4- ಉದ್ಯಮಿ ರಾಯ್‌ ಅವರು ಆತಹತ್ಯೆಗೂ ಮುನ್ನ 12 ಪುಟಗಳ ಡೆತ್‌ನೋಟ್‌ ಬರೆದಿಟ್ಟಿದ್ದಾರೆಂದು ಹೇಳಲಾಗುತ್ತಿದೆ.ಆ ಡೆತ್‌ನೋಟ್‌ನಲ್ಲಿ ನಾನು ಜೀವನದಲ್ಲಿ ದುಡುಕಿನ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ ನನ್ನನ್ನು ಕ್ಷಮಿಸಿ. ತಮ ವ್ಯವಹಾರಗಳನ್ನು ಹಾಗೂ ವಯಕ್ತಿಕ ವಿಚಾರಗಳ ಬಗ್ಗೆ ಬರೆದಿದ್ದಾರೆನ್ನಲಾಗಿದೆ.

ತಮ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಉದ್ಯೋಗದಿಂದ ತೆಗೆದು ಹಾಕಬಾರದು ಎಂದು ಪತ್ರದಲ್ಲಿ ಉಲ್ಲೇಖಿಸಿ ಕುಟುಂಬದವರಿಗೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ವಯಕ್ತಿಕವಾಗಿ ನಾನು ಮಾನಸಿಕವಾಗಿ ನೊಂದಿದ್ದೇನೆ, ಖಿನ್ನತೆಗೆ ಒಳಗಾಗಿದ್ದೇನೆ ಹಾಗಾಗಿ ನಾನು ಈ ದುಡುಕಿನ ನಿರ್ಧಾರ ಕೈಗೊಂಡಿದ್ದೇನೆ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.

ತಮ ಕಂಪನಿಯನ್ನು ಯಾರು ಮುಂದುವರೆಸಬೇಕು, ಯಾರೆಲ್ಲಾ ಉಸ್ತುವಾರಿ ವಹಿಸಬೇಕು, ಯಾರಿಂದ ಎಷ್ಟು ಹಣ ಬರಬೇಕು ಎಂಬ ಬಗ್ಗೆಯೂ ಆತಹತ್ಯೆಗೂ ಮುನ್ನ ಅವರು ಪತ್ರದಲ್ಲಿ ನಮೂದಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಇದುವರೆಗೂ ಯಾವುದೇ ಡೆತ್‌ನೋಟ್‌ ಸಿಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎಸ್‌‍ಐಟಿ ತನಿಖೆ ನಡೆಸುತ್ತಿದೆ. ಅದರ ವರದಿ ಇನ್ನೂ ಬಂದಿಲ್ಲ. ಆ ವರದಿ ಬಂದ ನಂತರವಷ್ಟೇ ಮತ್ತಷ್ಟು ಮಾಹಿತಿಗಳು ಲಭ್ಯವಾಗಲಿವೆ. ವಿವಿಧ ದೃಷ್ಟಿಕೋನಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಈಗಾಗಲೇ ಐಟಿ ಅಧಿಕಾರಿಗಳನ್ನು ಎಸ್‌‍ಐಟಿ ವಿಚಾರಣೆ ನಡೆಸಿ ಹೇಳಿಕೆಗಳನ್ನು ಪಡೆದುಕೊಂಡಿದೆ. ಆ ಆಧಾರದಲ್ಲಿಯೂ ತನಿಖೆ ನಡೆಯುತ್ತಿದೆ ಎಂದು ಆಯುಕ್ತರು ತಿಳಿಸಿದರು.

RELATED ARTICLES

Latest News